ಬಾಯಿ ಕ್ಯಾನ್ಸರ್: ನೆರವಿಗಾಗಿ ಮನವಿ
Team Udayavani, Jul 10, 2017, 3:15 AM IST
ಕುಂದಾಪುರ: ಗಂಗೊಳ್ಳಿ ಗ್ರಾಮದ ಮಲ್ಯರಬೆಟ್ಟು ಶ್ರೀ ನಾಗ ನಿಲಯ ನಿವಾಸಿ ಮಂಜಿ ಖಾರ್ವಿ (57) ಅವರು ಬಾಯಿ ಕ್ಯಾನ್ಸರ್ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ನೆರವಿನ ಅಗತ್ಯವಿದೆ.
ಅಸ್ವಸ್ಥಗೊಂಡಿರುವ ಮಂಜಿ ಖಾರ್ವಿ ಅವರನ್ನು ಮೇ 2ರಂದು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಳೆದ ಎರಡು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಗುಣಮುಖರಾಗಲು ಹೆಚ್ಚಿನ ಚಿಕಿತ್ಸೆಯ ನೀಡಬೇಕಾಗಿದ್ದು , ವೈದ್ಯಕೀಯ ವೆಚ್ಚಕ್ಕಾಗಿ ಸುಮಾರು 3.5 ಲಕ್ಷ ರೂ.ಗಳ ಅಗತ್ಯವಿರುತ್ತದೆ. ಮತ್ತು ಪ್ಲಾಸ್ಟಿಕ್ ಸರ್ಜರಿಗಾಗಿ ಸುಮಾರು ಒಂದರಿಂದ ಒಂದೂವರೆ ಲಕ್ಷ ರೂ.ಗಳು ಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಬಡ ಮೀನುಗಾರ ಕುಟುಂಬದ ಇವರಿಗೆ ಇಬ್ಬರು ಪುತ್ರರು . ಒಬ್ಬರು ಮೀನುಗಾರಿಕೆ ನಡೆಸುತ್ತಿದ್ದು, ಇನ್ನೊರ್ವರು ಗ್ಯಾರೇಜ್ನಲ್ಲಿ ದುಡಿಯುತ್ತಿದ್ದಾನೆ. ಕಳೆದ ಎರಡು ತಿಂಗಳಿನಿಂದ ವೈದ್ಯಕೀಯ ಚಿಕಿತ್ಸೆಗಾಗಿ ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿರುವ ಬಡ ಕುಟುಂಬ ಮುಂದಿನ ಚಿಕಿತ್ಸೆಗಾಗಿ ಅಷ್ಟು ದೊಡ್ಡ ಮೊತ್ತವನ್ನು ಹೊಂದಿಸಿಕೊಳ್ಳಲು ಕಷ್ಟವಾಗುತ್ತಿದ್ದು ಸಹೃದಯಿಗಳ ಉದಾರ ನೆರವನ್ನು ಅವರು ಕೋರಿದ್ದಾರೆ.
ಮಂಜಿ ಖಾರ್ವಿ ಅವರ ವೈದ್ಯಕೀಯ ಚಿಕಿತ್ಸೆಗೆ ನೆರವು ನೀಡಬಯಸುವ ಸಹೃದಯಿಗಳು ಗಂಗೊಳ್ಳಿ ಕೆನರಾ ಬ್ಯಾಂಕ್ ಶಾಖೆಯಲ್ಲಿರುವ ಪ್ರಕಾಶ ಖಾರ್ವಿ ಅವರ ಖಾತೆ ಸಂಖ್ಯೆ 0604101015664 (ಐಎಫ್ಎಸ್ಸಿ ಸಂಖ್ಯೆ : CNR000604) ಹಣ ವರ್ಗಾಯಿಸಿ ನೆರವಾಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.