ಆಧಾರ ಇಲ್ಲದಿದ್ದರೆ ಉದ್ಯೋಗ ರದ್ದು ಭೀತಿ; ಕೇಂದ್ರದಿಂದ ತಿಂಗಳ ಗಡುವು
Team Udayavani, Jul 10, 2017, 3:45 AM IST
ಬೆಂಗಳೂರು: ರಾಜ್ಯ ಮತ್ತು ಕೇಂದ್ರಗಳೆರಡೂ ಸರ್ಕಾರದ ಬಹುತೇಕ ಯೋಜನೆಗಳಿಗೆ ಆಧಾರ್ ಕಡ್ಡಾಯಗೊಳಿಸಿವೆ. ಆದರೆ ರಾಜ್ಯದಲ್ಲಿ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ “ಉದ್ಯೋಗ ಖಾತರಿ’ಯಲ್ಲಿ 44 ಲಕ್ಷ ಜನ ಫಲಾನುಭವಿಗಳು ಇನ್ನೂ ಆಧಾರ್ ಕಾರ್ಡ್ ಇಲ್ಲದೇ ನಿರಾತಂಕವಾಗಿ ಹಣ ಪಡೆಯುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.
ಇದನ್ನ ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ನರೇಗ ಯೋಜನೆಗೆ ಆಧಾರ್ ಕಾರ್ಡ್ ನೋಂದಣಿ ಮಾಡದ ಫಲಾನುಭವಿಗಳನ್ನೇ ರದ್ದುಪಡಿಸುವ ಎಚ್ಚರಿಕೆಯ ಸಂದೇಶವನ್ನು ರಾಜ್ಯ ಸರ್ಕಾರಕ್ಕೆ ರವಾನಿಸಿದೆ.
ಕೇಂದ್ರ ಸರ್ಕಾರದ ಈ ನಿಲುವಿನಿಂದಾಗಿ ಆಧಾರ್ ನೋಂದಣಿ ಮಾಡದಿದ್ದರೆ ರಾಜ್ಯದ 44 ಲಕ್ಷ ಫಲಾನುಭವಿಗಳು ಉದ್ಯೋಗ ಖಾತರಿಯ ಜಾಬ್ ಕಾರ್ಡ್‌ಗಳನ್ನೇ ಕಳೆದುಕೊಳ್ಳುವ ಭೀತಿ ಎದುರಿಸುವಂತಾಗಿದೆ. ಎಲ್ಲ ಉದ್ಯೋಗ ಖಾತರಿ ಫಲಾನುಭವಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಬೇಕು ಹಾಗೂ ಆ ಆಧಾರ್ ಸಂಖ್ಯೆಯನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜೋಡಣೆ ಮಾಡಲು ಒಂದು ತಿಂಗಳು ಗಡುವನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ, ರಾಜ್ಯ ಸರ್ಕಾರಕ್ಕೆ ವಿಧಿಸಿದೆ.
ಈ ಅವಧಿಯಲ್ಲಿ ನರೇಗ ಯೋಜನೆಗೆ ಆಧಾರ್ ಜೋಡಣೆ ಮಾಡಲು ವಿಫಲವಾದಲ್ಲಿ ಸಂಬಂಧಪಟ್ಟ ಫಲಾನುಭವಿಗಳ ಹೆಸರನ್ನು ಉದ್ಯೋಗ ಖಾತರಿ ಯೋಜನೆಯಿಂದ ಕೇಂದ್ರ ಸರ್ಕಾರ ಕೈಬಿಡುವ ಅಪಾಯವಿದೆ.
