ಏತಡ್ಕ ದೇಗುಲ: ಜು.9ರಂದು ಹಲಸಿನ ಹಣ್ಣಿನ ಅಪ್ಪ ಸೇವೆ

Team Udayavani, Jul 8, 2017, 2:30 AM IST

07ksde13a.jpg

ಏತಡ್ಕ: ಒಂದೊಂದು ದೇವಸ್ಥಾನದಲ್ಲಿ ಒಂದೊಂದು ರೀತಿಯ ಸೇವೆ, ವಿಧಿವಿಧಾನಗಳಿಂದ ಜನಜನಿತವಾಗಿದೆ. ಈ ದೇವಸ್ಥಾನ ತನ್ನದೇ ಆದ ವಿಶೇಷತೆಯಿಂದ ಗಮನ ಸೆಳೆಯುತ್ತದೆ. ಏತಡ್ಕದ ಶ್ರೀ ಸದಾಶಿವ ದೇವಸ್ಥಾನದಲ್ಲಿ ಎಲ್ಲಾ ದೇವಸಾœನಗಳಿಗಿಂತ ಭಿನ್ನವಾಗಿ “ಹಲಸಿನ ಹಣ್ಣಿನ ಅಪ್ಪ ಸೇವೆ’ ವಿಶೇಷವಾಗಿದ್ದು, ಗಮನಾರ್ಹವಾಗಿದೆ.

ಕಳೆದ ಐವತ್ತು ವರ್ಷಗಳಿಂದ ಏತಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆದು ಬರುತ್ತಿರುವ ಆಚರಣೆ “ಹಲಸಿನ ಹಣ್ಣಿನ ಅಪ್ಪ ಸೇವೆ’. ಜೂನ್‌ 15ರಿಂದ ಜುಲೈ 15ರೊಳಗೆ ನಡೆಯಲೇ ಬೇಕಾದ ಸೇವೆ ಈ ಬಾರಿ ಜುಲೈ 9 ರವಿವಾರದಂದು ಆಚರಣೆಗೊಳ್ಳಲಿದೆ.ಅತ್ಯುತ್ತಮ ಹಲಸಿನ ಹಣ್ಣನ್ನು ಅರ್ಪಿಸುವ ಮೂಲಕ ಹಲಸಿನ ಹಣ್ಣಿನ ಸೇವೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯತ್ತದೆ.

ಹಿನ್ನೆಲೆ : 1940 ರಷ್ಟು ಹಿಂದೆ ಏತಡ್ಕ ಸಮೀಪದ ಪಡ್ರೆ ಗ್ರಾಮದಲ್ಲಿರುವ ಈ ದೇವಸ್ಥಾನದ ಮೂಡು ಭಾಗದಲ್ಲಿ ಪ್ರದಕ್ಷಿಣಾಕಾರದಲ್ಲಿ ಹರಿದು ಪಳ್ಳತ್ತಡ್ಕ ದಾರಿಯಾಗಿ ಕುಂಬಳೆ ಸೇರುವ ನದಿಯಲ್ಲಿ ಹಿಂದೆಂದೂ ಕೇಳರಿಯದ ನೆರೆ ಬಂದು ಸುತ್ತುಮುತ್ತಲಿನ ಅನೇಕ ಮನೆಗಳು ಕುಸಿದು ನೆರೆ ಪಾಲಾದವು. ಅಕ್ಕಪಕ್ಕದ ಕೃಷಿ ಭೂಮಿಗಳು ಹೂಳು ತುಂಬಿ ಕೃಷಿ ಅಯೋಗ್ಯವಾಗಿ ರೂಪುಗೊಂಡವು. 1941ರಲ್ಲಿ ಏತಡ್ಕ ಸುಬ್ರಾಯ ಭಟ್‌ ಅವರು ಅಪರೂಪವಾಗಿದ್ದ ದೇವಸ್ಥಾನವಿದ್ದ ಜಾಗವನ್ನು ಖರೀಸಿದ್ದರು. 1948ರಲ್ಲಿ ಜೀರ್ಣೋದ್ಧಾರ, ಬ್ರಹ್ಮಕಲಶ ನೆರವೇರಿಸಿದರು. ಧನ-ಧಾನ್ಯ ಎರಡೂ ದುರ್ಲಭ ಎನ್ನುವ ಪರಿಸ್ಥಿತಿ. ಇಡೀ ಊರವರ ಹಸಿವಿನ ದಿನಗಳಲ್ಲಿ ಕೈ ಹಿಡಿದು ಅನ್ನ ಕೋಶವನ್ನು ತುಂಬಿದ್ದು “ಹಲಸಿನ ಕಾಯಿ ಮತ್ತು ಹಣ್ಣು’. ದಿನದ ಮೂರೂ ಹೊತ್ತು ಹಲಸಿನ ಹಲವು ಬಗೆ, ಅನ್ನ, ತರಕಾರಿ, ಹಣ್ಣು ಹಂಪಲು ಎಲ್ಲವೂ ಒಂದರಲ್ಲಿ ಎಂದರೆ ಹಲಸಿನ ಕಾಯಿಯೇ. ದಿ| ಏತಡ್ಕ ಸುಬ್ರಾಯ ಭಟ್‌ ಅವರು ಈ ಮರಕ್ಕೆ ಊರವರು ಚಿರಋಣಿಯಾಗಿರಬೇಕು ಎನ್ನುವ ಪರಿಕಲ್ಪನೆಯಿಂದ “ಹಲಸಿನ ಹಣ್ಣಿನ ಅಪ್ಪ ಸೇವೆ’ಯನ್ನು  ಆಚರಣೆಗೆ ತಂದರು. ಆ ಬಳಿಕ ಪ್ರತೀ ವರ್ಷವೂ ತಪ್ಪದೆ ಹಲಸಿನ ಹಣ್ಣಿನ ಅಪ್ಪ ಸೇವೆ ನಡೆಯುತ್ತಿದೆ.

ಈ ವರ್ಷ ಜುಲೈ 9 ರವಿವಾರ ಬೆಳಗ್ಗೆ ವಿವಿಧ ಕಾರ್ಯ ಕ್ರಮಗಳೊಂದಿಗೆ “ಹಲಸಿನ ಹಣ್ಣಿನ ಅಪ್ಪ ಸೇವೆ’ ನಡೆಯಲಿದೆ. ಅರ್ಚಕ ಲಕ್ಷ್ಮೀನಾರಾಯಣ ಭಟ್‌ ಪಡಿ ಕ್ಕಲ್‌ ಅವರು ಕಾರ್ಯಕ್ರಮದ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ.

ಚಿತ್ರ: ಚಂದ್ರಶೇಖರ್‌ ಏತಡ್ಕ

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.