ಸಂಜೀವಿನಿ ವೈದ್ಯ ಸಾಹಿತ್ಯದ ಮೇರು ಕೃತಿ: ಬನಾರಿ

Team Udayavani, Jul 8, 2017, 2:20 AM IST

07ksde15.jpg

ಮಂಜೇಶ್ವರ: ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಓಷನ್‌ಪರ್ಲ್ ಹೊಟೇಲಿನ ಸಭಾಂಗಣದಲ್ಲಿ ಹಿರಿಯ ದಂತ ವೈದ್ಯ ಮತ್ತು ಬಾಯಿ, ಮುಖ, ದವಡೆ ಶಸ್ತ್ರ ಚಿಕಿತ್ಸಕ ಡಾ| ಮುರಳೀಮೋಹನ್‌ ಚೂಂತಾರು ಅವರ ಆರನೇ ವೈದ್ಯಕೀಯ ಕೃತಿ “ಸಂಜೀವಿನಿ ಆರೋಗ್ಯ ಮಾರ್ಗದರ್ಶಿ’ ಭಾಗ ಎರಡು ಲೋಕಾರ್ಪಣೆಗೊಂಡಿತು.

ಚೂಂತಾರು ಸರೋಜಿನಿ ಭಟ್‌ ಪ್ರತಿಷ್ಠಾನ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಕೃತಿಯನ್ನು ಬಿಡುಗಡೆ ಮಾಡಿದರು. ಸುರûಾ ದಂತ ಚಿಕಿತ್ಸಾಲಯ ಹೊಸಂಗಡಿ ಇದರ ವಿಂಶತಿಯ ಸಂಭ್ರಮದ ಜತೆಗೆ ನಡೆದ ಈ ಕಾರ್ಯ ಕ್ರಮದಲ್ಲಿ ಖ್ಯಾತ ಕುಟುಂಬ ವೈದ್ಯ ಮತ್ತು ವೈದ್ಯ ಸಾಹಿತಿ ಡಾ| ರಮಾನಂದ ಬನಾರಿ ಮತ್ತು ಕಾಸರಗೋಡು ಜಿಲ್ಲಾ ಪಂಚಾಯತ್‌ನ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್‌ ವರ್ಕಾಡಿ ಭಾಗವಹಿಸಿದ್ದರು.

ಕೃತಿಯನ್ನು ಲೋಕಾರ್ಪಣೆ ಮಾಡಿ, ಮಾತನಾಡಿದ ಉಸ್ತುವಾರಿ ಸಚಿವರಾದ ರಮಾನಾಥ ರೈ ಅವರು  ವೈದ್ಯಕೀಯ ವಿಷಯಗಳನ್ನು ಸಾಮಾನ್ಯ ಜನರಿಗೆ ಅರ್ಥವಾಗುವ ರೀತಿಯಲ್ಲಿ ಬರೆಯುವ ಕಲೆ ಡಾ| ಮುರಳಿಯವರಿಗೆ ಸಿದ್ಧಿಸಿದೆ ಎಂದರು.

ಡಾ| ಮುರಳಿಯವರು ಬರೆದ ಎಲ್ಲ ಪುಸ್ತಕಗಳನ್ನು ಲೋಕಾರ್ಪಣೆ ಗೊಳಿಸುವ ಅವಕಾಶ ನನಗೆ ದೊರಕಿದೆ. ಅವರ ಪ್ರಾಮಾಣಿಕತೆ ಮತ್ತು ನಿಸ್ವಾರ್ಥ ಸೇವಾ ಮನೋಭಾವ ಮೆಚ್ಚತಕ್ಕದ್ದು. ಸಾರ್ವಜನಿಕ ಬದುಕಿನಲ್ಲಿ ನಮ್ಮಿಂದ ಲಕ್ಷಾಂತರ ಮಂದಿ ಸಹಕಾರ ಪಡೆದುಕೊಳ್ಳುತ್ತಾರೆ. 

