ಜ್ಞಾನಯೋಗಾಶ್ರಮದಲ್ಲಿ ಸಂಭ್ರಮದ ಗುರುಪೂರ್ಣಿಮೆ
Team Udayavani, Jul 10, 2017, 3:25 PM IST
ವಿಜಯಪುರ: ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಶ್ರೀಗಳ ಸಾರಥ್ಯದಲ್ಲಿ ವೇದಾಂತ ಕೇಸರಿ ಮಲ್ಲಿಕಾರ್ಜುನ
ಶಿವಯೋಗಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸುವ ಭಕ್ತರು ಶ್ರದ್ಧಾ-ಭಕ್ತಿಯಿಂದ ಗುರುಪೂರ್ಣಿಮೆ ಆಚರಿಸಿದರು.
ರವಿವಾರ ಗುರುಪೂರ್ಣಿಮೆ ಅಂಗವಾಗಿ ಶ್ರೀಗಳ ಕತೃì ಗದ್ದುಗೆಗೆ, ಜಪಯಜ್ಞ ಸೇರಿದಂತೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಮಲ್ಲಿಕಾರ್ಜುನ ಶಿವಯೋಗಿಗಳ ಪ್ರವಚನದ ಧ್ವನಿ ಸುರುಳಿ ಪ್ರಸಾರ ಮಾಡಲಾಯಿತು. ವಿಜಯಪುರ, ಬೆಳಗಾವಿ, ಬಾಗಲಕೋಟೆ,
ಬೀದರ ಸೇರಿದಂತೆ ನೆರೆ ರಾಜ್ಯದ ಸೊಲ್ಲಾಪುರ, ಸಾಂಗಲಿ ಸೇರಿದಂತೆ ರಾಜ್ಯ-ಹೊರರಾಜ್ಯಗಳಿಂದ ಬೆಳಗ್ಗೆಯಿಂದಲೇ
ತಂಡೋಪತಂಡವಾಗಿ ಜ್ಞಾನಯೋಗಾಶ್ರಮಕ್ಕೆ ಆಗಮಿಸಿದ ವಿವಿಧ ಮಠಾ ಧೀಶರು, ಭಕ್ತರು ಸಿದ್ದೇಶ್ವರ ಶ್ರೀಗಳ ಆಶೀರ್ವಾದ ಪಡೆದರು. ಬಸವಲಿಂಗ ಸ್ವಾಮೀಜಿ ಸೇರಿದಂತೆ ಹಲವಾರು ಸ್ವಾಮೀಜಿಗಳ ಪಾವನ ಸಾನ್ನಿಧ್ಯದಲ್ಲಿ ಹಲವು ಮಠಾ ಧೀಶರು ವೇದಾಂತ ಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಾಮೂಹಿಕ ಭಜನೆ ನಡೆಯಿತು.
ಗುರುಪೂರ್ಣಿಮೆ ಅಂಗವಾಗಿ ಬೆಳಗ್ಗೆ 9ರಿಂದ ರಾತ್ರಿ 8ರವರೆಗೂ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಯಿತು. ಆಶ್ರಮಕ್ಕೆ ಭೇಟಿ ನೀಡಿದ್ದ ಭಕ್ತರೆಲ್ಲರೂ ದಾಸೋಹ ಪ್ರಸಾದವಾಗಿ ಸಜ್ಜಕ, ಅನ್ನಸಾಂಬಾರು ಸವಿದರು. ವಿದ್ಯಾರ್ಥಿಗಳು, ಯುವಕ ಸಂಘ-ಸಂಸ್ಥೆಗಳ ಸ್ವಯಂಸೇವಕರು ಆಶ್ರಮದಲ್ಲಿ ಸ್ವಯಂ ಪ್ರೇರಿತವಾಗಿ ಭಕ್ತರ ಸೇವೆ ಮಾಡಿದರು. ನೀರನ್ನು ವ್ಯರ್ಥ ಮಾಡಬೇಡಿ, ನೀರು ಅಮೂಲ್ಯ ವಸ್ತು, ಆಹಾರ ವ್ಯರ್ಥ ಮಾಡಮಾಡಿ, ಅನ್ನ ದೇವರಿಗಿಂತ ದೊಡ್ಡದು ಎಂಬ ಸಂದೇಶ ಫಲಕಗಳನ್ನು ಗಿಡಮರಗಳ ಮೇಲೆ ಅಳವಡಿಸಿದ್ದು ಜನತೆಯನ್ನು ಆಕರ್ಷಿಸಿತು.
ಜ್ಞಾನಯೋಗಾಶ್ರಮಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಿತ್ತು. ಪ್ರಮುಖವಾಗಿ
ಮಹಾತ್ಮ ಗಾಂಧಿಧೀಜಿ ವೃತ್ತದಿಂದ ಆಶ್ರಮದವರೆಗೆ ನೂರಾರಿ ವಿಶೇಷ ಬಸ್ ಸೇವೆ ನೀಡಿದವು. ಆಶ್ರಮದ ಸುತ್ತಮುತ್ತ ವಾಹನ ದಟ್ಟಣೆ ಕಡಿಮೆ ಮಾಡಲು ಅಣತಿ ದೂರದಲ್ಲೇ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.