ಡೆಂಘೀ ಸಾವು ಮುಚ್ಚಿಡುತ್ತಿರುವ ಜಿಲ್ಲಾಡಳಿತ
Team Udayavani, Jul 10, 2017, 11:53 AM IST
ಮೈಸೂರು: ಮಾರಕ ಡೆಂಘೀ ಜ್ವರ ನಿಯಂತ್ರಣ ಮಾಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ದೂರಿದರು. ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಜನವರಿಯಿಂದ ಡೆಂಘೀ ಜ್ವರದ ಪ್ರಕರಣಗಳು ವರದಿಯಾಗುತ್ತಿವೆ.
ಆದರೂ ಜಿಲ್ಲಾಡಳಿತ ಸಕಾಲದಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಪರಿಣಾಮ ಡೆಂಘೀ ಜ್ವರ ಇದೀಗ ವ್ಯಾಪಕವಾಗಿ ಹರಡಿದೆ ಎಂದರು. ಡೆಂಘೀ ಜ್ವರ ಬಂದು ರೋಗಿಗಳು ಸಾವನ್ನಪ್ಪಿರುವ ಪ್ರಕರಣಗಳನ್ನು ಜಿಲ್ಲಾಡಳಿತ ಮರೆಮಾಚಿದೆ. ಹೀಗಾಗಿ ಡೆಂಘೀಯಿಂದ ಸಾವನ್ನಪ್ಪಿರುವವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ.
ಮಾಹಿತಿಗಳನ್ನು ಕಲೆಹಾಕಿದ ನಂತರ ಜಿಲ್ಲಾಡಳಿತದ ವೈಫಲ್ಯದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಎಚ್ಚರಿಕೆ ನೀಡಿದರು. ಜಿಲ್ಲೆಯಾದ್ಯಂತ ವೈರಲ್ ಜ್ವರ ಹಾಗೂ ಡೆಂಘೀ ಜ್ವರ ಹಬ್ಬುತ್ತಿರುವ ಹಿನ್ನೆಲೆ ಡೆಂಘೀ ಪೀಡಿತರಿಗೆ ಆಸ್ಪತ್ರೆಗಳಲ್ಲಿ ಎದುರಾಗಿರುವ ರಕ್ತದ ಕೊರತೆ ನೀಗಿಸಲು ರಕ್ತದಾನ ಶಿಬಿರ ನಡೆಸುತ್ತಿರುವುದಾಗಿ ಹೇಳಿದರು.
ಆರ್ಬಿಐನ ನೂರಕ್ಕೂ ಹೆಚ್ಚು ನೌಕರರು ಹಾಗೂ ಯುವಕರು ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ನಗರಪಾಲಿಕೆ ಸದಸ್ಯ ಬಿ.ವಿ. ಮಂಜುನಾಥ್, ಸೇಪ್ವೀಲ್ಸ್ ಮುಖ್ಯಸ್ಥ ಪ್ರಶಾಂತ್, ಬಿಜೆಪಿ ಮುಖಂಡರಾದ ಜೋಗಿ ಮಂಜು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Puttur: ಕುಂಜಾಡಿ; ಸೇತುವೆ ಕಾಮಗಾರಿ ಪುನರಾರಂಭ
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.