ಮತ್ತಷ್ಟು ಅಡ್ಡರಸ್ತೆಗಳನ್ನು ಸೃಷ್ಟಿಸಿಕೊಳ್ಳುತ್ತಾ ಬದುಕಬೇಕು


Team Udayavani, Jul 8, 2017, 2:01 AM IST

ankana-1.jpg

ಬೆಳಕಿಗೆ ಭಾವವಿದೆ ಎಂದಾದರೆ, ಕತ್ತಲೆಗೆ ಜೀವವಿದೆ ಎಂದೆನಿಸುವುದು ನಗರಗಳಲ್ಲಿನ ಕಣ್ಣು ಕೋರೈಸುವ ನಿಯಾನ್‌ ಬೆಳಕಿನಲ್ಲಿ ಮುಳುಗಿದಾಗ. ಅಡ್ಡರಸ್ತೆಯ ಜಮಾನದಲ್ಲಿ ಕಳೆದುಹೋಗುವ ಮೊದಲು ಕತ್ತಲೆಯನ್ನು ಪ್ರೀತಿಸುವುದನ್ನು ಕಳೆಯಬೇಕು. ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧಕೆ ಮನಸೋತು ಹೊರಟವರು ವಾಪಸು ಹೊರಡಬೇಕಿದೆ.

ನಗರಗಳೆಂದರೆ ಕಣ್ಣು ಕೋರೈಸುವ ಬೆಳಕಿದ್ದಂತೆ. ಕತ್ತಲೆಯಲ್ಲಿ ಬದುಕುವುದು ಕಷ್ಟವೆಂದು ಬೆಳಕಿಗೆ ಬರಬಹುದು. ಅದು ಒಂದು ಸಹಜ ಇಚ್ಛೆಯೂ ಹೌದು. ಆದರೆ, ಬೆಳಕೇ ಕಣ್ಣಿನ ದೃಷ್ಟಿಯನ್ನು ಕಸಿದುಕೊಂಡು ಬಿಟ್ಟರೆ? ಇಂಥದ್ದೇ ಪರಿಸ್ಥಿತಿ ನಮ್ಮೆಲ್ಲರದ್ದು. ನಾವೆಲ್ಲ ಹೀಗೆ ಕತ್ತಲೆಯಿಂದ ಬೆಳಕಿನ ಮೋಹಕ್ಕೆ ಜಿಗಿದು ಬಂದವರು. ಹಾಗೆಂದು ಇದು ನಿಜಕ್ಕೂ ಹಳಹಳಿಕೆಯಲ್ಲ.

ಭವಿಷ್ಯದ ಜನಾಂಗ ಪೂರ್ತಿ ನಗರವಾಸಿಗಳೇ. ಅವರಿಗೆ ಹಳ್ಳಿಯವರು ಎಂಬ ಟ್ಯಾಗ್‌ಲೈನ್‌ ಇರುವುದಿಲ್ಲ. ಹಳ್ಳಿಯವರಾಗಿದ್ದ ನಮಗೆ ಒಂದು ಲಾಭವಿತ್ತು. ಅದೆಂದರೆ ಹೊಂದಾಣಿಕೆ. ಅದು ನಗರ ಜೀವನದಲ್ಲಿ ಕೊಚ್ಚಿಕೊಂಡು ಹೋಗುತ್ತಿದೆ. 
ಹಳ್ಳಿಯಿಂದ ಬಂದ ನಮಗೆ ಮನುಷ್ಯರೊಂದಿಗೆ ಬೆರೆಯುವುದಕ್ಕೆ ಯಾವ ಸಮಸ್ಯೆಯೂ ಇರಲಿಲ್ಲ. ಅಣ್ಣನೋ ತಮ್ಮನೋ ಅಕ್ಕನೋ ತಂಗಿಯೋ ಎಂಬ ಸಂಬಂಧವಾಚಕ ಶಬ್ದಗಳು ಸಾಕಾಗಿತ್ತು. ಜತೆಗೆ ನಮಗೂ ಕೀರ್ತಿಯಿರಲಿ, ತಲೆಗೊಂದು ಕಿರೀಟವೂ ಇರಲಿಲ್ಲ. ಹಾಗಾಗಿ ಅದು ದೊಡ್ಡ ಸಮಸ್ಯೆಯೂ ಎನಿಸುತ್ತಿರಲಿಲ್ಲ. 