ಆಧಾರ್ ನೋಂದಣಿಗಾಗಿ ರಾಜ್ಯ ಸರ್ಕಾರಗಳಿಗೆ ತಿಂಗಳ ಗಡುವು ನೀಡಿರುವ ಮೋದಿ ಸರ್ಕಾರ ಅದಕ್ಕಾಗಿ ಜು.25ರಿಂದ ಸೆ.10ರವರೆಗೆ ಗ್ರಾಮ ಪಂಚಾಯಿತಿ ಮತ್ತು ಬ್ಲಾಕ್ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಏರ್ಪಡಿಸಿ ನರೇಗಾಕ್ಕೆ ಫಲಾನುಭವಿಗಳ ಆಧಾರ್ ಸಂಖ್ಯೆಯನ್ನ ಕಡ್ಡಾಯವಾಗಿ ಜೋಡಣೆ ಮಾಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ನರೇಗಾ) ಯೋಜನೆಯಡಿ ರಾಜ್ಯದಲ್ಲಿ 53.78 ಲಕ್ಷ ಜಾಬ್‌ಕಾರ್ಡ್‌ಗಳಿದ್ದು, ಅದರಲ್ಲಿ 1.38 ಕೋಟಿ ಫಲಾನುಭವಿಗಳಿದ್ದಾರೆ. ಈ ಪೈಕಿ 94.38 ಲಕ್ಷ, ಅಂದರೆ ಶೇ. 68.32ರಷ್ಟು ಫಲಾನುಭವಿಗಳು ಆಧಾರ್ ಸಂಖ್ಯೆ ಹೊಂದಿದ್ದು, 43.76 ಲಕ್ಷ ಫಲಾನುಭವಿಗಳಿಗೆ ಆಧಾರ್ ಸಂಖ್ಯೆ ಇಲ್ಲ.
ಉದ್ಯೋಗ ಖಾತರಿಯ ವೇತನವನ್ನು “ನೇರ ನಗದು ವರ್ಗಾವಣೆ’ (ಡಿಬಿಟಿ) ಮೂಲಕ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮೆ ಮಾಡುವ ವ್ಯವಸ್ಥೆ ಇದೆ. ಇದಕ್ಕೆ ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಿಸುವುದು ಕಡ್ಡಾಯಗೊಳಿಸಲಾಗಿದೆ. ಆದರೆ, 1.38 ಕೋಟಿ ಫಲಾನುಭವಿಗಳ ಪೈಕಿ 80.73 ಲಕ್ಷ ಮಂದಿ ಬ್ಯಾಂಕ್ ಖಾತೆಗೆ ಜೊತೆಗೆ ಆಧಾರ್ ಸಂಖ್ಯೆ ಹೊಂದಿದ್ದಾರೆ.
ರಾಜ್ಯದಲ್ಲಿ ಆಯಾ ಜಿಲ್ಲೆಯ ಒಟ್ಟು ಫಲಾನುಭವಿಗಳ ಪೈಕಿ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು 3.91 ಲಕ್ಷ, ಕೊಪ್ಪಳ 2.91 ಲಕ್ಷ, ಬಳ್ಳಾರಿ 2.54 ಲಕ್ಷ, ವಿಜಯಪುರ 2.36 ಲಕ್ಷ ಮತ್ತು ಚಿತ್ರದುರ್ಗ ಜಿಲ್ಲೆಯ 2.15 ಲಕ್ಷ ಫಲಾನುಭವಿಗಳಿಗೆ ಆಧಾರ್ ಸಂಖ್ಯೆ ಇಲ್ಲ. ಅದೇ ರೀತಿ ರಾಯಚೂರು ಜಿಲ್ಲೆ ಶೇ.94.07, ಉಡುಪಿ ಶೇ. 90.31, ಬೆಂಗಳೂರು ಗ್ರಾಮಾಂತರ ಶೇ.80.29, ಹಾಸನ ಶೇ. 76.52 ಮತ್ತು ಧಾರವಾಡ ಶೇ.76.44ರಂತೆ ಅತಿ ಹೆಚ್ಚು ಫಲಾನುಭವಿಗಳು ಆಧಾರ್ ಸಂಖ್ಯೆ ಹೊಂದಿದ್ದಾರೆ.
