ಪೊಲೀಸ್ ಅಧಿಕಾರಿ ಅಮಾನತಿಗೆ ಆಗ್ರಹ
Team Udayavani, Jul 7, 2017, 10:30 AM IST
ವಿಜಯಪುರ: ಹಿರೇಮಸಳಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಆರೋಪಿಗಳ ರಕ್ಷಣೆಗೆ ನಿಂತಿರುವ
ಇಂಡಿ ಗ್ರಾಮೀಣ ಠಾಣೆ ಎಸ್‌ಐ ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿ ಜಂಗಮ ಕ್ಷೇಮಾಭಿವೃದ್ಧಿ
ಮಹಾಸಭಾ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಛೇರಿಗೆ ತೆರಳಿದ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ ಹಿರೇಮಠ, ಕಾರ್ಯದರ್ಶಿ ಸಿದ್ಧರಾಮಯ್ಯ ಸಾವಳಗಿಮಠ, ಕಾರ್ಯಾಧ್ಯಕ್ಷ ಶಿವರುದ್ರಯ್ಯ ಹಿರೇಮಠ ಇವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಸಂಘಟನೆ ಕಾರ್ಯಕರ್ತರು, ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿರುವ ಈ ಅಮಾನವೀಯ ಕೃತ್ಯ ಎಸಗಿದ ಕುರಿತು ದೂರು ನೀಡಲು ಮುಂದಾದ ಸಂತ್ರಸ್ತೆಯ ದೂರು ಸ್ವೀಕರಿಸಿದೇ, ಅವಮಾನ ಕಳಿಸಿದ ಇಂಡಿ ಗ್ರಾಮೀಣ ಠಾಣೆ ಎಸೈ ಶಿವಾನಂದ ಅರೆನಾಡರ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು. ಹೀನಕೃತ್ಯ ಎಸಗಿದ ಎಲ್ಲರನ್ನೂ ಕೂಡಲೇ ಬಂಧಿಸಿ ಗೂಂಡಾ ಕಾಯ್ದೆಯಂತೆ ಪ್ರಕರಣ ದಾಖಲಿಸಬೇಕು. ಕೃತ್ಯ ಎಸಗಿದವರನ್ನು ಗಡಿಪಾರು ಮಾಡಬೇಕು. ಬಾಧಿತ ಮಹಿಳೆಯ ಕುಟುಂಬಕ್ಕೆ ಜೀವ ಬೆದರಿಕೆ
ಇರುವ ಕಾರಣ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದರು.
ಹಲ್ಲೆಗೊಳಗಾದ ಮಹಿಳೆಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಮನವಿ
ಮುದ್ದೇಬಿಹಾಳ: ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದ ಮಹಿಳೆಯ ಮೇಲೆ ಹಲ್ಲೆ ಮಾಡಿದವರನ್ನು ಎರಡು ದಿನದಲ್ಲಿ ಬಂಧಿಸಿ, ಕರ್ತವ್ಯ ನಿರತ ಪೊಲೀಸರನ್ನು ಕೂಡಲೇ ವಜಾಗೊಳಿಸಿ ಹಲ್ಲೆಗೊಳಗಾದ ಮಹಿಳೆಗೆ ಸರಕಾರದಿಂದ ಪರಿಹಾರ ಧನ ನೀಡುವಂತೆ ಆಗ್ರಹಿಸಿ ಪ್ರಕೃತಿ ಮಹಿಳಾ ಸ್ವ-ಸಹಾಯ ಸಂಘದ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಮಹಿಳೆಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಖಂಡನೀಯ. ಇದರಿಂದ ಸಮಾಜದಲ್ಲಿ ಮಹಿಳೆಗೆ ಯಾವುದೇ
ರಕ್ಷಣೆ ಇಲ್ಲದಂತಾಗಿದ್ದು ದುಷ್ಕರ್ಮಿಗಳನ್ನು ಬಂಧಿಸಿ ಗಲ್ಲು ಶಿಕ್ಷಗೆ ಒಳಪಡಿಸಬೇಕು. ಕರ್ತವ್ಯ ನಿರತ ಪೊಲೀಸರನ್ನು
ವಜಾಗೊಳಿಸಿ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸರಕಾರದಿಂದ
5 ಲಕ್ಷ ರೂ. ಪರಿಹಾರ ಧನ ಒದಗಿಸಬೇಕು. ಎರಡು ದಿನದಲ್ಲಿ ಬೇಡಿಕೆ ಈಡೇರಿಸದಿದ್ದರೆ ಪ್ರಕೃತಿ ಮಹಿಳಾ ಸಂಘ ಉಗ್ರ ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.
ಸಂಘದ ಪದಾಧಿಕಾರಿಗಳಾದ ಗೌರಮ್ಮ ಹುನಗುಂದ, ಎನ್.ಎಂ.ಕೋಲಾರ, ಸಾವಿತ್ರಿ ಬಡಿಗೇರ, ಭಾಗಿರಥಿ ಹೂಗಾರ, ಸಿ.ಬಿ.ಕಟ್ಟಿಮನಿ, ಯಮನಮ್ಮ ಬಜಂತ್ರಿ, ದ್ಯಾಮವ್ವ ತಖವಾರ, ಮಲ್ಲಮ್ಮ ಕುಂಬಾರ, ದುರಗವ್ವ ಬಜಂತ್ರಿ, ಗುರವ್ವ ಚಲವಾದಿ, ಕರವೇ ಯುವಸೈನ್ಯ ತಾಲೂಕು ಅಧ್ಯಕ್ಷ ಮಾರುತಿ ಹಿಪ್ಪರಗಿ, ಪಿ.ಎಸ್.ಪಾಟೀಲ, ಮುತ್ತುಗೌಡ ಪಾಟೀಲ, ಬಸವರಾಜ ಹುರಕಡ್ಲಿ, ಮಹಾಂತೇಶ ಸಂಗಾರೆಡ್ಡಿ, ಜಿ.ಹಗನಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.