ಜಿಎಸ್‌ಟಿ ಗೊಂದಲ: ಲಾರಿಗಳಿಗೆ ಕಡಿಮೆ ಆಯ್ತು ಡಿಮ್ಯಾಂಡು!


Team Udayavani, Jul 8, 2017, 4:00 AM IST

Ban080717.jpg

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಗೆ ಇನ್ನೂ ಕೆಲವರು ನೋಂದಣಿ ಮಾಡಿಕೊಳ್ಳದಿರುವುದರಿಂದ ಮಾರುಕಟ್ಟೆಯಲ್ಲಿ ವಿವಿಧ ಪ್ರಕಾರದ ಸರಕುಗಳ ಬೇಡಿಕೆಯಲ್ಲಿ ಇಳಿಕೆಮುಖವಾಗಿದ್ದು, ಹೆಚ್ಚಿನ ಸರಕು ಸಾಗಣೆ ಲಾರಿಗಳ ಸಂಚಾರ ಸ್ತಬ್ಧಗೊಂಡಿದೆ.

ಜಿಎಸ್‌ಟಿ ಜಾರಿಯಾಗಿ ವಾರ ಕಳೆದರೂ ವಿವಿಧ ವಸ್ತುಗಳ ಖರೀದಿದಾರರು ಇನ್ನೂ ಹೊಸ ತೆರಿಗೆ ವ್ಯವಸ್ಥೆಗೆ ನೋಂದಣಿ ಮಾಡಿಕೊಂಡಿಲ್ಲ. ಮತ್ತೂಂದೆಡೆ ಹೊಸ ಪದ್ಧತಿಯನ್ನು ಅಳವಡಿಸಿಕೊಳ್ಳುವಲ್ಲಿಯೂ ತಡವಾಗಿದೆ. ಇದರ ಪರಿಣಾಮ ಮಾರುಕಟ್ಟೆಯಲ್ಲಿ ಅನೇಕ ವಸ್ತುಗಳ ಬೇಡಿಕೆ ಕುಸಿದಿದೆ. ಇದರಿಂದ ಲಾರಿಗಳನ್ನು ಕೇಳ್ಳೋರಿಲ್ಲದಂತಾಗಿದ್ದು, ರಾಜ್ಯದಲ್ಲಿ ಸಣ್ಣ ಮತ್ತು ದೊಡ್ಡ ಗಾತ್ರದ ಸಹಸ್ರಾರು ಲಾರಿಗಳ ಓಡಾಟ ಸ್ಥಗಿತಗೊಂಡಿವೆ.

ಸಮಸ್ಯೆ ಏನು?
ಉತ್ಪಾದಕರು ತಮ್ಮ ವಸ್ತುಗಳ ಮಾರಾಟಕ್ಕೆ ಸಿದ್ಧರಿದ್ದಾರೆ. ಆದರೆ, ಖರೀದಿದಾರರು ನೋಂದಣಿ ಮಾಡಿಕೊಂಡಿಲ್ಲ. ಅಂತಹವರಿಗೆ ಸ್ವತಃ ಉತ್ಪಾದಕರೇ ತಮ್ಮ ಹೆಸರಿನಲ್ಲಿ ತೆರಿಗೆ ಪಾವತಿಸಿ, ಖರೀದಿದಾರರಿಗೆ ಉತ್ಪನ್ನಗಳನ್ನು ಪೂರೈಕೆ ಮಾಡಬೇಕಾದ ಸ್ಥಿತಿ ಇದೆ. ಇನ್ನು ಕೆಲವು ಉತ್ಪಾದಕರು ವ್ಯಾಟ್‌, ಸಿಎಸ್‌ಟಿ, ಪ್ರವೇಶ ತೆರಿಗೆ ಸೇರಿದಂತೆ ಹಿಂದಿನ ವ್ಯವಸ್ಥೆಯಲ್ಲೇ ಇದ್ದಾರೆ. ಹೊಸ ವ್ಯವಸ್ಥೆಗೆ ಒಗ್ಗಿಕೊಳ್ಳಲು ತುಸು ಸಮಯ ಹಿಡಿಯುತ್ತಿದೆ. ಹಾಗಾಗಿ, ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಲಾರಿಗಳಿಗೆ ಸಾಗಣೆ ಮಾಡಲು ಸರಕುಗಳೇ ಇಲ್ಲದಂತಾಗಿದೆ ಎಂದು ಕರ್ನಾಟಕ ರೋಡ್‌ಲೈನ್ಸ್‌ ಮುಖ್ಯಸ್ಥ ಮಹೇಂದ್ರ ತಿಳಿಸುತ್ತಾರೆ.