ನನ್ನದೇ ಕಥೆ ಹೇಳುವುದಾದಾರೆ, ಉದ್ಯೋಗ ಹುಡುಕಿಕೊಂಡು ಬೆಂಗಳೂರಿಗೆ ಹೋದ ನನಗೆ ಐದು ದಿನದಲ್ಲಿ ನಮ್ಮೂರೇ ಆಗಿತ್ತು. ಇದರರ್ಥ ನಗರಕ್ಕೆ ಹೊಂದಿಕೊಂಡೆ ಎಂಬುದಕ್ಕಿಂತಲೂ ಅಲ್ಲಿದ್ದವರೊಂದಿಗೆ ಹೊಂದಿಕೊಂಡೇ ಎಂಬುದು ಮುಖ್ಯ. ಯಾವುದೇ ಭೌಗೋಳಿಕ ಪ್ರದೇಶಕ್ಕೆ ಚಲನಶೀಲತೆ ಇರುವುದಿಲ್ಲ; ಅಲ್ಲಿದ್ದ ಜನರು ಚಲನಶೀಲತೆಯನ್ನು ಒದಗಿಸುತ್ತಾರೆ. 

ಕಲ್ಪನೆಗಳು ನಮ್ಮನ್ನು ಬೆಳೆಸಿದವು
ಇಡೀ ಜನದಟ್ಟಣೆಯ ನಗರದಲ್ಲಿ ನಮ್ಮನ್ನು ಬೆಳೆಸಿದ್ದು ಕಲ್ಪನೆಗಳು, ನಮ್ಮ ಊರಿನ ನೆನಪುಗಳು, ಕಾಡು, ಬೆಟ್ಟ, ನದಿ ಹೊಳೆಗಳು. ಅದರೊಂದಿಗೆ ನಮ್ಮೂರು ಅಲ್ಲಿದೆ ಎಂಬ ಭಾವವೂ ನಗರದ ಬಗೆಗಿನ ಮೋಹವನ್ನು ಕಡಿಮೆಗೊಳಿಸಿದೆ. ಬೆಂಗಳೂರು ಮೆಜೆಸ್ಟಿಕ್‌ನಲ್ಲಿ ಮೊದಲ ಬಾರಿ ಬಸ್ಸಿನಿಂದ ಇಳಿದಾಗ ಕಂಗಾಲಾಗಿ ಹೋಗಿದ್ದೆ. ಇಲ್ಲಿ ಹೇಗೆ ಬದುಕುವುದಪ್ಪಾ ಎಂಬ ಆತಂಕ ಕಾಡತೊಡಗಿತ್ತು. 

