“ಪ್ರಾಚ್ಯವಸ್ತುಗಳು ಇತಿಹಾಸದ ಆಕರಗಳು’
Team Udayavani, Jul 11, 2017, 1:45 AM IST
ಬೈಂದೂರು: ಪ್ರಾಚ್ಯ ವಸ್ತುಗಳು ಇತಿಹಾಸದ ಆಕರಗಳು. ಅವು ಸಮುದಾಯದ ಪ್ರಾಚೀನ ಜೀವನ ವಿಧಾನ, ಸಾಂಸ್ಕೃತಿಕ ಬೆಳವಣಿಗೆ ಮತ್ತು ಬದಲಾವಣೆಗಳ ಮೇಲೆ ಬೆಳಕು ಚೆಲ್ಲುತ್ತವೆ. ಅಧ್ಯಯನದ ದೃಷ್ಟಿಯಿಂದ ಮಹತ್ವ ಪಡೆದಿರುವ ಅಂತಹ ವಸ್ತುಗಳನ್ನು ಸಂಗ್ರಹಿಸಿ ರಕ್ಷಿಸುವ ಕೆಲಸವನ್ನು ಶಿಕ್ಷಣ ಸಂಸ್ಥೆಗಳು ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಮೂಲಕ ಮಾಡಬಹುದು ಎಂದು ನಿವೃತ್ತ ಬ್ಯಾಂಕ್ ಅಧಿಕಾರಿ ಎಂ. ಗೋವಿಂದ ಹೇಳಿದರು.
ಅವರು ಪ್ರಾಚ್ಯ ವಸ್ತು ಸಂಗ್ರಹಾಲಯಗಳ ಮತ್ತು ಪರಂಪರೆಯ ಇಲಾಖೆಯು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಸ್ಮಾರಕಗಳ ಮೂರ್ತ ಮತ್ತು ಅಮೂರ್ತ ಪರಂಪರೆಯ ಸಂಪತ್ತಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾಹಿತಿ ನೀಡಿದರು.
ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿ ವಸ್ತುಗಳ ಸಂಗ್ರಹಕ್ಕೆ ಶ್ರಮಿಸಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ವಸ್ತುಗಳ ಕಿರು ಸಂಗ್ರಹಾಲಯವನ್ನು ಹೊಂದುವ ಮೂಲಕ ಮಕ್ಕಳಲ್ಲಿ ಇತಿಹಾಸದ ಪ್ರಜ್ಞೆ ಮೂಡಿಸಬಹುದು ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪ್ರಭಾರ ಮುಖ್ಯೋಪಾಧ್ಯಾಯಿನಿ ಮುಕ್ತಾ, ವಿದ್ಯಾರ್ಥಿ ನಾಯಕ ಡಿ.ನಾಗರಾಜ, ಉಪ ನಾಯಕ ಶಿವದರ್ಶನ, ನಾಯಕಿ ಜಾನ್ಸಿ ಉಪಸ್ಥಿತರಿದ್ದರು. ಶಿಕ್ಷಕ ಗಣಪತಿ ಹೋಬಳಿದಾರ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.