16 ಬರಪೀಡಿತ ಜಿಲ್ಲೆಗಳ ಅಭಿವೃದ್ಧಿಗೆ ಕೇಂದ್ರದ ನೆರವು ಭಾಗ್ಯ?

Team Udayavani, Jul 10, 2017, 3:25 AM IST

Drought-district.jpg

ಚಿತ್ರದುರ್ಗ: ಶಾಶ್ವತ ಬರ ಹಾಗೂ ನೀರಿನ ಕೊರತೆ ಎದುರಿಸುತ್ತಿರುವ ರಾಜ್ಯದ 16 ಜಿಲ್ಲೆಗಳನ್ನು ಗುರುತಿಸಿರುವ ಕೇಂದ್ರ ಸರ್ಕಾರ, ಆ ಜಿಲ್ಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಜಿಲ್ಲೆಗಳಲ್ಲಿ ಕೇಂದ್ರದ ಅನುದಾನದಲ್ಲಿ ಬರ ಪರಿಹಾರ ಕಾಮಗಾರಿಗಳು ಆರಂಭಗೊಂಡು ಅಭಿವೃದ್ಧಿ ಹೊಂದಬಹುದು ಎಂಬ ನಿರೀಕ್ಷೆ ಹೊಂದಲಾಗಿದೆ.

ಕೇಂದ್ರ ಸರ್ಕಾರ ಗುರುತಿಸಿರುವ ಶಾಶ್ವತ ಬರಪೀಡಿತ ಜಿಲ್ಲೆಗಳ ಪಟ್ಟಿಯಲ್ಲಿ ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್‌, ವಿಜಯಪುರ, ದಾವಣಗೆರೆ, ಗದಗ, ಕಲಬುರಗಿ, ಹಾಸನ, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳು ಸ್ಥಾನ ಪಡೆದಿವೆ.

ಕ್ರಿಯಾ ಯೋಜನೆಗೆ ಸೂಚನೆ: ನಿರಂತರ ಬರ ಮತ್ತು ನೀರಿನ ಕೊರತೆ ಸಮಸ್ಯೆಯನ್ನು ಎದುರಿಸಲು ಈ ಜಿಲ್ಲೆಗಳ ಸಂಪೂರ್ಣ ಮಾಹಿತಿ ಸಂಗ್ರಹಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಬರಕ್ಕೆ ಪ್ರಮುಖ ಕಾರಣಗಳೇನು, ಬರದ ತೀವ್ರತೆ ಹೇಗಿದೆ, ಯಾವ ನಿರ್ದಿಷ್ಟ ಕಾರಣದಿಂದ ಬರ ಕಾಣಿಸಿಕೊಂಡಿದೆ, ಬರವನ್ನು ಶಾಶ್ವತವಾಗಿ ಹೋಗಲಾಡಿಸಲು ಯಾವ ರೀತಿಯ ಯೋಜನೆಗಳನ್ನು ಅನುಷ್ಠಾನ ಮಾಡಬೇಕು ಎನ್ನುವ ಸಮಗ್ರ ಮಾಹಿತಿ ಸಂಗ್ರಹಿಸಬೇಕು. ಕ್ರಿಯಾ ಯೋಜನೆ ಸಿದ್ಧಪಡಿಸಿ ಡಿಸೆಂಬರ್‌ ಅಂತ್ಯದೊಳಗೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ 16 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ, ಜಿಪಂ ಸಿಇಒ, ಕೃಷಿ, ತೋಟಗಾರಿಕೆ, ಪಶು, ಮೀನುಗಾರಿಕೆ, ಜಲಸಂಪನ್ಮೂಲ, ಸಣ್ಣ ನೀರಾವರಿ, ಕುಡಿಯುವ ನೀರು, ನರೇಗಾ ಇಲಾಖೆಗಳನ್ನೊಳಗೊಂಡ ಜಿಲ್ಲಾ ಮಟ್ಟದ ತಾಂತ್ರಿಕ ಮತ್ತು ಸಲಹಾ ಸಮಿತಿ ರಚನೆ ಮಾಡಬೇಕು. ಬರ ಹೋಗಲಾಡಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ರಾಜ್ಯ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಮತ್ತು ಸೇವೆಗಳ ಸರ್ಕಾರದ ಅಧಿಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದಾರೆ. 2000-2001 ಸಾಲಿನಿಂದ 2017-18ನೇ ಸಾಲಿನವರೆಗೆ ಬರದ ತೀವ್ರತೆ ಹೇಗಿತ್ತು, 2009-10 ರಿಂದ 2017-18ರವರೆಗೆ ಅಂತರ್ಜಲ ಮಟ್ಟ ವೃದ್ಧಿಗೆ ಕೈಗೊಂಡಿರುವ ಕ್ರಮಗಳೇನು, ಮುಂದಿನ 5 ವರ್ಷಗಳಲ್ಲಿ ನೀರಿನ ಉಳಿತಾಯಕ್ಕೆ ಯಾವ ಯೋಜನೆ ರೂಪಿಸಲಾಗಿದೆ, ಆಯಾ ಜಿಲ್ಲೆಗಳಲ್ಲಿ ಎಷ್ಟು ಹೆಕ್ಟೇರ್‌ ಪ್ರದೇಶದ ಭೂಮಿ ಬಳಕೆಯಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಜಿಲ್ಲಾಧಿ ಕಾರಿಗಳು ಒದಗಿಸಬೇಕಿದೆ.