ಅಣ್ಣ ಹೇಳಿದ ಬಸ್ಸು ನಂಬರ್‌ ಹಿಡಿದು, ಕಂಡಕ್ಟರ್‌ಗೆ ಚೀಟಿಯಲ್ಲಿ ಬರೆದುಕೊಂಡಿದ್ದ ನಗರದ ಹೆಸರು ಹೇಳಿ, ಸ್ಟಾಪ್‌ ಬಂದ ಕೂಡಲೇ ತಿಳಿಸಿಬಿಡಿ ಎಂದು ಒಂದು ಮನವಿ ಹಾಕಿ ಸೀಟಿನಲ್ಲಿ ಕುಳಿತಿದ್ದೆ. ಸ್ವಲ್ಪ ಹೊತ್ತಿನಲ್ಲಿ ಇಳಿಯುವಾಗ ಅಣ್ಣ ಬಂದಿದ್ದ, ಮನೆಗೆ ಕರೆದೊಯ್ದಿದ್ದ. ಆಗ ನೆನಪಿಗೆ ಇರಲೆಂದು ಲ್ಯಾಂಡ್‌ ಮಾರ್ಕ್‌ ನೋಡಿದರೆ ಬರೀ ಕಟ್ಟಡ. ಎಡ ಮತ್ತು ಬಲ ಬದಿಯಲ್ಲಿ ಕಟ್ಟಡಗಳ ರಾಶಿ. ಅದರೊಳಗೆ ಯಾವ ಕಟ್ಟಡವನ್ನು ನೆನಪಿನಲ್ಲಿಟ್ಟುಕೊಳ್ಳಬೇಕೆಂದೇ ಗೊಂದಲಕ್ಕೆ ಸಿಲುಕಿದ್ದು ಇದೆ. 

ಊರಿನಲ್ಲಿ ಇಡೀ ಪ್ರದೇಶಕ್ಕೆ ಇರುವುದು ನಾಲ್ಕೈದು ಮನೆ. ಆ ಪೈಕಿ ಕನಿಷ್ಠ ಎರಡು ಮನೆ ಸಂಬಂಧಿಕರದ್ದು, ಉಳಿದ ಎರಡು ನೆರೆಯವರದ್ದು. ಯಾವ ಗೊಂದಲವೂ ಇಲ್ಲ. ಮುಖ್ಯ ರಸ್ತೆಯಿಂದ ಇಳಿದು ಒಂದೇ ರಸ್ತೆ ಹಿಡಿದರೆ ಅದರ ಕೊನೆ ತುದಿಯಲ್ಲಿ ನಮ್ಮ ಮನೆ. ಆ ತುದಿಯಿಂದಲೇ ಇನ್ನೊಂದು ಟಿಸಿಲೊಡೆದು ಹೋದರೆ ಮತ್ತೂಂದು ಊರು-ಪ್ರದೇಶ. ನಿಜಕ್ಕೂ ಈ ನಗರಗಳಲ್ಲಂತಲ್ಲ. ಇಲ್ಲಿ ಒಂದು ಟಿಸಿಲಿಗೇ ನೂರು ಟಿಸಿಲು. ಅದಕ್ಕೆ ಒಂದಿಷ್ಟು ಹೆಸರು. ಅವೆಲ್ಲವನ್ನೂ ನೆನಪಿನಲ್ಲಿಟ್ಟುಕೊಳ್ಳಬೇಕೆಂದರೆ, ಸುಸ್ತಾಗುವುದು ಸಹಜ. ಉದಾಹರಣೆಗೆ, ಬೆಂಗಳೂರಿನ ಬನಶಂಕರಿಯನ್ನೇ ತೆಗೆದುಕೊಳ್ಳಿ, ಎಷ್ಟೊಂದು ಟಿಸಿಲುಗಳು, ಎಷ್ಟೊಂದು ಕೊಂಬೆಗಳು. 

