ಕೇಂದ್ರ ಭಾಗದ ರಸ್ತೆಗಳು ಶೀಘ್ರ ಸ್ಮಾರ್ಟ್‌!


Team Udayavani, Jul 10, 2017, 11:36 AM IST

central-smart.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಎಲ್ಲ ಪ್ರಮುಖ ರಸ್ತೆಗಳನ್ನು ಟೆಂಡರ್‌ಶ್ಯೂರ್‌ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಬಿಬಿಎಂಪಿ ಯೋಜನೆ ರೂಪಿಸಿದೆ. ಅದರ ಅಂಗವಾಗಿ ಸದ್ಯ ಪ್ರಮುಖ ಆರು ರಸ್ತೆಗಳನ್ನು ಟೆಂಡರ್‌ಶ್ಯೂರ್‌ ರಸ್ತೆಗಳಾಗಿ ಪರಿವರ್ತಿಸುವ ಯೋಜನೆ ಸಿದ್ಧಪಡಿಸಿದೆ. 

ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಸ್ಮಾರ್ಟ್‌ಸಿಟಿ ಯೋಜನೆಗೆ ಗಾಂಧಿನಗರ, ಶಿವಾಜಿನಗರ, ಚಾಮರಾಜಪೇಟೆ ಹಾಗೂ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರಗಳ 16 ವಾರ್ಡ್‌ಗಳನ್ನು ಗುರುತಿಸಲಾಗಿದೆ. ಅದರ ಹೊರತಾಗಿರುವ ಹಲವು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಪಾಲಿಕೆಯ ಅಧಿಕಾರಿಗಳು ಯೋಜನೆ ರೂಪಿಸಿದ್ದು, ಗಾಂಧಿನಗರ ಹಾಗೂ ಚಾಮರಾಜಪೇಟೆ ವ್ಯಾಪ್ತಿಯ ಆರು ರಸ್ತೆಗಳನ್ನು ಟೆಂಡರ್‌ ಶ್ಯೂರ್‌ ಯೋಜನೆಗೆ ಆಯ್ಕೆ ಮಾಡಿಕೊಂಡಿದ್ದಾರೆ.

ಸ್ಮಾರ್ಟ್‌ಸಿಟಿ ಯೋಜನೆಯ ಸ್ಪರ್ಧೆಗೆ ತಯಾರಿಸಿರುವ ಪ್ರಸ್ತಾವನೆಯಲ್ಲಿ ಟೆಂಡರ್‌ಶ್ಯೂರ್‌ ಮಾದರಿ ರಸ್ತೆಗಳ ನಿರ್ಮಾಣ ಯೋಜನೆ ಅಧಿಕಾರಿಗಳು ಉಲ್ಲೇಖೀಸಿದ್ದಾರೆ. ಅದರಂತೆ ಅತಿಹೆಚ್ಚು ಜನಸಂದಣಿಯಿರುವ ಮೆಜೆಸ್ಟಿಕ್‌, ಕೆ.ಆರ್‌.ಮಾರುಕಟ್ಟೆಯಂತಹ ಭಾಗಗಳಲ್ಲಿನ ರಸ್ತೆಗಳನ್ನೂ ಟೆಂಡರ್‌ಶ್ಯೂರ್‌ ರಸ್ತೆಗಳಾಗಿ ಅಭಿವೃದ್ಧಿಪಡಿಸಲು ಅಧಿಕಾರಿಗಳು ಟೆಂಡರ್‌ ಅಂತಿಮಗೊಳಿಸಿ, ಕಡತವನ್ನು ಸರ್ಕಾರ ಅನುಮೋದನೆಗೆ ಕಳುಹಿಸಿದ್ದಾರೆ.

ಗಾಂಧಿನಗರ ಹಾಗೂ ಚಾಮರಾಜಪೇಟೆ ವಿಧಾನ ಸಭೆ ಕ್ಷೇತ್ರದಲ್ಲಿನ ಆರು ರಸ್ತೆಗಳನ್ನು ಟೆಂಡರ್‌ಶ್ಯೂರ್‌ ಮಾದರಿಯಡಿಯಲ್ಲಿ ಅಭಿವೃದ್ಧಿಪಡಿಸಲು ಪಾಲಿಕೆ ತೀರ್ಮಾನಿಸಿದೆ. ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ನಗರದ ಕೇಂದ್ರ ಭಾಗದಲ್ಲಿರುವ 10 ಕಿಲೋ ಮೀಟರ್‌ಗೂ ಹೆಚ್ಚಿನ ವ್ಯಾಪ್ತಿಯ ರಸ್ತೆಗಳನ್ನು ಟೆಂಡರ್‌ ಶ್ಯೂರ್‌ ಅಡಿಯಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. 

