ಶೋಷಿತರ ಬಗ್ಗೆ ಒಲವು ತೋರುವ ರಾಜ್ಯಸರ್ಕಾರ


Team Udayavani, Jul 10, 2017, 11:53 AM IST

mys3.jpg

ಪಿರಿಯಾಪಟ್ಟಣ: ತಾಲೂಕಿನಲ್ಲಿ ಸಂಪರ್ಕ ರಸ್ತೆಗಳಿಗೆ ಹೆಚ್ಚು ಆದ್ಯತೆ ನೀಡುತ್ತಿರುವುದರಿಂದ ಮುಖ್ಯ ರಸ್ತೆಗಳಿಗೆ ಸಂಚಾರದ ಒತ್ತಡ ಕಡಿಮೆಯಾಗಲಿದೆ ಎಂದು ಶಾಸಕ ಕೆ.ವೆಂಕಟೇಶ್‌ ಅಭಿಪ್ರಾಯಪಟ್ಟರು. ತಾಲೂಕಿನ ಹರದೂರು, ಹಾರನಹಳ್ಳಿ ಕೆಸವಿನಕೆರೆ, ಆನಂದನಗರ, ಬೆಣಗಾಲು ಬೋವಿಕಾಲೋನಿ, ಕಾನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ 8.40 ಕೋಟಿ ರೂ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿ ಬೀಸನಕುಪ್ಪೆ ಕೊಪ್ಪಲಿನಲ್ಲಿ ಮಾತನಾಡಿದರು.

ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ದೇವಾಲಯಗಳ ನಿರ್ಮಾಣಕ್ಕೆ ಹಣ ನೀಡುವಂತೆ ಹೆಚ್ಚು ಬೇಡಿಕೆಗಳು ಬರುತ್ತಿದ್ದು ಸರ್ಕಾರವೇ ಹೆಚ್ಚು ಹಣ ನೀಡಿ ಎಂದು ಒತ್ತಡ ಹೇರುವ ಬದಲು ಗ್ರಾಮಸ್ಥರೇ ಕೈಲಾದ ವಂತಿಕೆ ಸಂಗ್ರಹಿಸುವ ಮೂಲಕ ದೇವಾಲಯವನ್ನು ಪೂರ್ಣಗೊಳಿಸಿ ಅದು ಸಾಧ್ಯವಿಲ್ಲದಿದ್ದರೆ ಕೊಟ್ಟ ಹಣದಲ್ಲೇ ಸಾಧ್ಯವಾದಷ್ಟು ದೇವಾಲಯಗಳ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು.

ರಾಜ್ಯ ಸರ್ಕಾರವು ರೈತರ ಸಾಲ ಮನ್ನಾ, ಶೈಕ್ಷಣಿಕ ಪ್ರಗತಿಗಾಗಿ, ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಬಸ್‌ಪಾಸ್‌ ಸೌಲಭ್ಯ, ಉಚಿತ ಅಕ್ಕಿ ವಿತರಣೆ, ಮಹಿಳಾ ಸಬಲೀಕರಣ ಸೇರಿದಂತೆ 155 ಭರವಸೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬಡವರ ಶೋಷಿತರ ಬಗ್ಗೆ ಹೆಚ್ಚು ಒಲವು ತೋರುತ್ತಾ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗುತ್ತಿದೆ ಎಂದರು.

ಇಡೀ ರಾಜ್ಯದಲ್ಲಿ ಪಿರಿಯಾಪಟ್ಟಣಕ್ಕೆ ಅತಿಹೆಚ್ಚು ಅನುದಾನ ತರುವ ಮೂಲಕ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಸಹ ತಾಲೂಕಿನ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧವಿದ್ದೇನೆ. ತಾಲೂಕಿನ ಅಭಿವೃದ್ಧಿ ಸಹಿಸದ ಕೆಲವು ವಿರೋಧಿಗಳು ತಮ್ಮನು ಟೀಕಿಸುತ್ತಿರುವುದು ಅವರ ಅಸಹಾಯಕತೆ ತೋರಿಸುತ್ತಿದೆ ಎಂದು ಹೇಳಿದರು.