ಆದರೆ ಅದನ್ನು ನೆನಪಿಟ್ಟುಕೊಳ್ಳುವ ಮಂದಿ ಬಹಳ ಕಡಿಮೆ. ಆದರೆ ಡಾ| ಮುರಳಿ ಅವರು ಇದಕ್ಕೆ ಅಪವಾದ. ಸಹಾಯ ಮಾಡಿದ 25 ವರ್ಷಗಳ ಬಳಿಕವೂ ಎಲ್ಲವನ್ನೂ ನೆನಪಿಟ್ಟುಕೊಂಡಿರುವುದು ಅವರ ಹೃದಯ ವೈಶಾಲ್ಯಕ್ಕೆ ಸಾಕ್ಷಿ ಎಂದು ಕೊಂಡಾಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ| ರಮಾನಂದ ಬನಾರಿ ಅವರು ಮಾತನಾಡುತ್ತಾ ಡಾ| ಮುರಳಿ ಅವರು ಬರೆದ “ಸಂಜೀವಿನಿ’ ಕೃತಿ, ವೈದ್ಯ ಲೋಕದ ಅಪರೂಪದ ಕೃತಿಯಾಗಿದ್ದು ಜನ ಸಾಮಾನ್ಯರಲ್ಲಿ ಆರೋಗ್ಯದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವಲ್ಲಿ ಅತೀ ನಿರ್ಣಾಯಕ ಪಾತ್ರ ವಹಿಸಬಲ್ಲುದು ಎಂದರು.
 
ರಾಮಾಯಣದ ಸಮಯದಲ್ಲಿ ರಾಮ-ಲಕ್ಷ್ಮಣರಿಗೆ ಹನುಮಂತ ಬೆಟ್ಟದ ಜತೆಗೆ ಹೊತ್ತು ತಂದ ಸಂಜೀ ವಿನಿ ಔಷಧ ಅಮೃತವಾದಂತೆ ಈ “ಸಂಜೀವಿನಿ’ ಕೃತಿ ಕೂಡಾ ಜನ ಸಾಮಾನ್ಯರಿಗೆ ಮತ್ತು ಮನೆ ಮನೆಗೂ ತಲುಪಲಿ ಎಂದು ಶುಭ ಹಾರೈಸಿದರು. ಸಮಾಜದ ಸ್ವಾಸ್ಥ್ಯ   ಕಾಪಾಡುವಲ್ಲಿ ಈ ಕೃತಿ ಬಹಳ ಮುಖ್ಯ ಭೂಮಿಕೆ ವಹಿಸಲಿದೆ ಎಂದರು.
 
ಹರ್ಷಾದ್‌ ವರ್ಕಾಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಚೂಂತಾರು ಪ್ರತಿಷ್ಠಾನದ ಅಧ್ಯಕ್ಷ ಚೂಂತಾರು ಲಕ್ಷ್ಮೀ ನಾರಾಯಣ ಭಟ್‌ ಉಪಸ್ಥಿತರಿದ್ದರು.
 
ರಾಮಕೃಷ್ಣ ಭಟ್‌ ಚೊಕ್ಕಾಡಿ ಅವರು ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸಿರಿ, ಸ್ವಸ್ತಿ, ಸ್ನೇಹಾ ಪ್ರಾರ್ಥನೆ ಮಾಡಿದರು. ಮಹೇಶ್‌ ಚೂಂತಾರು ಅವರು ವಂದಿಸಿದರು. ಕಾರ್ಯಕ್ರಮದಲ್ಲಿ ಡಾ| ರಾಜಶ್ರೀ ಮೋಹನ್‌, ಖ್ಯಾತ ಹಾಸ್ಯ ಸಾಹಿತಿ ಭುವನೇಶ್ವರಿ ಹೆಗ್ಗಡೆ, ವೈದ್ಯ ಸಾಹಿತಿ ಡಾ| ಮೀರಾ, ಜಿಲ್ಲಾ ಪಂಚಾಯತ್‌ ಸದಸ್ಯ ಚಂದ್ರಪ್ರ‌ಕಾಶ್‌ ಶೆಟ್ಟಿ ತುಂಬೆ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.