ಕರೈ: ಮರ ಬಿದ್ದು ಸಂಚಾರ ಅಸ್ತವ್ಯಸ್ತ
Team Udayavani, Jul 6, 2017, 3:45 AM IST
ವಿಟ್ಲ : ಕೊಳ್ನಾಡು ಗ್ರಾಮದ ವಿಟ್ಲ-ಸಾಲೆತ್ತೂರು ರಸ್ತೆಯ ಕರೈಯಲ್ಲಿ ಜು.4ರಂದು ತಡರಾತ್ರಿ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿದ ಪರಿಣಾಮ ಕೆಲಗಂಟೆಗಳ ಕಾಲ ಮುಖ್ಯ ಹೆದ್ದಾರಿಯ ಸಂಪರ್ಕ ಸ್ಥಗಿತಗೊಂಡು ಸಾರ್ವಜನಿಕರು ಪರದಾಡಿದ ಘಟನೆ ಸಂಭವಿಸಿದೆ.
ಮಾರ್ನಬೆ„ಲ್ನಿಂದ ಮಂಚಿ, ಕೊಳ್ನಾಡು ಸಾಲೆತ್ತೂರು, ವಿಟ್ಲ, ಕಬಕ ಸಂಪರ್ಕಿಸುವ ರಾಜ್ಯ ಹೆದ್ದಾರಿ 18ರ ಕರೈ ಎಂಬಲ್ಲಿ ರಸ್ತೆ ಬದಿಯಲ್ಲಿರುವ ಬೃಹತ್ ಗಾತ್ರದ ದೇವದಾರು ಮರ ತಡರಾತ್ರಿ 3 ಗಂಟೆಯ ಸುಮಾರಿಗೆ ರಸ್ತೆಗೆ ಉರುಳಿಬಿದ್ದಿತ್ತು. ವಿದ್ಯುತ್ ತಂತಿಗೂ ಹಾನಿಯಾಗಿತ್ತು. ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ವಿಟ್ಲ, ಸಾಲೆತ್ತೂರು, ಮಂಚಿ, ಕುಕ್ಕಾಜೆ, ಮಂಗಳೂರು ಕಡೆಗೆ ತೆರಳುವ ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದವು. ಬಳಿಕ ಅನಿವಾರ್ಯವಾಗಿ ಬೇರೆ ರಸ್ತೆ ಮೂಲಕ ವಾಹನಗಳು ಸಂಚರಿಸಬೇಕಾಯಿತು.
ಮಾಹಿತಿ ಪಡೆದ ಸಾರ್ವಜನಿಕರು, ಮೆಸ್ಕಾಂ ಅಧಿಕಾರಿಗಳು, ಸ್ಥಳೀಯ ಹೆಲ್ಪಿಂಗ್ ಹ್ಯಾಂಡ್ ಟ್ರಸ್ಟ್ ಕರೈ ಇದರ ಸದಸ್ಯರು ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಳಗ್ಗೆ ಎಂಟು ಗಂಟೆ ವೇಳೆಗೆ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.