ವಿಶೇಷ ಶಿಬಿರಕ್ಕೆ ಕೇಂದ್ರದ ಸೂಚನೆ: ಎಲ್ಲ ಬಗೆಯ ಬ್ಯಾಂಕ್ ಖಾತೆದಾರರು 2017ರ ಡಿ.31ರೊಳಗೆ ತಮ್ಮ ಖಾತೆಯೊಂದಿಗೆ ಆಧಾರ್ ಸಂಖ್ಯೆ ಜೋಡಿಸಬೇಕು ಎಂದು ಕೇಂದ್ರ ಹಣಕಾಸು ಸಚಿವಾಲಯ ನಿರ್ದೇಶನ ಕೊಟ್ಟಿದೆ. ಆದರೆ, ಇಡೀ ದೇಶದಲ್ಲಿ 5 ಕೋಟಿ ಉದ್ಯೋಗ ಖಾತರಿ ಫಲಾನುಭವಿಗಳು ಆಧಾರ್ ಸಂಖ್ಯೆ ಜೋಡಣೆ ಮಾಡಿಲ್ಲ. ಅದರಲ್ಲಿ ಕರ್ನಾಟಕದ 44 ಲಕ್ಷ ಫಲಾನುಭವಿಗಳು ಸೇರಿದ್ದಾರೆ. ಇವರಿಗಾಗಿ ಜುಲೈ 25ರಿಂದ ಸೆ.10ರವರೆಗೆ ಗ್ರಾಮ ಪಂಚಾಯಿತಿ ಹಾಗೂ ಬ್ಲಾಕ್ ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ನಡೆಸಬೇಕು, ಶಿಬಿರದ ವಿವರಗಳನ್ನು ಜು.20ರೊಳಗೆ ಕೇಂದ್ರಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿರುವ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ, ಈ ಅವಧಿಯಲ್ಲಿ ಧಾರ್ ಸಂಖ್ಯೆ ಜೋಡಣೆ ಮಾಡಿಕೊಳ್ಳದ ಫಲಾನುಭವಿಗಳ ಖಾತೆ ರದ್ದುಗೊಳ್ಳುವ ಸಾಧ್ಯತೆಯಿರುತ್ತದೆ ಎಂದು ಎಚ್ಚರಿಕೆ ನೀಡಿದೆ.
“ಆಧಾರ್ ಸಂಖ್ಯೆ ಇಲ್ಲದ ಉದ್ಯೋಗ ಖಾತರಿ ಫಲಾನುಭವಿಗಳಿಗಾಗಿ ವಿಶೇಷ ಶಿಬಿರಗಳನ್ನು ಹಮ್ಮಿಕೊಳ್ಳುವಂತೆ ಕೇಂದ್ರ ಸರ್ಕಾರದಿಂದ ಈಗಷ್ಟೇ ಮಾರ್ಗಸೂಚಿ ಬಂದಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಏನು ಮಾಡಬೇಕು ಆನ್ನುವುದರ ರೂಪುರೇಷೆಗಳನ್ನು ಒಂದೆರಡು ದಿನಗಳಲ್ಲಿ ತಯಾರಿಸಲಾಗುವುದು. ಶಿಬಿರದ ಅವಧಿಯಲ್ಲಿ ಎಲ್ಲ ಫಲಾನುಭವಿಗಳ ಆಧಾರ್ ಸಂಖ್ಯೆಯನ್ನು ಅವರ ಬ್ಯಾಂಕ್ ಖಾತೆಗಳಿಗೆ ಜೋಡಣೆ ಮಾಡಿಸಲಾಗುವುದು’.
- ಉಪೇಂದ್ರ ಪ್ರತಾಪ್ ಸಿಂಗ್, ಆಯುಕ್ತರು, ಉದ್ಯೋಗ ಖಾತರಿ ಯೋಜನೆ.
– ರಫೀಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.