ಐತಿಹಾಸಿಕ ಮಾರುಕಟ್ಟೆ ಮೇಲ್ದರ್ಜೆಗೆ
ನಗರದ ಅತ್ಯಂತ ಪುರಾತನವಾದ ಕೃಷ್ಣರಾಜ ಮಾರುಕಟ್ಟೆಯನ್ನು (ಕೆ.ಆರ್‌.ಮಾರುಕಟ್ಟೆ) ಮೇಲ್ದರ್ಜೆàರಿಸಲು ಬಿಬಿಎಂಪಿ ವತಿಯಿಂದ ಯೋಜನೆ ರೂಪಿಸಲಾಗಿದೆ. ಅದರಂತೆ ಸ್ಮಾರ್ಟ್‌ಸಿಟಿ ಯೋಜನೆಯಡಿ ಮಾರುಕಟ್ಟೆ ಅಭಿವೃದ್ಧಿಗೆ ನಗರಾಭಿವೃದ್ಧಿ ಇಲಾಖೆ ಶೀಘ್ರದಲ್ಲಿಯೇ ಟೆಂಡರ್‌ ಆಹ್ವಾನಿಸಲಿದೆ. ಸ್ಮಾರ್ಟ್‌ಸಿಟಿ ಯೋಜನೆ ಪ್ರಸ್ತಾವನೆಯಲ್ಲಿ ಪಾರಂಪರಿಕ ಮಾರುಕಟ್ಟೆಯ ಸೌಂದರ್ಯ ಹೆಚ್ಚಿಸುವುದರೊಂದಿಗೆ ಸುಸಜ್ಜಿತ ಮಳಿಗೆಗಳು, ವಾಹನ ನಿಲುಗಡೆ ವ್ಯವಸ್ಥೆಯಂತಹ ಸೌಲಭ್ಯಗಳನ್ನು ಕಲ್ಪಿಸುವ ವಿಚಾರವನ್ನು ಉಲ್ಲೇಖೀಸಲಾಗಿದೆ. 

ಯೋಜನೆಗೆ ಆಯ್ಕೆಯಾದ ರಸ್ತೆಗಳು
-ರಸ್ತೆ    ಉದ್ದ   (ಕಿಲೋ ಮೀಟರ್‌ಗಳಲ್ಲಿ)
-ಸುಬೇದಾರ್‌ ಛತ್ರಂ ರಸ್ತೆ-0.60
-ಗುಬ್ಬಿ ತೋಟದಪ್ಪ ರಸ್ತೆ-1.68
-ಧನ್ವಂತರಿ ರಸ್ತೆ-1.05
-ಡಬ್ಲ್ಯು.ಎಚ್‌.ಹನುಮಂತಪ್ಪ ರಸ್ತೆ-0.68
-ಗಾಂಧಿನಗರ ಸುತ್ತಮುತ್ತಲಿನ ರಸ್ತೆಗಳು-4.60 
-ಕೆ.ಆರ್‌.ಮಾರುಕಟ್ಟೆ ಬಳಿ ರಸ್ತೆಗಳು-2.00
-ಒಟ್ಟು-10.61

ಬಿಬಿಎಂಪಿ ವತಿಯಿಂದ ಕೇಂದ್ರ ಭಾಗದಲ್ಲಿರುವ ಆರು ರಸ್ತೆಗಳನ್ನು ಟೆಂಡರ್‌ಶ್ಯೂರ್‌ ಯೋಜನೆಯಡಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಟೆಂಡರ್‌ಅಂತಿಮಗೊಳಿಸಿ ಸರ್ಕಾರದ ಅನುಮೋದನೆಗಾಗಿ ಕಳುಹಿಸಲಾಗಿದೆ. ಸದ್ಯ ಯೋಜನೆ ರೂಪಿಸಿರುವ ಆರು ರಸ್ತೆಗಳು ಸ್ಮಾರ್ಟ್‌ಸಿಟಿ ಯೋಜನೆಯಡಿಯಲ್ಲಿ ಬರುವುದಿಲ್ಲ. 
-ಎನ್‌. ಮಂಜುನಾಥ್‌ ಪ್ರಸಾದ್‌, ಬಿಬಿಎಂಪಿ ಆಯುಕ್ತ 

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.