ಅಡ್ಡರಸ್ತೆಯ ಲೆಕ್ಕಾಚಾರ
ಮರದ ಕಲ್ಪನೆಗೂ ನಗರದ ಕಲ್ಪನೆಗೂ ಬಹಳ ಸಾಮ್ಯವಿದೆ. ಅದಕ್ಕೇ ನಾನು ಟಿಸಿಲೆಂದು ಉಲ್ಲೇಖೀಸಿದ್ದು. ಈ ನಗರಗಳಲ್ಲಿನ ಅಡ್ಡ ರಸ್ತೆಯ ಕಲ್ಪನೆಯೇ ಒಂದಿಷ್ಟು ಮಜಾ ಕೊಡುವಂಥದ್ದು. ಒಂದನೇ ಅಡ್ಡರಸ್ತೆಯಿಂದ ಹಿಡಿದು 20, 30ರವರೆಗೂ ಹೋದ ಪರಂಪರೆಯಿದೆ. ಅದರಲ್ಲಿ ಅಡ್ಡದೊಳಗೆ ಬರುವ ಮತ್ತೂಂದು ಸಣ್ಣ ಅಡ್ಡಕ್ಕೆ ಇಂಗ್ಲಿಷಿನ “ಎ’, “ಬಿ’ ಎಂಬೆಲ್ಲ ಉಪನಾಮಗಳನ್ನು ಕೊಟ್ಟು, ಒಟ್ಟೂ ರಸ್ತೆಯನ್ನು ಬೆಳೆಸುವ ಕ್ರಮ ವಿಚಿತ್ರವಾದುದೇ. ಹಾಗಾಗಿ ಅಡ್ಡರಸ್ತೆಗಳು ನೆನಪಿದ್ದರೆ ಮಾತ್ರ ನಗರದಲ್ಲಿ ಬಚಾವು. ನಾನೂ ಬೆಂಗಳೂರಿಗೆ ಮೊದಲ ಬಾರಿಗೆ ಬರುವಾಗ ನನ್ನಣ್ಣನೂ ಕೊಟ್ಟಿದ್ದ ಟಿಪ್ಸ್‌ ಇದೇ.

“ನೀನು ಮನೆ ನಂಬರ್‌ ಮತ್ತು ಕ್ರಾಸ್‌ ನಂಬರ್‌ ಮರೆಯಬೇಡ. ಬೇರೆ ಏನು ಮರೆತರೂ ಪರವಾಗಿಲ್ಲ’ ಎಂದಿದ್ದ. ಅದೆಷ್ಟು ನಿಜವೆಂದರೆ, ನನ್ನ ಚಿಕ್ಕಪ್ಪ ನನ್ನ ಹಾಗೆಯೇ ಬೆಂಗಳೂರಿಗೆ ಬಂದವನು ನನ್ನಣ್ಣನನ್ನು ಹೆಸರು ಹಿಡಿದು ಹುಡುಕಲು ಹೊರಟು ಬೇಸ್ತು ಬಿದ್ದಿದ್ದ. ನಮ್ಮ ಮನೆ ಇರುವ ಹಿಂದಿನ, ಮುಂದಿನ ಬೀದಿಗಳಿಗೇನು? 

ಎಷ್ಟೋ ಬಾರಿ ನಮ್ಮ ಮನೆಯ ಸಾಲಿನ ಮೂರನೇ ಮನೆಯವರಿಗೂ ನಾವು ಪರಿಚಯ ಇರುವುದಿಲ್ಲ. ನಮಗೂ ಅಷ್ಟೇ. ಹಳ್ಳಿಯಲ್ಲಿ ಅಡ್ಡ ನಾಮಗಳನ್ನು (ಸುಂದರಿ ಕಾಕಾ, ಲಚ್ಚಿ ಮಾಮ ಇತ್ಯಾದಿ) ಹಿಡಿದುಕೊಂಡೇ ಅವರ ಊರನ್ನೇ ಹುಡುಕಬಹುದು ಎನ್ನಿ. ನಿಜಕ್ಕೂ ಇದು ಹಳ್ಳಿಯ ಬಗೆಗಿನ ಮೋಹವಲ್ಲ; ಆದರೆ ಸಾಧ್ಯತೆಗಳು. ಈ ಕಾಡು, ಗದ್ದೆ, ಮನೆಯ ಸುತ್ತಲಿನ ಸಂಬಂಧಗಳು, ನದಿ, ಸಮುದ್ರ ಎಲ್ಲವೂ ಬಹುಶಃ ನಮ್ಮನ್ನು  ನಗರವೆಂಬ ಕುಲುಮೆಯಲ್ಲಿ ಹೊಸರೂಪ ಪಡೆಯಲು ಬಿಟ್ಟಿರಲಾರವು. 