ವಿರೋಧಿಗಳ ಟೀಕೆಗಳಿಗೆ ಕಿವಿಗೊಡದೆ ತಾಲೂಕಿನಲ್ಲಿರುವ ವಾಸ್ತವ ಸಂಗತಿ ತಿಳಿದುಕೊಂಡು ಮತಚಲಾಯಿಸಿ, ತಾಲೂಕಿನಲ್ಲಿ ಅಭಿವೃದ್ಧಿ ಕೆಲಸ ಮಾಡಿ ದವರನ್ನು ಬಿಟ್ಟು ಸುಳ್ಳು ಹೇಳಿಕೊಂಡು ಸುತ್ತಾಡುತ್ತಾ ಜನರನ್ನು ತಪ್ಪು ದಾರಿಗೆ ತಳ್ಳುತ್ತಿರುವವರನ್ನು ರಾಜಕೀಯದಿಂದ ದೂರವಿಡುವಂತೆ ತಿಳಿಸಿದರು.

ತಾಪಂ ಅಧ್ಯಕ್ಷೆ ಕೆ.ಆರ್‌.ನಿರೂಪ, ಜಿಪಂ ಸದಸ್ಯ ಪಿ.ರಾಜೇಂದ್ರ, ತಾಪಂ ಸದಸ್ಯರಾದ ಮಾನು ಇನಾಯತ್‌, ಕುಂಜಣ್ಣ, ಕಾರ್ನಡ್‌, ಜಯಂತಿ, ಸೋಮಶೇಖರ್‌, ಎಪಿಎಂಸಿ ಅಧ್ಯಕ್ಷ ಆರ್‌.ಟಿ.ರೇವಣ್ಣ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಎ.ಎಸ್‌.ಚಂದ್ರಶೇಖರ್‌, ಉಪಾಧ್ಯಕ್ಷ ಕೆ.ಎಂ.ಶಿವಣ್ಣ, ತಹಶೀಲ್ದಾರ್‌ ಜೆ. ಮಹೇಶ್‌, ಇಒ ಬಸವರಾಜ್‌, ಸಹಾಯಕ ನಿರ್ದೇಶಕರಾದ, ಡಾ.ಚಾಮರಾಜ್‌, ಸುದರ್ಶನ್‌, ಎಇಇಗಳಾದ ಪ್ರಕಾಶ್‌, ಪ್ರಭು,

-ಬಿಇಒ ಆರ್‌.ಕರೀಗೌಡ, ಸಿಡಿಪಿಒ ಇಂದಿರಾ,  ಗ್ರಾ.ಪಂ ಅಧ್ಯಕ್ಷೆ ಸಾವಿತ್ರಮ್ಮ, ಗಣೇಶ್‌, ರಾಣಿ, ಉಪಾಧ್ಯಕ್ಷೆ ಯಶೋಧಮ್ಮ, ಮುಖಂಡರಾದ ಗೋವಿದೇಗೌಡ, ಹೊಲದಪ್ಪ, ಕೃಷ್ಣೇಗೌಡ, ಮೈಲಾರಿಗೌಡ, ಬಿ.ಎನ್‌.ಕರೀಗೌಡ, ಪ್ರೇಮಕುಮಾರ್‌, ರಹಮತ್ತ್ ಜಾನ್‌ ಬಾಬು, ಮಹದೇವಪ್ಪ, ರಿಯಾಜ್‌, ಕರಡಿಪುರ ಕುಮಾರ್‌, ಪಿ.ಮಹದೇವ್‌, ಜವರೇಗೌಡ, ಪ್ರಕಾಶ್‌, ಸುಂದರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.