ಸಸಿಹಿತ್ಲು ಬೀಚ್ ಪ್ರದೇಶದಲ್ಲಿ ಕಟ್ಟೆಚ್ಚರ
Team Udayavani, Jul 8, 2017, 3:30 AM IST
ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲು ಆದೇಶ
ಹಳೆಯಂಗಡಿ: ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ನ, ಪಣಂಬೂರು, ತಣ್ಣೀರುಬಾವಿ, ಸುರತ್ಕಲ್ ಬೀಚ್‌ಗಳಲ್ಲಿ ಸಾಂಪ್ರದಾಯಿಕ ಮೀನುಗಾರರನ್ನು ಹೊರತುಪಡಿಸಿ ಯಾವುದೇ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರಕ್ಕೆ ಇಳಿಯುವುದನ್ನು ನಿರ್ಬಂಧಿಸಿರುವಂತೆಯೇ ಸಸಿಹಿತ್ಲು ಬೀಚ್‌ನಲ್ಲಿಯೂ ಸಾಕಷ್ಟು ಕಟ್ಟೆಚ್ಚರ ವಹಿಸಲಾಗಿದೆ.
ಸಸಿಹಿತ್ಲಿನ ಕಡಲ ಕಿನಾರೆಗಳಿಗೆ ಆಗಮಿಸುವವರನ್ನು ಅಪಾಯದ ಕುರಿತು ಎಚ್ಚರಿಸಲು ಸೂಚನಾ ಫಲಕಗಳನ್ನು ಹಾಕಲಾಗಿದೆ. ಜತೆಗೆ ಪ್ರವಾಸೋದ್ಯಮ ಇಲಾಖೆಯ ಇಬ್ಬರು ಪ್ರವಾಸಿ ಮಿತ್ರರನ್ನು ಹಾಗೂ ಮೂರು ಮಂದಿ ಗೃಹ ರಕ್ಷಕದಳದವರನ್ನು ಜು. 1ರಿಂದ ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ. ಇವರು ಪ್ರತಿದಿನ ಸುರತ್ಕಲ್ ಠಾಣೆಯಲ್ಲಿ ಹಾಜರಾತಿ ಹಾಕಿ ಸಸಿಹಿತ್ಲಿನ ಬೀಚ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ವ್ಯವಸ್ಥೆ ಆಗಸ್ಟ್‌ವರೆಗೆ ಮುಂದುವರಿಯಲಿದೆ. ಸಸಿಹಿತ್ಲಿನಲ್ಲಿ ಕಳೆದ ವಾರ ಮೂರು ಮಂದಿ ಹಾಗೂ ಉಳ್ಳಾಲದಲ್ಲಿ ಇಬ್ಬರು ಸಮುದ್ರ ಪಾಲಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ. ಸಸಿಹಿತ್ಲಿನಲ್ಲಿ ಖಾಯಂ ಜೀವ ರಕ್ಷಕರಾದ ಅನಿಲ್, ಮನೋಜ್, ದಿಲೀಪ್ ಜಗದೀಶ್ ಅವರೊಂದಿಗೆ ಪ್ರವಾಸಿ ಮಿತ್ರ ಮತ್ತು ಗೃಹರಕ್ಷಕದಳದವರು ಕಾರ್ಯ ಪ್ರವೃತ್ತರಾಗಿದ್ದಾರೆ.
ನಿರ್ಬಂಧಿತ ಪ್ರದೇಶವನ್ನು ಉಲ್ಲಂಘಿಸಿ ಪ್ರವೇಶಿಸಿದಲ್ಲಿ ಅಥವಾ ಉದ್ಧಟತನದಿಂದ ವರ್ತಿಸುವವರನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಒಪ್ಪಿಸಲು ಸಹ ಇವರಿಗೆ ಆದೇಶಿಸಲಾಗಿದೆ. ಗುಂಪಾಗಿ ಬರುವ ಪ್ರವಾಸಿಗರು ಎಚ್ಚರಿಕೆಯ ಮಾತನ್ನು ಮೀರಿ ವರ್ತಿಸಿ ಗದ್ದಲ ಸೃಷ್ಟಿಸಿದರೆ ಸೆಕ್ಷನ್ 144ರಂತೆ ಲಾಠಿ ಚಾರ್ಜ್ ಮಾಡಿಯೂ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅವಕಾಶ ನೀಡಲಾಗಿದೆ. ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಮಾತ್ರ ಸಸಿಹಿತ್ಲು ಬೀಚ್ ತೆರೆದಿರುತ್ತದೆ. ಸಮಯದ ಪರಿಪಾಲನೆ ಹಾಗೂ ಪ್ರವಾಸಿಗರು ತಾಳ್ಮೆಯಿಂದ ವರ್ತಿಸುವಂತೆ ಸ್ಥಳದಲ್ಲಿಯೇ ಸೂಚಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.