“ದೇಹದ ಆರೋಗ್ಯಕ್ಕೆ ವ್ಯಾಯಾಮ ಅಗತ್ಯ’
Team Udayavani, Jul 11, 2017, 2:20 AM IST
ಸುಳ್ಯಪದವು: ದೇಹದ ಮಾನಸಿಕ, ದೈಹಿಕ ಆರೋಗ್ಯ ಸ್ಥಿರತಗೆ ವ್ಯಾಯಾಮ ಅಗತ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಅಶೋಕ್ ಕುಮಾರ್ ರೈ ಅವರು ಹೇಳಿದರು.
ಅವರು ಸರ್ವೋದಯ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಸರ್ವೋದಯ ಪ್ರೌಢಶಾಲಾ ವಠಾರದಲ್ಲಿ ನಡೆದ ವ್ಯಾಯಾಮ ಶಾಲಾ ಕಟ್ಟಡದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.ಕಡುಬಡವರ ಕಷ್ಟಗಳಿಗೆ ಸ್ಪಂದನೆ ನೀಡುವುದು ನಿಜವಾದ ಜೀವನ. ಯಾರ ಬಳಿಯು ದಾನ, ದೇಣಿಗೆ ಕೇಳದೆ ಆದಾಯದ ಸ್ವಲ್ಪ ಪಾಲು ಸಮಾ ಜಕ್ಕೆ ನೀಡುತ್ತಿದ್ದೇನೆ. ಸಂಘಟನೆಗಳು ಸಮಾಜ ವಾಹಿನಿಯಲ್ಲಿ ಸೇರಿಕೊಂಡಾಗ ಸಮಾಜಮುಖೀ ಚಟುವಟಿಕೆಗಳ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ವ್ಯಾಯಾಮ ಶಾಲೆಯ ಗೌರವಾಧ್ಯಕ್ಷರಾದ ಎಚ್.ಡಿ. ಶಿವರಾಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಸದಸ್ಯ ರಾಧಾಕೃಷ್ಣ ಬೋರ್ಕರ್, ನಿವೃತ್ತ ದೈಹಿಕ ಶಿಕ್ಷಕ ಗೋಪಾಲಕೃಷ್ಣ ಎಸ್., ಕಾವು ಶ್ರೀ ಪಂಚಲಿಂಗೇಶ್ವರ ವ್ಯಾಯಾಮ ಶಾಲೆಯ ಕೃಷ್ಣಪ್ಪ ಗೌಡ, ಸರ್ವೋದಯ ಪ್ರೌಢಶಾಲೆಯ ಮುಖ್ಯಗುರು ಅನಂತಗಣಪತಿ ಉಪಸ್ಥಿತರಿದ್ದರು.
ಪುರೋಹಿತ ಸದಾಶಿವ ಭಟ್ ಪೈರುಪುಣಿ ಧಾರ್ಮಿಕ ವಿಧಿವಿಧಾನವನ್ನು ನೆರವೇರಿಸಿದರು.ವಿದ್ಯಾಸಂಸ್ಥೆಯ ಸಂಚಾಲಕ ಮಹಾದೇವ ಭಟ್ ಅವರು ಸ್ವಾಗತಿಸಿದರು. ನಿರ್ದೇಶಕ ವೆಂಕಟೇಶ್ ಭಟ್ ಕಜೆಮೂಲೆ ಅವರು ವಂದಿಸಿದರು. ಸರ್ವೋದಯ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಖೇಶ್ ರೈ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.