ರಾಜ್ಯ ಸರ್ಕಾರದಿಂದ ಸಮಗ್ರ ಮಾಹಿತಿ ಸಲ್ಲಿಕೆಯಾದ ನಂತರ 16 ಬರಪೀಡಿತ ಜಿಲ್ಲೆಗಳ ಅಭಿವೃದ್ಧಿಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ.

ಶಾಶ್ವತ ಬರಗಾಲಕ್ಕೆ ತುತ್ತಾಗುವ 16 ಜಿಲ್ಲೆಗಳ ಮಾಹಿತಿ ಸಂಗ್ರಹಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಬರ ಹೋಗಲಾಡಿಸಲು ಶಾಶ್ವತ ಯೋಜನೆ ರೂಪಿಸುವ ಸಾಧ್ಯತೆ ಇದೆ. ಈ ಬಗ್ಗೆ ಕೆಲಸ ಆರಂಭಿಸಲಾಗಿದ್ದು, ಡಿಸೆಂಬರ್‌ ಅಂತ್ಯದೊಳಗೆ ಕೇಂದ್ರ ಸರ್ಕಾರಕ್ಕೆ ಕ್ರಿಯಾ ಯೋಜನೆಗಳನ್ನೊಳಗೊಂಡ ವರದಿ ಸಲ್ಲಿಸಲಾಗುವುದು.
– ಎಂ.ಕೆ. ಶ್ರೀರಂಗಯ್ಯ, ಚಿತ್ರದುರ್ಗ ಜಿಲ್ಲಾಧಿಕಾರಿ

ನಿರ್ದಿಷ್ಟವಾಗಿ ಅನುದಾನ ನೀಡುವುದಾಗಿ ಸರ್ಕಾರ ಎಲ್ಲಿಯೂ ಹೇಳಿಲ್ಲ. ಸಮಗ್ರ ಕ್ರಿಯಾ ಯೋಜನೆ ತಯಾರಿಸಿ ಕಳುಹಿಸಿಕೊಡುವಂತೆ ಸೂಚನೆ ನೀಡಿರುವುದರಿಂದ ಈಗಾಗಲೇ ಅನುಷ್ಠಾನದಲ್ಲಿರುವ ವಿವಿಧ ಯೋಜನೆಗಳು ಸೇರಿದಂತೆ ಅಂತರ್ಜಲ ವೃದ್ಧಿಯಂತಹ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ಸಿಗಬಹುದು.
– ಲಕ್ಷ್ಮಣ್‌, ಜಂಟಿ ಕೃಷಿ ನಿರ್ದೇಶಕ, ಚಿತ್ರದುರ್ಗ

– ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

CT Ravi

ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Gangolli: ಬೈಕ್‌ನಿಂದ ಬಿದ್ದು ಗಾಯ; ಪ್ರಕರಣ ದಾಖಲು

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.