ಟೋಲ್ ಶುಲ್ಕ ಏರಿಸಿದ ನೈಸ್ ವಿರುದ್ಧ ಕ್ರಮ: ಜಯಚಂದ್ರ
Team Udayavani, Jul 7, 2017, 11:14 AM IST
ಬೆಂಗಳೂರು: ನೈಸ್ ರಸ್ತೆಯಲ್ಲಿ ಟೋಲ್ ಶುಲ್ಕವನ್ನು ಶೇ.20ರಷ್ಟು ಹೆಚ್ಚಿಸಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ನೈಸ್ ಸಂಸ್ಥೆ ಟೋಲ್ ಶುಲ್ಕ ಹೆಚ್ಚಿಸುವ ಕುರಿತು ಸರ್ಕಾರದೊಂದಿಗೆ ಚರ್ಚಿಸದೆ ಏಕಪಕ್ಷೀಯ ನಿರ್ಧಾರ ಕೈಗೊಂಡು ಅಧಿಸೂಚನೆ ಜಾರಿಗೊಳಿಸಿದೆ. ಅಲ್ಲದೆ ಹೆಚ್ಚುವರಿ ಟೋಲ್ ಸಂಗ್ರಹ ಕೂಡ ಆರಂಭಿಸಿರುವುದು ಸರಿಯಲ್ಲ. ತಾಂತ್ರಿಕವಾಗಿ ನೈಸ್ ರಸ್ತೆ ಈಗಲೂ ಸುವ್ಯವಸ್ಥಿತವಾಗಿಲ್ಲ. ಹಾಗಾಗಿ ಶುಲ್ಕ ಏರಿಕೆಗೆ ನಾವು ಅನುಮತಿ ನೀಡಿಲ್ಲ ಎಂದು ಹೇಳಿದರು.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಅಧಿಸೂಚನೆ ಇಲ್ಲದೆ ನೈಸ್ ಸಂಸ್ಥೆ ಟೋಲ್ ದರ ಹೆಚ್ಚಿಸಿರುವುದು ಕಾನೂನು ಬಾಹಿರ. ಹೀಗಾಗಿ ಸಂಸ್ಥೆ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ನೈಸ್ ರಸ್ತೆಗೆ ಸಂಬಂಧಿಸಿದಂತೆ ಸಚಿವ ಜಯಚಂದ್ರ ನೇತೃತ್ವದ ಸದನ ಸಮಿತಿ ಈ ಹಿಂದೆ ವರದಿ ನೀಡಿದ್ದು, ಅದರಲ್ಲಿ ಅನೇಕ ಅಕ್ರಮಗಳನ್ನು ಪತ್ತೆಹಚ್ಚಲಾಗಿತ್ತು.
ಅಲ್ಲದೆ, ನೈಸ್ ರಸ್ತೆ ಟೋಲ್ ಸಂಗ್ರಹಿಸುತ್ತಿರುವುದು ಕಾನೂನು ಬಾಹಿರ ಎಂದು ಹೇಳಲಾಗಿತ್ತು. ಆದರೆ, ಸರ್ಕಾರ ಈ ವರದಿ ಬಗ್ಗೆ ಇದುವರೆಗೆ ಕ್ರಮ ಕೈಗೊಂಡಿಲ್ಲ. ಬದಲಾಗಿ ಸದನ ಸಮಿತಿ ವರದಿ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚಿಸಿತ್ತು. ಇದರ ಮಧ್ಯೆಯೇ ನೈಸ್ ಮತ್ತೆ ತನ್ನ ರಸ್ತೆಯಲ್ಲಿ ಟೋಲ್ ದರ ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಸಚಿವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.