ತಗ್ಗಿದ ನೀರಿನ ಮಟ್ಟ, ಏರಿದ ಜಲ ವಿವಾದ


Team Udayavani, Jul 10, 2017, 3:30 AM IST

Cauvery-reservoir.jpg

ಬೆಂಗಳೂರು: ಕಾವೇರಿ ಕೊಳ್ಳದ ಜಲಾಶಯಗಳು ಕಡಿಮೆ ಮಳೆಯಿಂದಾಗಿ ಖಾಲಿ ಬಿದ್ದಿರುವುದರಿಂದ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ಈ ಬಾರಿಯೂ ಕಾನೂನು ಹೋರಾಟ ತಾರಕ‌ಕ್ಕೇರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಎರಡೂ ರಾಜ್ಯಗಳ ನಡುವೆ ಮತ್ತೆ ಜಲ ಸಂಘರ್ಷದ ಭೀತಿ ಕಾಣಿಸಿಕೊಂಡಿದೆ.

ನ್ಯಾಯಾಧಿಕರಣ ನಿಗದಿಪಡಿಸಿದಂತೆ ಕಾವೇರಿ ನದಿಯಿಂದ ನೀರು ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಈಗಾಗಲೇ ತಮಿಳುನಾಡು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಆದರೆ, ಕಾವೇರಿ ಕೊಳ್ಳ ವ್ಯಾಪ್ತಿಯ ನಾಲ್ಕು ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಳೆದ ವರ್ಷಕ್ಕಿಂತಲೂ ಕಡಿಮೆ ಇದ್ದು, ನೀರು ಬಿಡುವ ಸ್ಥಿತಿಯಲ್ಲಿ ಕರ್ನಾಟಕ ಇಲ್ಲ. ಹೀಗಾಗಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಮುಂದೇನು ಎಂಬ ಗಂಭೀರ ಪ್ರಶ್ನೆ  ಈಗ ರಾಜ್ಯವನ್ನ ಕಾಡುವಂತಾಗಿದೆ.

ಕಳೆದ ವರ್ಷ ಮುಂಗಾರು ಅವಧಿ ಮುಗಿಯುತ್ತಿದ್ದಂತೆ ಅಂದರೆ ಸೆಪ್ಟೆಂಬರ್‌ ವೇಳೆ ತಮಿಳುನಾಡು ನೀರು ಹಂಚಿಕೆಗೆ ಸಂಬಂಧಿಸಿದಂತೆ ಕ್ಯಾತೆ ತೆಗೆದಿತ್ತು. ಆದರೆ, ಈ ಬಾರಿ ಮುಂಗಾರು ಆರಂಭವಾಗುತ್ತಿದ್ದಂತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವ ಮೂಲಕ ಕ್ಯಾತೆ ತೆಗೆಯುವ ಎಲ್ಲಾ ಮುನ್ಸೂಚನೆಗಳನ್ನ ನೀಡಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ಎರಡು ರಾಜ್ಯಗಳ ಮಧ್ಯೆ ಕಳೆದ ವರ್ಷಕ್ಕಿಂತಲೂ ತೀವ್ರ ಕಾನೂನು ಸಂಘರ್ಷ ಆರಂಭವಾಗಲಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವ ಅನಿವಾರ್ಯತೆಯೂ ಎದುರಾಗಲಿದೆ.

ಕಾವೇರಿ ನ್ಯಾಯಾಧಿಕರಣದ ಅಂತಿಮ ಆದೇಶದಂತೆ ಮಳೆಗಾಲ ಆರಂಭವಾಗುವ ಜೂನ್‌ ತಿಂಗಳಲ್ಲಿ ಕರ್ನಾಟಕ 10 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕಿತ್ತು. ಜುಲೈ ತಿಂಗಳಲ್ಲಿ 34 ಟಿಎಂಸಿ ನೀರು ಹರಿಸಬೇಕು. ಆದರೆ, ಈ ಬಾರಿಯೂ ಮಳೆ ಕೈಕೊಟ್ಟಿದ್ದರಿಂದ ಜೂನ್‌ ತಿಂಗಳಲ್ಲಿ 5 ಟಿಎಂಸಿ ನೀರು ಕೂಡ ಬಿಡಲು ಸಾಧ್ಯವಾಗಿಲ್ಲ. ಅಲ್ಲದೆ, ಜುಲೈ ತಿಂಗಳಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೇ ಇರುವುದರಿಂದ ಇದುವರೆಗೆ 1 ಟಿಎಂಸಿಯಷ್ಟು ನೀರು ಹರಿದಿಲ್ಲ.
ಮಳೆ ಕೈಕೊಟ್ಟಿರುವುದರಿಂದ ಕರ್ನಾಟಕ ನಿಗದಿತ  ಪ್ರಮಾಣದಲ್ಲಿ ನೀರು ಹರಿಸುವುದಿಲ್ಲ ಎಂಬ ಮುನ್ಸೂಚನೆ ಹಿನ್ನೆಲೆಯಲ್ಲಿ ಈಗಾಗಲೇ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿ ನಿಗದಿತ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿದೆ. ಇದಕ್ಕೆ ಪ್ರತಿಯಾಗಿ ವಾದ ಮಂಡಿಸಲು ಕರ್ನಾಟಕವೂ ಸಿದ್ಧತೆ ನಡೆಸುತ್ತಿದ್ದು, ನೀರು ಹರಿಸಲು ಸಾಧ್ಯವಾಗದಿರುವ ಪರಿಸ್ಥಿತಿಯನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಲು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸುತ್ತಿದೆ.

