ಲಿಷಾಗೆ ಯಾವ ಇಲಾಖೆ ಕೆಲಸ ಕೊಡ್ತೀರ?


Team Udayavani, Jul 7, 2017, 11:14 AM IST

lisha-siddu.jpg

ಬೆಂಗಳೂರು: ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ಸಂಭವಿಸಿದ್ದ ಬಾಂಬ್‌ ಸ್ಫೋಟ ಪ್ರಕರಣದ ಸಂತ್ರಸ್ತೆ ಲೀಷಾ ಅವರಿಗೆ ಯಾವ ಇಲಾಖೆಯಲ್ಲಿ “ಸಿ’ ದರ್ಜೆ ಹುದ್ದೆ ನೀಡಲಾಗುತ್ತದೆ ಎಂಬ ಬಗ್ಗೆ ಎರಡು ವಾರಗಳಲ್ಲಿ  ವರದಿ ನೀಡಿ ಎಂದು ರಾಜ್ಯಸರ್ಕಾರಕ್ಕೆ ಹೈಕೋರ್ಟ್‌ ಮೌಖೀಕ ಸೂಚನೆ ನೀಡಿದೆ.

ಕೋರ್ಟ್‌ ಆದೇಶದ ಬಳಿಕವೂ ಉದ್ಯೋಗ ಕಲ್ಪಿಸದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಲಿಷಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾ. ಜಯಂತ್‌ ಪಟೇಲ್‌  ಹಾಗೂ ನ್ಯಾಯಮೂರ್ತಿ ಸುಜಾತಾ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಮಾಹಿತಿ ನೀಡಿ, ಲಿಷಾ ಅವರಿಗೆ ಸಿ ದರ್ಜೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ಜೂನ್‌ 22ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ಆದರೆ, ಇದೊಂದು ವಿಶೇಷ ಪ್ರಕರಣವಾಗಿರುವುದರಿಂದ ಉದ್ಯೋಗ ಕಲ್ಪಿಸಲು ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ನಿರ್ದಿಷ್ಟ ನಿಯಮಾವಳಿ ರೂಪಿಸಬೇಕಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಲಿಷಾ ಅವರಿಗೆ ಹುದ್ದೆ ನೀಡಲಾಗುವುದು ಎಂದು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸಂತ್ರಸ್ತ ಯುವತಿಗೆ ಯಾವ ಇಲಾಖೆಯಲ್ಲಿ ಹುದ್ದೆ ನೀಡಲಾಗುತ್ತದೆ ಎಂಬುದನ್ನು ಪರಿಶೀಲನೆ ನಡೆಸಿ ಎರಡು ವಾರಗಳಲ್ಲಿ ವರದಿ ನೀಡಿ. ಮೊದಲು ಹುದ್ದೆ ನೀಡುವ ತೀರ್ಮಾನ ತೆಗೆದುಕೊಳ್ಳಿ. ಬಳಿಕ ವಿಶೇಷ ಪ್ರಕರಣದ ಬಗ್ಗೆ ನಿಯಮಾವಳಿ ರೂಪಿಸಿ ಎಂದು ಮೌಖೀಕ ಸಲಹೆ ನೀಡಿ ಅರ್ಜಿ ವಿಚಾರಣೆ  ಮುಂದೂಡಿತು.

ಪ್ರಕರಣವೇನು?: 2013ರ ಏ.17ರಂದು ಬಿಜೆಪಿ ಕಚೇರಿ ಮುಂದೆ ಸಂಭವಿಸಿದ್ದ ಬಾಂಬ್‌ ಸ್ಫೋಟದಲ್ಲಿ ಮಹಾರಾಣಿ ಕಾಲೇಜಿನಲ್ಲಿ ಬಿಸಿಎ ವ್ಯಾಸಾಂಗ ಮಾಡುತ್ತಿದ್ದ ಲಿಷಾ ಅವರು ಶೇ.50ರಿಂದ 70ರಷ್ಟು ಅಂಗವೈಕಲ್ಯಕ್ಕೆ ತುತ್ತಾಗಿ ಎಡಗಾಲು ಕಳೆದುಕೊಂಡಿದ್ದರು. ಪರಿಣಾಮ ಎಂಟಕ್ಕೂ ಅಧಿಕ ಶಸ್ತ್ರ ಚಿಕಿತ್ಸೆಗಳಿಗೆ ಒಳಗಾಗಿದ್ದ ಲಿಷಾ ಚಿಕಿತ್ಸೆಗೆ 25 ಲಕ್ಷಕ್ಕೂ ಅಧಿಕ ಹಣ ವೆಚ್ಚವಾಗಿತ್ತು.

ಈ ಮಧ್ಯೆ, ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸೂಕ್ತ ಪರಿಹಾರ ಮತ್ತು ಉದ್ಯೋಗ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ 2014ರಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಮನವಿ ಆಲಿಸಿದ ನ್ಯಾಯಪೀಠ, ಮೂರು ತಿಂಗಳಲ್ಲಿ ರಾಜ್ಯ ಸರ್ಕಾರ ಲೀಷಾಗೆ ಉದ್ಯೋಗ ಕಲ್ಪಿಸಬೇಕು ಮತ್ತು ನಾಲ್ಕು ತಿಂಗಳಲ್ಲಿ ಕೇಂದ್ರ ಸರ್ಕಾರ ಪರಿಹಾರ ನೀಡಬೇಕು ಎಂದು 2016ರ ಅ.17ರಂದು ಆದೇಶಿಸಿತ್ತು.

ಕೋರ್ಟ್‌ ಆದೇಶ ನೀಡಿ 9 ತಿಂಗಳ ಬಳಿಕವೂ ಉದ್ಯೋಗ ಮತ್ತು ಪರಿಹಾರ ನೀಡದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಲಿಷಾ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದರು. ಹೀಗಾಗಿ ಲಿಷಾ ಅವರಿಗೆ “ಸಿ’ ದರ್ಜೆ ಹುದ್ದೆ ನೀಡಲು ಜೂನ್‌ 22ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿತ್ತು.

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.