ಪ್ರತಿ ಹಬ್ಬಕ್ಕೂ ನೋಡಿದ್ದೀರಾ?
ಇದು ನಗರದಲ್ಲಿ ಕಂಡು ಬರುವ ನಿಚ್ಚಳ ನೋಟ. ಪ್ರತಿ ದೊಡ್ಡ ಹಬ್ಬಕ್ಕೂ ಇಡೀ ನಗರವೇ ಖಾಲಿಯಾಗುವುದನ್ನು ನೋಡಬೇಕು. ಎಂದೂ ನೋಡದಿದ್ದರೆ ಯುಗಾದಿಗೋ ಗಣೇಶ ಚತುರ್ಥಿಗೋ ದೀಪಾವಳಿಗೋ ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ಸ್ಟಾಂಡ್‌ನ‌ಲ್ಲಿ ನಿಂತು ನೋಡಿ. ಸಂಜೆ 5 ಗಂಟೆಯಾಗುತ್ತಿದ್ದಂತೆ ಬಸ್‌ ಸ್ಟಾಂಡ್‌ ನೆರೆ ತುಂಬಿಕೊಂಡಂತೆ ಜನರಿಂದ ತುಂಬಿಕೊಳ್ಳುತ್ತದೆ. ಗಂಟೆ ಎಂಟಾಗುವ ವೇಳೆಗೆ ನೀವು ಕಾಲಿಡಲೂ ಜಾಗವಿರುವುದಿಲ್ಲ. ಇರುವ ಎಲ್ಲ ಬಸ್‌ಗಳೂ ತುಂಬಿ ತುಳುಕುತ್ತಿರುತ್ತವೆ. ಎಷ್ಟೋ ವಿಶೇಷ ಬಸ್‌ಗಳನ್ನೂ ಬಿಟ್ಟರೂ ಸಾಕಾಗದು. ಬೆಳಗಿನ ಜಾವದವರೆಗೂ ಬಸ್ಸು ನಿಲ್ದಾಣ ಖಾಲಿಯಾಗುವುದಿಲ್ಲ. 

ಒಬ್ಬರೇ, ಇಬ್ಬರೇ… ರಾಶಿ ರಾಶಿ ಜನ. ಪ್ರತಿ ಹಬ್ಬ ಬಂದಾಗಲೂ ಇದನ್ನು ಕಂಡಾಗ, ಇಡೀ ನಗರವೇ ಎರಡು ದಿನಕ್ಕೆ ಖಾಲಿಯಾಗುತ್ತಿದೆ ಎಂದೆನಿಸುತ್ತಿತ್ತು. ಹಬ್ಬ ಮುಗಿದ ಎರಡು ದಿನದ ಬಳಿಕ ಬೆಳಗ್ಗೆ ಅದೇ ಮೆಜೆಸ್ಟಿಕ್‌ನಲ್ಲಿ ರಾಶಿ ರಾಶಿ ಜನ. ಎಲ್ಲ ತಮ್ಮ ಊರಿನ ವ್ಯಾಪಾರ ಮುಗಿಸಿ ವಾಪಸ್‌. ಆಗ ಅವನ ಮುಖದಲ್ಲಿ ಊರು ಬಿಟ್ಟು ಬಂದದ್ದಕ್ಕೆ ಬೇಸರವಿದ್ದರೂ ಹೊಸ ಹೊಳಪು ಕಾಣುತ್ತಿತ್ತು. ಬ್ಯಾಟರಿ ರೀಚಾರ್ಜ್‌ ಎಂಬ ನಗರದ ಭಾಷೆಯಂತೆ ರೀಚಾರ್ಜ್‌ ಆಗಿಬಿಡುತ್ತಿದ್ದೆವು. ಅಂಥದೊಂದು ಶಕ್ತಿಯೇ ನಮ್ಮ ಊರಿನಲ್ಲಿ ಅದಮ್ಯವಾಗಿ ಹರಿಯುತ್ತಿದೆಯೇನೋ ಎಂದು ಅನ್ನಿಸುತ್ತಲೇ ಇರುತ್ತದೆ. 

