ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಸಸಿ: ಶಾಮನೂರು ಶಿವಶಂಕರಪ್ಪ


Team Udayavani, Jul 6, 2017, 8:24 AM IST

DV-1.jpg

ದಾವಣಗೆರೆ: ಮೊಟ್ಟ ಮೊದಲ ಬಾರಿಗೆ ಸಾರ್ವಜನಿಕರಿಗೆ ಅತಿ ಕಡಮೆ ದರದಲ್ಲಿ ಸಸಿಗಳನ್ನು ವಿತರಿಸಲಾಗುತ್ತಿದ್ದು, ಈ ಅವಕಾಶ ಸದುಪಯೋಗ ಪಡೆದುಕೊಳ್ಳಬೇಕು ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ವೇದಮೂರ್ತಿ ಮನವಿ ಮಾಡಿದ್ದಾರೆ.

ಬುಧವಾರ ಪಿಬಿ ರಸ್ತೆಯಲ್ಲಿನ ತೋಟಗಾರಿಕಾ ಇಲಾಖೆ ಕಚೇರಿ ಆವರಣದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಸಸ್ಯ ಸಂತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆ ಆವರಣದಲ್ಲಿ ಜುಲೆ„ 15ರ ವರೆಗೆ ಹತ್ತು ದಿನಗಳ ಕಾಲ ಆಯೋಜಿಸಿರುವ ಸಸ್ಯ ಸಂತೆಯಲ್ಲಿ ಎಲ್ಲರೂ ಗಿಡಗಳನ್ನು ತೆಗೆದುಕೊಂಡು
ಹೋಗಿ ಬೆಳೆಸಿ ಎಂದರು. ಜಿಲ್ಲೆಯ ಚನ್ನಗಿರಿ ತಾಲೂಕಿನ ಗರಗ, ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು, ಹರಪನಹಳ್ಳಿ ತಾಲ್ಲೂಕಿನ ಕೆ. ಕಲ್ಪನಹಳ್ಳಿ, ದಾವಣಗೆರೆಯ ಆವರಗೊಳ್ಳ, ಹರಿಹರ ತಾಲ್ಲೂಕಿನ ಬುಳ್ಳಾಪುರ, ಜಗಳೂರು  ತಾಲೂಕಿನ ವ್ಯಾಸಗೊಂಡನಹಳ್ಳಿ ಸೇರಿದಂತೆ ಒಟ್ಟು 9 ತೋಟಗಾರಿಕೆ ಕ್ಷೇತ್ರದ 3 ನರ್ಸರಿ ಸೇರಿ ಒಟ್ಟು 375 ಎಕರೆ ವಿಸ್ತೀರ್ಣದಲ್ಲಿ ಸಸಿ ಬೆಳೆಸಲಾಗಿದೆ. ಕ್ಷೇತ್ರ ಹಾಗೂ ನರ್ಸರಿಗಳಲ್ಲಿ ಬೆಳೆಸಲಾಗಿರುವ ಉತ್ತಮ ಗುಣಮಟ್ಟದ ತೆಂಗು, ಮಾವು, ಸಪೋಟ, ನಿಂಬೆ, ಕರಿಬೇವು, ನುಗ್ಗೆ ಹಾಗೂ ಅಲಂಕಾರಿಕ ಸಸಿ/ಕಸಿಗಳನ್ನು ನಗರವಾಸಿಗಳಿಗೆ ಅತ್ಯಂತ ಕಡಿಮೆ ದರದಲ್ಲಿ ಪೂರೈಸಲಾಗುತ್ತಿದೆ ಎಂದು ಅವರು ತಿಳಿಸಿದರು.

ನಗರದ ಆರ್‌ಎಂಸಿ ಯಾರ್ಡ್‌ನಲ್ಲಿ ಜೈವಿಕ ಕೇಂದ್ರ ಪ್ರಾರಂಭಿಸಲಾಗುತ್ತಿದ್ದು, ಈ ವರ್ಷಾಂತ್ಯದಲ್ಲಿ ಕೇಂದ್ರದ ಕಾಮಗಾರಿ
ಪೂರ್ಣಗೊಳ್ಳಬಹುದು. ಈ ಕೇಂದ್ರದಲ್ಲಿ ಅಂಗಾಂಶ ಬಾಳೆ ಸಸಿ, ರೈತರ ಬೇಡಿಕೆಗೆ ಅನುಗುಣವಾಗಿ ಅಂಗಾಂಶ ದಾಳಿಂಬೆ ಸಸಿ, ಜೈವಿಕ ಗೊಬ್ಬರ ತಯಾರಿಸಲಾಗುವುದು ಎಂದು  ಅವರು ಹೇಳಿದರು. ಬರದ ಹಿನ್ನೆಲೆಯಲ್ಲಿ ಪ್ರಸ್ತುತ ಒಣ ತೋಟಗಾರಿಕೆಗೆ ಒತ್ತು ನೀಡಲಾಗುತ್ತಿದೆ. ಸೀಬೆ, ನೇರಳೆ, ಸಪೋಟ, ಬೇಲದ ಹಣ್ಣು, ಹುಣಸೆ ಇವುಗಳು ಮಳೆ ಇಲ್ಲದಿದ್ದರೂ ಉಳಿಯುವಂತಹ ಬೆಳೆಗಳಾಗಿದ್ದು ಇವುಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಮಾವಿನ ಫಸಲು ಈ ಬಾರಿ ಕಡಿಮೆ ಇದೆ. ಮುಂದಿನ ಮಾರ್ಚ್‌ನಲ್ಲಿ ಮಾವು ಮೇಳ ನಡೆಸುವ ಯೋಜನೆ ಇದೆ. ಮಾವು ಮಾಗಿಸುವ ಘಟಕಗಳನ್ನು ಸ್ಥಾಪಿಸಲು ರೈತರಿಗೆ ಶೇ.30ರ ಸಬ್ಸಿಡಿ ನೀಡಲಾಗುವುದು ಹಾಗೂ ಮಾವಿನ 
ಪುನಶ್ಚೇತನಕ್ಕೆ ಒಂದು ಹೆಕ್ಟೇರ್‌ಗೆ ಇಪ್ಪತ್ತು ಸಾವಿರದಂತೆ ಪ್ರೋತ್ಸಾಹಧನ ನೀಡಲಾಗುವುದು ಎಂದರು.

ಹವಾಮಾನ ಆಧಾರಿತ ತೋಟಗಾರಿಕಾ ಬೆಳೆವಿಮೆಯಡಿ 4600 ರೈತರು 6 ಕೋಟಿಯಷ್ಟು ವಿಮೆ ಕಟ್ಟಿದ್ದು, ವಿಮಾ ಕಂಪೆನಿಯಿಂದ 15 ಕೋಟಿ ಹಣ ಪಾವತಿಗೆ ನಿಗದಿಯಾಗಿದೆ. ಆದರೆ ವಿಮಾ ಕಂಪೆನಿ ಕಡೆಯಿಂದ ಹಣ ಬಿಡುಗಡೆ
ತಡವಾಗುತ್ತಿದೆ. ಈ ಕುರಿತು ಇಂದು ಜಿಲ್ಲಾ ಉಸ್ತುವಾರಿ ಸಚಿವರು ವಿಮಾ ಕಂಪೆನಿಯೊಂದಿಗೆ ಮಾತುಕತೆ ನಡೆಸಿ, ಶೀಘ್ರದಲ್ಲೇ ರೈತರ ಖಾತೆಗೆ ಬೆಳೆವಿಮೆ ಹಣ ಪಾವತಿಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.