“ನಮ್ಮ ಕಂಪನಿಯಲ್ಲೇ 50ಕ್ಕೂ ಹೆಚ್ಚು ಲಾರಿಗಳು ಇವೆ. ಅವುಗಳಲ್ಲಿ ಶೇ.50ರಷ್ಟು ಲಾರಿಗಳು ರಸ್ತೆಗಿಳಿದಿಲ್ಲ. ಇದೇ ರೀತಿ ರಾಜ್ಯಾದ್ಯಂತ ಸಾವಿರಾರು ಲಾರಿಗಳು ಸ್ತಬ್ಧಗೊಂಡಿವೆ’ ಎಂದು ಮಹೇಂದ್ರ  ಹೇಳುತ್ತಾರೆ.

“ಗೊಂದಲ ಇದೆ; ಕಾಯಿರಿ’
“ಉಕ್ಕು, ಟೂತ್‌ಪೇಸ್ಟ್‌, ಸೋಪು, ಸಕ್ಕರೆ ಸೇರಿದಂತೆ ಅನೇಕ ಪ್ರಮುಖ ಉತ್ಪನ್ನಗಳ ಸಾಗಣೆ ಮಾಡುವ ಲಾರಿಗಳು ಕಳೆದ ಮೂರ್‍ನಾಲ್ಕು ದಿನಗಳಿಂದ ಸಂಚಾರ ಸ್ಥಗಿತಗೊಳಿಸಿವೆ. ಟ್ರಾನ್ಸ್‌ಪೊàರ್ಟರ್ಗಳನ್ನು ಕೇಳಿದರೆ, ಇನ್ನೂ ಜಿಎಸ್‌ಟಿ ಗೊಂದಲ ಬಗೆಹರಿದಿಲ್ಲ. ಒಂದೆರಡು ದಿನಗಳ ಕಾಯಿರಿ ಎಂಬ ಉತ್ತರ ಬರುತ್ತದೆ. ಹಾಗಾಗಿ, ರಾಜ್ಯದಲ್ಲಿ ಲಕ್ಷಕ್ಕೂ ಅಧಿಕ ಸರಕು ಸಾಗಣೆ ವಾಹನಗಳು ನಿಂತಿವೆ’ ಎಂದು ಲಾರಿ ಮಾಲಿಕರ ಸಂಘದ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ಅಲವತ್ತುಕೊಳ್ಳುತ್ತಾರೆ.ಜಿಎಸ್‌ಟಿ ಜಾರಿಯಾದ ನಂತರ ರಾಷ್ಟ್ರೀಯ ಹೆದ್ದಾರಿಗಳಲ್ಲಿದ್ದ ವಾಣಿಜ್ಯ ತೆರಿಗೆ ಕೇಂದ್ರಗಳನ್ನು ತೆರವುಗೊಳಿಸಲಾಗಿದೆ. 

ಇದರಿಂದ ತುಂಬಿದ ಲಾರಿಗಳ ಸರಾಗ ಸಾಗಣೆಗೆ ಸಹಕಾರಿಯಾಗಿದೆ. ಆದರೆ, ವ್ಯಾಪಾರಸ್ಥರು ಹೊಸ ಸರಕು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ಇದ್ದ ಮಾಲುಗಳನ್ನೇ ಖಾಲಿ ಮಾಡಲು ಅವರು ಹೆಚ್ಚು ಒತ್ತು ನೀಡುತ್ತಿದ್ದಾರೆ. ಇದರಿಂದ ನಗರಕ್ಕೆ ಬರುವ ಲಾರಿಗಳ ಸಂಖ್ಯೆ ಕಡಿಮೆಯಾಗಿದ್ದು, ನಿತ್ಯ ಹತ್ತು ಸಾವಿರಕ್ಕೂ ಅಧಿಕ ಲಾರಿಗಳು ನಗರಕ್ಕೆ ಬರುತ್ತವೆ. ಈ ಪೈಕಿ ಈಗ ಎಂಟು ಸಾವಿರ ಲಾರಿಗಳು ಬರುತ್ತಿವೆ ಎಂದು ಅವರು ಹೇಳುತ್ತಾರೆ.

ಟಾಪ್ ನ್ಯೂಸ್

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.