ಜನ ಏಕೆ ಬಂದಿಲ್ಲಾ ರೀ..ಅರಣ್ಯಾಧಿಕಾರಿಗಳ ವಿರುದ್ಧ ಸಿಎಂ,ಸಚಿವ ರೈ ಕಿಡಿ
Team Udayavani, Jul 9, 2017, 12:37 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ರಮನಾಥ ರೈ ಅವರು ಅರಣ್ಯ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ ಘಟನೆ ಭಾನುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದಿದೆ.
ವನಮಹೋತ್ಸವ -2017 ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಮಾತ್ರ ಇದ್ದು ಜನರು ಹೆಚ್ಚಿನ ಸಂಖ್ಯೆಯಲ್ಲಿರಲಿಲ್ಲ.ಇದರಿಂದ ಆಕ್ರೋಶಗೊಂಡ ಮುಖ್ಯಮಂತ್ರಿಗಳು ಮತ್ತು ಸಚಿವ ರೈ ಕೆಂಡಾಮಂಡಲವಾಗಿದ್ದಾರೆ.
ಜನರಿಗೆ ಇಂತಹ ಕಾರ್ಯಕ್ರಮದ ಕುರಿತು ಏಕೆ ಮಾಹಿತಿ ನೀಡಿಲ್ಲ. ಇದು ಪರಿಸರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ. ಜನರಿಗೆ ಅರಿವು ಮೂಡಿಸಬೇಕಲ್ವಾ ಎಂದು ತರಾಟೆಗೆ ತೆಗೆದುಕೊಂಡ ಬಗ್ಗೆ ವರದಿಯಾಗಿದೆ.
ಮುಖ್ಯಮಂತ್ರಿಗಳು ಮತ್ತು ಸಚಿವರ ಪ್ರಶ್ನೆಗಳಿಗೆ ಮೌನವೇ ಅಧಿಕಾರಿಗಳ ಉತ್ತರವಾಗಿತ್ತು.
ಮರಕ್ಕೇ ಕೊಡಲಿ !!!
ವನಮಹೋತ್ಸವ ಕಾರ್ಯಕ್ರಮಕ್ಕಾಗಿ ಮರವೊಂದನ್ನು ಕಡಿದು ಹಾಕಿದ ಘಟನೆ ಬೆಳಕಿಗೆ ಬಂದಿದೆ.
ಶಾಂತಿ ಕಾಪಾಡಿ
ಸಮಾರಂಭದಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕೋಮು ಸಂಘರ್ಷ ಆಗಬಾರದು.ಯಾರೇ ಆಗಲಿ ಪ್ರಚೋದನ ಕಾರಿ ಆಗಿ ನಡೆದುಕೊಂಡರೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.
ಜಿಲ್ಲೆಯ ಎಲ್ಲರಿಗೂ ಮನವಿ ಮಾಡುವುದೆಂದರೆ ಶಾಂತಿ ಕಾಪಾಡಿ. ಗಾಳಿ ಸುದ್ದಿಗಳಿಗೆ ಕಿವಿಕೊಡಬೇಡಿ . ಕರಾವಳಿಯಲ್ಲಿ ನೂರಾರು ವರ್ಷಗಳಿಂದ ಸರ್ವ ಧರ್ಮ ಸಮನ್ವಯಗಳಿವೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕೆಲವರು ಯತ್ನಿಸುತ್ತಿದ್ದಾರೆ ಎಂದರು.
ಇದೇ ವೇಳೆ ಕರಾವಳಿಯಲ್ಲಿ ಕ್ರೈಸ್ತ ಮೆಷಿನರಿಗಳಿಲ್ಲವೆ, ಅವರು ಬಂದು ಎಷ್ಟು ವರ್ಷವಾಯಿತು ಹೇಳಿ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
MUST WATCH
ಹೊಸ ಸೇರ್ಪಡೆ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.