ಡೆಂಘೀಗೆ ರಾಜ್ಯದ ಸೈನಿಕ ಸೇರಿ ಮೂವರ ಬಲಿ
Team Udayavani, Jul 10, 2017, 3:55 AM IST
ಬೆಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ ಮಹಾಮಾರಿ ಡೆಂಘೀಗೆ ಯೋಧ ಸೇರಿದಂತೆ ಮೂವರು ಬಲಿಯಾಗಿದ್ದಾರೆ. ಜಮ್ಮು-ಕಾಶ್ಮೀರದ ಸಿಆರ್‌ಪಿಎಫ್ ತುಕಡಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಜಮಖಂಡಿ ತಾಲೂಕಿನ ಚಿಮ್ಮಡ ಗ್ರಾಮದ ಸೈನಿಕ ಮಂಜುನಾಥ ಮೇತ್ರಿ (30) ಡೆಂಘೀ ಜ್ವರಕ್ಕೆ ಬಲಿಯಾದ ಯೋಧ.
ಅನಾರೋಗ್ಯದಿಂದ ದೆಹಲಿಯ ಸೈನಿಕರ ಮೀಸಲು ಸೇನಾ ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆದಿದ್ದ ಮೇತ್ರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ದೆಹಲಿಯಿಂದ ಬೆಳಗಾವಿಗೆ ವಿಮಾನದ ಮೂಲಕ ತರಲು ವ್ಯವಸ್ಥೆ ಮಾಡಿದ್ದು, ಅಲ್ಲಿಂದ ಚಿಮ್ಮಡ ಗ್ರಾಮಕ್ಕೆ ಬರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕನಕಪುರ ತಾಲೂಕಿನ ತೇರಿನದೊಡ್ಡಿ ಗ್ರಾಮದ ಮಹೇಶ್ ಪುತ್ರಿ ಗೀತಾ(5) ಡೆಂಘೀಗೆ ಬಲಿಯಾಗಿದ್ದಾಳೆ. ಮಳವಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಶುಕ್ರವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೂಂದು ಪ್ರಕರಣದಲ್ಲಿ ಮಳವಳ್ಳಿ ತಾಲೂಕಿನ ಗೌಡಗೆರೆ ಗ್ರಾಮದ ಸುಶ್ಮಿತಾ (19) ಡೆಂಘೀಗೆ ಬಲಿಯಾಗಿದ್ದಾರೆ.
ಭಾರತೀನಗರದ ಭಾರತಿ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದ ಸುಶ್ಮಿತಾ, ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.