ಇಂದು ಕಾಂಗ್ರೆಸ್ ಸಮಾವೇಶ : ಸಿಎಂ ಸಹಿತ ಪಕ್ಷದ ಪ್ರಮುಖರು ಭಾಗಿ
Team Udayavani, Jul 7, 2017, 3:15 AM IST
ಮಂಗಳೂರು: ಕಾಂಗ್ರೆಸ್ ವತಿಯಿಂದ ಶುಕ್ರವಾರ ಜರಗಲಿರುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಪಕ್ಷದ ಚುನಾಯಿತ ಪ್ರತಿನಿಧಿಗಳು, ಕಳೆದ ಚುನಾವಣೆಗಳಲ್ಲಿ ಪಕ್ಷದ ವತಿಯಿಂದ ಸ್ಪರ್ಧಿಸಿ ಪರಾಜಿತರಾದ ಅಭ್ಯರ್ಥಿಗಳು, ಕಾರ್ಯಕರ್ತರನ್ನೊಳಗೊಂಡ ವಿಭಾಗೀಯ ಮಟ್ಟದ ಬೃಹತ್ ಸಮಾವೇಶ ನಗರದ ಹೊರವಲಯದ ಅಡ್ಯಾರ್ ಗಾರ್ಡನ್ನಲ್ಲಿ ಮಧ್ಯಾಹ್ನ 2 ಗಂಟೆಗೆ ಜರಗಲಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.
ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ| ಪರಮೇಶ್ವರ್, ಕೆಪಿಸಿಸಿ ಕರ್ನಾಟಕ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಎಐಸಿಸಿ ಉಸ್ತುವಾರಿ ವಿಷ್ಣುದಾಸ್, ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂರಾವ್, ಎಸ್.ಆರ್. ಪಾಟೀಲ್, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಆಸ್ಕರ್ ಫೆರ್ನಾಂಡಿಸ್, ಡಾ| ಎಂ. ವೀರಪ್ಪ ಮೊಯಿಲಿ, ಬಿ. ಜನಾರ್ದನ ಪೂಜಾರಿ ಮುಂತಾದ ನಾಯಕರು ಭಾಗವಹಿಸುವರು ಎಂದು ಅವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಮಾತನಾಡಿ, ಸಮಾವೇಶ ಯಶಸ್ವಿಯಾಗಿ ನಡೆಯಲಿದೆ. ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಪಕ್ಷದ ಬೆಳವಣಿಗೆಯಲ್ಲಿ ಇದೊಂದು ಪ್ರಮುಖ ಕಾರ್ಯಕ್ರಮವಾಗಿದೆ ಎಂದರು. ಕೆ.ಸಿ. ವೇಣುಗೋಪಾಲ್ ಅವರು ಪಕ್ಷದ ಕರ್ನಾಟಕ ಉಸ್ತುವಾರಿಯಾದ ಬಳಿಕ ಪ್ರಥಮವಾಗಿ ದ.ಕ. ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಶಶಿಧರ ಹೆಗ್ಡೆ, ಯು.ಕೆ. ಮೋನು, ಪಿಯುಸ್ ರೊಡ್ರಿಗಸ್ ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.