ಬೈಂದೂರು:ಅನಧಿಕೃತ ಮದ್ಯದಂಗಡಿ ಪ್ರಾರಂಭಕ್ಕೆ ವಿರೋಧಿಸಿ ಪ್ರತಿಭಟನೆ
Team Udayavani, Jul 11, 2017, 1:30 AM IST
ಬೈಂದೂರು: ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಕೇಶ್ವರ ಕಾವೇರಿ ಮಾರ್ಗದ ಜನವಸತಿ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮದ್ಯದಂಗಡಿಯನ್ನು ವಿರೋಧಿಸಿ ಸ್ಥಳೀಯರು ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ನಾಗರಾಜ ಗಾಣಿಗ ಬಂಕೇಶ್ವರ ಈ ಮಾರ್ಗವು ಜನವಸತಿ ಪ್ರದೇಶವಾಗಿದೆ ಮತ್ತು ವಿದ್ಯಾರ್ಥಿಗಳು ಮತ್ತು ಮಹಿಳೆಯರು ನಿತ್ಯ ಸಂಚರಿಸುತ್ತಾರೆ. ಈ ಭಾಗದಲ್ಲಿ ಮದ್ಯದಂಗಡಿ ನಿರ್ಮಾಣವಾದರೆ ಸಮಾಜದ ಸ್ವಾಸ್ಥ್ಯ ಹದಗೆಡುತ್ತದೆ. ಹೀಗಾಗಿ ಕಾವೇರಿ ಮಾರ್ಗದಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದರು.
ಬೈಂದೂರು ವಿಶೇಷ ತಹಶೀಲ್ದಾರ್ಕಿರಣ ಗೌರಯ್ಯ ಮನವಿ ಸ್ವೀಕರಿಸಿ ಮಾತನಾಡಿ ಸಾರ್ವಜನಿಕರ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ತಲುಪಿಸುತ್ತೇನೆ. ಸ್ಥಳ ತನಿಖೆ ನಡೆಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುತ್ತೇನೆ. ಈ ಕುರಿತು ಅನುಮತಿ ನಿರಾಕರಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸುಬ್ರಾಯ್ ಶೇರುಗಾರ್, ಮಹೇಶ್ ಸೋಡಿತಾರ್, ಕಲಾವತಿ ನಾಗರಾಜ ಗಾಣಿಗ, ರಾಜು ದೇವಾಡಿಗ, ಶಂಕರ ದೇವಾಡಿಗ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ರೈಲು ಬಡಿದು ವ್ಯಕ್ತಿ ಸಾವು
Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Udupi: ಸಿಎನ್ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.