ಇನ್ನೂ ಖಾಲಿ ಬಿದ್ದಿವೆ ಜಲಾಶಯಗಳು: ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳ ಒಟ್ಟು ನೀರು ಸಂಗ್ರಹ ಸಾಮರ್ಥ್ಯ 104.55 ಟಿಎಂಸಿ ಆಗಿದ್ದು, ಪ್ರಸ್ತುತ ಡೆಡ್‌ ಸ್ಟೋರೇಜ್‌ ಹೊರತುಪಡಿಸಿ ಲಭ್ಯವಿರುವ ನೀರು 18.26 ಟಿಎಂಸಿ ಮಾತ್ರ. ಕಳೆದ ವರ್ಷ ಇದೇ ಅವಧಿಯಲ್ಲಿ ಡೆಡ್‌ ಸ್ಟೋರೇಜ್‌ ಹೊರತುಪಡಿಸಿ 34.19 ಟಿಎಂಸಿ ನೀರು ಇತ್ತು.

ಅದರಲ್ಲೂ ಮುಖ್ಯವಾಗಿ ಕೆಆರ್‌ಎಸ್‌ನಲ್ಲಿ ಡೆಡ್‌ ಸ್ಟೋರೇಜ್‌ ಹೊರತುಪಡಿಸಿ 5.39 ಟಿಎಂಸಿ ನೀರು ಮಾತ್ರ ಇದೆ. ಇದು ಜಲಾಶಯದ ಸಾಮರ್ಥ್ಯದ ಶೇ. 12ರಷ್ಟು ಮಾತ್ರವಾಗಿದ್ದು, ಭರ್ತಿಯಾಗಲು ಇನ್ನೂ ಸುಮಾರು 40 ಟಿಎಂಸಿ ನೀರು ಅಗತ್ಯವಿದೆ. ಅದೇ ರೀತಿ ಜಲಾಶಯದ ಒಳಹರಿವಿನ ಪ್ರಮಾಣವೂ 4497 ಕ್ಯೂಸೆಕ್‌ ಮಾತ್ರ ಇದ್ದು, ಹೊರಹರಿವು 2080 ಕ್ಯೂಸೆಕ್‌ ಇದೆ. ಕಳೆದ ವರ್ಷ ಇದೇ ಅವಧಿಗೆ 7347 ಕ್ಯೂಸೆಕ್‌ ಒಳಹರಿವು ಮತ್ತು 3886 ಕ್ಯೂಸೆಕ್‌ ಹೊರಹರಿವು ಇತ್ತು.

ಕಳೆದ ವರ್ಷಕ್ಕಿಂತಲೂ ಕಡಿಮೆ ಮಳೆ: ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಇದುವರೆಗೆ ಮಳೆ ಪ್ರಮಾಣ ಕಳೆದ ವರ್ಷಕ್ಕಿಂತಲೂ ಕಡಿಮೆಯಾಗಿದೆ. ಕಳೆದ ವರ್ಷ ಈ ಅವಧಿಯಲ್ಲಿ ಶೇ. 38ರಷ್ಟು ಮಳೆ ಕೊರತೆ ಕಂಡುಬಂದಿದ್ದರೆ ಈ ವರ್ಷ ಶೇ. 45ರಷ್ಟು ಕೊರತೆಯಿದೆ. ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಗೆ ಹೆಚ್ಚು ನೀರು ಹರಿದು ಬರಬೇಕಾದರೆ ಕೇರಳದ ವೈನಾಡು ಪ್ರದೇಶ ಮತ್ತು ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಬೇಕು. ಪ್ರಸ್ತುತ ಈ ಪ್ರದೇಶದಲ್ಲಿ ನಿರೀಕ್ಷಿತ ಮಳೆ ಬೀಳುತ್ತಿಲ್ಲ. ಮುಂದಿನ ದಿನಗಳಲ್ಲಿ ಮಳೆಯಾದರೂ ಜಲಾಶಯಕ್ಕೆ ನೀರು ಬಂದು ಭರ್ತಿಯಾಗುವುದು ಕಷ್ಟಸಾಧ್ಯ ಎನ್ನಲಾಗಿದೆ.

ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಮಟ್ಟ- ಟಿಎಂಸಿಗಳಲ್ಲಿ (ಡೆಡ್‌ ಸ್ಟೋರೇಜ್‌ ಹೊರತುಪಡಿಸಿ)
ಜಲಾಶಯ    ಗರಿಷ್ಠ ಸಂಗ್ರಹ    ಇಂದಿನವರೆಗಿನ ಸಂಗ್ರಹಕಳೆದ ವರ್ಷ ಇದೇ ದಿನದ ಸಂಗ್ರಹ
ಕೆಆರ್‌ಎಸ್‌    45.05    5.39    11.60
ಕಬಿನಿ    15.67    4.80    5.72
ಹೇಮಾವತಿ    35.76    5.09    11.44
ಹಾರಂಗಿ    8.07    2.98    5.97

– ಪ್ರದೀಪಕುಮಾರ್‌ ಎಂ

ಟಾಪ್ ನ್ಯೂಸ್

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

pejavar

ವಚನ, ದಾಸ ಸಾಹಿತ್ಯ ಮನೆ ಮನೆಗೆ ತಲುಪಿಸೋಣ: ಪೇಜಾವರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

1-vvv

ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್‌’ನಲ್ಲಿ ಪಲಿಮಾರು ಶ್ರೀ ಅಭಿಮತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.