ಪ್ರಾಮಾಣಿಕ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು
Team Udayavani, Jul 10, 2017, 12:17 PM IST
ಹುಬ್ಬಳ್ಳಿ: ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ ಪ್ರಾಮಾಣಿಕ ಪ್ರಯತ್ನ ಅತ್ಯವಶ್ಯ ಎಂದು ನಾಡೋಜ ಡಾ| ಪಾಟೀಲ ಪುಟ್ಟಪ್ಪ ಹೇಳಿದರು. ವಿದ್ಯಾನಗರ ಕನಕದಾಸ ಶಿಕ್ಷಣ ಸಮಿತಿಯ ಕನಕದಾಸ ಮಹಾವಿದ್ಯಾಲಯದಲ್ಲಿ ಚಿಂತನ ವೇದಿಕೆಯಿಂದ ರವಿವಾರ ನಡೆದ ಜಯಶ್ರೀ ಸಮ್ಮಾನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಯುವಕರು ನೇರ ನಡೆ-ನುಡಿಯ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಕಳ್ಳ ದಾರಿಗಳಿಂದ ನಡೆಸುವ ಪ್ರಯತ್ನಗಳು ಜೀವನ ಹಾಳು ಮಾಡುತ್ತವೆ. ಪರರಿಗೆ ಸಹಾಯ ಹಸ್ತ ನೀಡುವ ಗುಣಗಳನ್ನು ಇಂದಿನ ಯುವಪೀಳಿಗೆ ಬೆಳೆಸಿಕೊಳ್ಳಬೇಕೆಂದರು.
ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಮಾತನಾಡಿ, ಗುರು ಎಂದರೆ ವ್ಯಕ್ತಿಯಲ್ಲ, ಅದೊಂದು ಭಾವನೆ. ಹಿರಿಯ ಪತ್ರಕರ್ತರಾದ ಡಾ| ಪಾಟೀಲ ಪುಟ್ಟಪ್ಪ ಅವರು ತಮ್ಮ ಕಾರ್ಯ ವೈಖರಿಯಿಂದಾಗಿ ಅನೇಕ ಯುವ ಪತ್ರಕರ್ತರಿಗೆ ಹಾಗೂ ಸಮಾಜ ಸೇವಕರಿಗೆ ಮಾರ್ಗದರ್ಶಕರಾಗಿದ್ದಾರೆ ಎಂದರು.
ಪ್ರಶಸ್ತಿ ಸ್ವೀಕರಿಸಿದ ರಂಗ ಕಲಾವಿದೆ ರತ್ನಾ ಸೋಗಿ ರಂಗ ಗೀತೆಗಳನ್ನು ಪ್ರಸ್ತುತ ಪಡಿಸಿದರು. ಪತ್ರಕರ್ತರ ಕೃಷ್ಣಮೂರ್ತಿ ಕುಲಕರ್ಣಿ ಮಾತನಾಡಿದರು. ಶಿರಸಿಯ ಕೃಷ್ಣ ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಚನ್ನಬಸಪ್ಪ ಧಾರವಾಡಶೆಟ್ರಾ, ವೀರನಗೌಡ್ರ ಮರಿಗೌಡ್ರ ಇನ್ನಿತರಿದ್ದರು. ಕೊನೆಯಲ್ಲಿ ಕವಿಗೋಷ್ಠಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.