ನಗರದಲ್ಲಿದ್ದರೂ ನಮ್ಮೂರಿರಲಿ
ಇಂಥದೊಂದು ಭಾವ ಯಾವಾಗಲೂ ಕಾಡುತ್ತಲೇ ಇರುತ್ತದೆ. ನಾವು ಯಾವುದೇ ನಗರದಲ್ಲಿದ್ದರೂ ನಮ್ಮೂರು, ನಮ್ಮ ಮನೆ ಎಂಬುದೇನಾದರೂ ಬೇರೆಲ್ಲೂ (ನಾವಿರುವ ನಗರದಿಂದ ಹೊರತಾಗಿ) ಇದ್ದರೆ ಇಟ್ಟುಕೊಳ್ಳುವುದು ಒಳಿತು. ಅದು ರಿಯಲ್‌ ಎಸ್ಟೇಟ್‌ ನ ಲೆಕ್ಕಾಚಾರದಿಂದಲ್ಲ; ನಮ್ಮ ಬ್ಯಾಟರಿ ರೀಚಾರ್ಜ್‌ ಸ್ಟೇಷನ್‌ ಆಗಿರಲಿ. ಇಲ್ಲದಿದ್ದರೆ ಒಂದು ಬಗೆಯ ಅನಾಥ ಭಾವ ಕಾಡುವುದುಂಟು. 

ಗೆಳೆಯನೊಬ್ಬನಿದ್ದ; ನಗರದಲ್ಲಿ ಹುಟ್ಟಿ ನಗರದಲ್ಲೇ ಬೆಳೆದವನು ಮತ್ತು ಇದ್ದವನು. ಅವನು ಯಾವಾಗಲೂ ನಾವು ಊರಿಗೆ ಹೊರಟಾಗಲೆಲ್ಲಾ ಕೇಳುತ್ತಿದ್ದ ಸಾಮಾನ್ಯ ಪ್ರಶ್ನೆಯೊಂದಿತ್ತು. “ಏನು ಮಾರಾಯ, ಎರಡು ತಿಂಗಳಿಗೊಮ್ಮೆ ಊರು ಅಂತ ಹೊರಟು ಬಿಡ್ತೀಯಾ? ಏನಿರುತ್ತೋ ಅಲ್ಲಿ?’ ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧ, ದಾಟಿ ಬಂದು ಬೇಲಿಸಾಲ ಮೀಟಿ ಹಳೆಯ ಮಧುರ ನೋವ… ಎಲ್ಲಿ ಜಾರಿತೋ? ಬೆಳಕಿಗೆ ಭಾವವಿದ್ದರೆ, ಕತ್ತಲೆಗೆ ಜೀವ ಇದೆ ಎನಿಸುವುದು ಹೀಗೆಯೇ ನಮ್ಮ ಊರಿಗೆ ಹೋಗುವ ಬಸ್ಸು ಹತ್ತಿದಾಗ.

ಇರುವ ನಗರಗಳೊಳಗೆ ಹಳ್ಳಿಗಳನ್ನು ಸೃಷ್ಟಿಸಿಕೊಳ್ಳುವುದು ಹೇಗೆ ಎಂಬುದನ್ನು ನಾವೀಗ ಹುಡುಕಿಕೊಳ್ಳಬೇಕು. ಅಂದರೆ ಅಡ್ಡರಸ್ತೆಯೊಳಗೆ ಮತ್ತೂಂದು ಅಡ್ಡರಸ್ತೆ!

ಅರವಿಂದ ನಾವಡ

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.