ಅಂಧ ಮಕ್ಕಳು-ವೃದ್ಧರೊಂದಿಗೆ ಜಿ.ಎಂ. ಸಿದ್ದೇಶ್ವರ್ ಜನ್ಮದಿನದ ಸಂಭ್ರಮ
Team Udayavani, Jul 6, 2017, 9:20 AM IST
ದಾವಣಗೆರೆ: ಸಂಸದ ಜಿ.ಎಂ. ಸಿದ್ದೇಶ್ವರ್ ಬುಧವಾರ ವಿವಿಧ ಕಾರ್ಯಕ್ರಮಗಳಲ್ಲಿಭಾಗಿಯಾಗುವ ಮೂಲಕ ತಮ್ಮ 65ನೇ ಜನ್ಮದಿನ ಆಚರಿಸಿಕೊಂಡರು.
ಜನ್ಮದಿನದ ನಿಮಿತ್ತ ಮಾಯಕೊಂಡ ಗ್ರಾಮದ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ
ಶಿಬಿರಕ್ಕೆ ಚಾಲನೆ ನೀಡಿದರು. ನಂತರ ವಿವೇಕಾನಂದ ವೃದ್ಧಾಶ್ರಮದ ಆಶ್ರಿತರೊಂದಿಗೆ ಉಪಾಹಾರ ಸೇವಿಸುವ
ಜತೆಗೆ ಅವರ ಸಮಸ್ಯೆ ಆಲಿಸಿದರು. ಮಾಯಕೊಂಡದಿಂದ ದಾವಣಗೆರೆ ಗೆ ಆಗಮಿಸಿ, 41ನೇ ವಾರ್ಡ್‌ನ
ಶ್ರೀರಾಮನಗರದ ಸರ್ಕಾರಿ ಬಾಲಕಿಯರ ಮಂದಿರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಸಿ ನೆಟ್ಟರು. ಪರಿಸರ ಸಂರಕ್ಷಣೆಗೆ ಸರ್ವರೂ ಮುಂದಾಗಬೇಕು ಎಂದರು.
ಶ್ರೀರಾಮನಗರದ ಸರ್ಕಾರಿ ಬಾಲಕಿಯರ ಮಂದಿರದಲ್ಲಿ ತಮ್ಮ ಅನುದಾನದಲ್ಲಿ ನೀಡಿರುವ ಕಂಪ್ಯೂಟರ್, ಹೊಲಿಗೆ ಯಂತ್ರಗಳ ಉದ್ಘಾಟನೆ ನೆರವೇರಿಸಿದರು. ಬಾಲಕಿಯರ ಮಂದಿರದ ನಿವಾಸಿಗಳೊಂದಿಗೆ ಚರ್ಚಿಸಿದರು. ಅನಾಥ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಜನ್ಮದಿನ ಆಚರಿಸಿಕೊಂಡರು. ವಿದ್ಯಾನಗರ ಪಾರ್ಕ್ ಬಳಿ ಟೀಮ್ ಸ್ವತ್ಛಭಾರತ್ ವತಿಯಿಂದ ಹಮ್ಮಿಕೊಂಡಿರುವ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಗರ ದೇವತೆ ಶ್ರೀ ದುರ್ಗಾಂಬಿಕ
ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸರ್ಕಾರಿ ಅಂಧಮಕ್ಕಳ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ,
ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಳೆದ ಆರು ವರ್ಷದಿಂದ ಅಂಧ ಮಕ್ಕಳೊಂದಿಗೆ ಜನ್ಮದಿನ
ಆಚರಿಸಿಕೊಳ್ಳುತ್ತಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ ಎಂದರು.
ಅಂಧ ಮಕ್ಳಳ ಶಾಲೆಗೆ ತಮ್ಮ ಅನುದಾನದಲ್ಲಿ ಸೌಲಭ್ಯ ಒದಗಿಸಲಾಗಿದೆ. ಇನ್ಮುಂದೆ ಇಲ್ಲಿಯೇ ಜನ್ಮದಿನ
ಆಚರಿಸಿಕೊಳ್ಳುವ ಜತೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದರು. ನಾಲ್ವರು ಮಹಿಳೆಯರು ಸೇರಿದಂತೆ
65 ಜನರು ರಕ್ತದಾನ ಮಾಡಿದರು. ಅಂಧ ಮಕ್ಕಳಿಗೆ ಸಮವಸ್ತ್ರ ವಿತರಿಸಲಾಯಿತು. ಐಎಎಸ್‌ನಲ್ಲಿ ರಾಜ್ಯಕ್ಕೆ 4 ನೇ ರ್‍ಯಾಂಕ್ ಪಡೆದಿರುವ ಧ್ಯಾನ್‌ಚಂದ್‌ರನ್ನು ಸನ್ಮಾನಿಸಲಾಯಿತು. ದೊಡ್ಡಬಾತಿ ಗ್ರಾಮದ ತಪೋವನದ ಬಳಿ ಇರುವ
ವೃದ್ದಾಶ್ರಮಕ್ಕೆ ಭೇಟಿ ನೀಡಿದರು.
ಜಿಎಂಐಟಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ, ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಜಾಧವ್, ಜಿಪಂ ಅಧ್ಯಕ್ಷೆ ಉಮಾ ಎಂ.ಪಿ. ರಮೇಶ್, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕರಾದ ಬಿ.ಪಿ. ಹರೀಶ್, ಮಾಡಾಳ್ ವಿರುಪಾಕ್ಷಪ್ಪ, ಎಸ್.ವಿ. ರಾಮಚಂದ್ರ, ವಿವಿಧ ಮುಖಂಡರು, ಸಿದ್ದೇಶ್ವರ್ ಪತ್ನಿ ಗಾಯತ್ರಿ ಸಿದ್ದೇಶ್ವರ್, ಪುತ್ರಿ ಅಶ್ವಿನಿ ಶ್ರೀನಿವಾಸ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.