ಅಡ್ಯಾರ್ ಪದವು : ಯುವಕನಿಗೆ ಇರಿದು ದುಷ್ಕರ್ಮಿಗಳು ಪರಾರಿ
Team Udayavani, Jul 7, 2017, 7:15 PM IST
ಮಂಗಳೂರು: ಬಿ.ಸಿ.ರೋಡ್ ಸಮೀಪದ ಅಡ್ಯಾರ್ ಪದವಿನಲ್ಲಿ ಶುಕ್ರವಾರ ಸಂಜೆಯ ವೇಳೆಗೆ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ ಕೇರಳ ಮೂಲದ ವಿದ್ಯಾರ್ಥಿ ಶಾಜೀದ್ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ.
ಗಾಯಾಳು ವಿದ್ಯಾರ್ಥಿ ಶಾಜೀದ್ ತನ್ನ ಸ್ನೇಹಿತನ ಜೊತೆಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಇವರ ಬೈಕ್ ಅನ್ನು ನಿಲ್ಲಿಸಿದ ದುಷ್ಕರ್ಮಿಗಳ ಗುಂಪು ಪೆಟ್ರೋಲ್ ಕೇಳುವ ನೆಪದಲ್ಲಿ ಏಕಾಏಕಿ ಹಲ್ಲೆ ನಡೆಸಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.
ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಂಗಳೂರಿಗೆ ಬಂದಿರುವ ಕಾರಣ ಎಲ್ಲೆಡೆ ಬಿಗು ಪೊಲೀಸ್ ಬಂದೋಬಸ್ತ್ ಇದ್ದರೂ ಸಹ ಈ ಘಟನೆ ನಡೆದಿರುವುದು ಪರಿಸರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಘಟನೆಗೆ ನಿರ್ಧಿಷ್ಟ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.