ದುಷ್ಟಶಕ್ತಿಗಳ ವಿರುದ್ಧ ಗೂಂಡಾ ಕಾಯ್ದೆ ಜಾರಿ
Team Udayavani, Jul 11, 2017, 3:45 AM IST
ಬೆಂಗಳೂರು: ದಕ್ಷಿಣ ಕನ್ನಡ ಸೇರಿ ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಕೋಮುಸೌಹಾರ್ದಕ್ಕೆ ಧಕ್ಕೆ ತರುವಂತಹ ಮತೀಯ
ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಮಾಜದಲ್ಲಿ ಅಶಾಂತಿ ಉಂಟುಮಾಡುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನದ ಕ್ರಮ ಜರುಗಿಸಿ ಗಡಿಪಾರು ಮಾಡುವಂತೆಯೂ ಸಿಎಂ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸೋಮವಾರ ಉನ್ನತ ಪೊಲೀಸ್ ಅಧಿಕಾರಿಗಳ
ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 3 ತಿಂಗಳಲ್ಲಿ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳಿಂದ ಸರ್ಕಾರಕ್ಕೆ ನೋವುಂಟಾಗಿದೆ. ಈ ಕೃತ್ಯಗಳಲ್ಲಿ ಕೆಲ ಮತೀಯ ಸಂಘಟನೆಗಳ ಕೈವಾಡವಿದೆ. ಆ ಸಂಘಟನೆಗಳು ಯಾವುದೇ ಧರ್ಮ, ಸಮುದಾಯಕ್ಕೆ ಸೇರಿದ್ದರೂ ನಿರಂತರ ನಿಗಾ ಇಡಬೇಕು. ಮತೀಯ ಗೂಂಡಾಗಳ ಚಲನವಲನ ಗಮನಿಸುತ್ತಿರಬೇಕು. ಪದೇಪದೆ ಇಂಥ ಕೃತ್ಯಗಳಲ್ಲಿ
ಭಾಗಿಯಾಗುವವರ ವಿರುದ್ಧ ಗೂಂಡಾ ಕಾಯ್ದೆ, ಕೋಕಾ ಕಾಯ್ದೆ ಅಡಿ ಬಂಧಿಸಿ ಗಡಿಪಾರು ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಹೆಳಿದರು.
ಮತೀಯವಾದಿಗಳ ಪ್ರಯೋಗಾಲಯ: ಈಗಾಗಲೇ ಘಟನೆ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಿದ್ದು, ಈ ಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಕೆಲ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ್ದೇನೆ. ಇದೀಗ ಮತ್ತೂಮ್ಮೆ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಅಲ್ಲಿನ ಸಂಘಟನೆ ಮುಖಂಡರ ಜತೆ ಶಾಂತಿಸಭೆ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ. ಈ ಪ್ರಕರಣದಲ್ಲಿ ಭಾಗಿಯಾದ ದುಷ್ಕರ್ಮಿಗಳ ಬಂಧನಕ್ಕೆ ಸೂಚಿಸಿದ್ದು, ಅವರ ಹಿಂದಿನ ಶಕ್ತಿಗಳ ಬಗ್ಗೆಕ್ರಮಕ್ಕೆ ಆದೇಶಿಸಲಾಗಿದೆ. ಎಂದರಲ್ಲದೆ, ಮಂಗಳೂರು, ಊಡುಪಿ ಸೇರಿದಂತೆ ಕರಾವಳಿ ಭಾಗ ಮೊದಲಿನಿಂದಲೂ ಕೋಮು ಸಾಮರಸ್ಯಕ್ಕೆ ಹೆಸರಾದ ಸ್ಥಳಗಳು. ಆದರೆ, ಕೆಲ ಮತೀಯ ಸಂಘಟನೆಗಳ ಕುತಂತ್ರದಿಂದ ಈ ಪ್ರದೇಶಗಳು ಮತೀಯವಾದದ ಪ್ರಯೋಗಾಲಯವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಯಾವುದೇ ಸಂಘಟನೆಯಾಗಲಿ ಕ್ರಮಕೈಗೊಳ್ಳಿ: ಸಮಾಜದ ಸಾಮರಸ್ಯ ಕದಡುವ ಪಿಎಫ್ಐ, ಎಸ್‌ಡಿಪಿಐ, ಶ್ರೀರಾಮಸೇನೆ, ಭಜರಂಗದಳ, ಆರ್‌ಎಸ್‌ಎಸ್ ಸೇರಿ ಯಾವುದೇ ಸಂಘಟನೆಯ ಕಾರ್ಯಕರ್ತರಾಗಲಿ ಕೋಮು ಗಲಭೆಗೆ ಪ್ರಚೋದನೆ ನೀಡಿದರೆ ಕಠಿಣ ಕ್ರಮ ಜರುಗಿಸಲಾಗುವುದು. ರೌಡಿ ಪಟ್ಟಿಯಲ್ಲಿರುವವರ ವಿರುದ್ಧ ಮುಲಾಜಿಲ್ಲದೆ ಗೂಂಡಾ, ಕೋಕಾ ಕಾಯ್ದೆ ಅಡಿ ಬಂಧಿಸಿಸುವಂತೆ ಸೂಚಿಸಲಾಗಿದೆ ಎಂದರು. ಡಿಜಿಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ವಸ್ತು ಸ್ಥಿತಿ ಅವಲೋಕಿಸುವಂತೆ ಸೂಚಿಸಿದ್ದು, ಇದರೊಂದಿಗೆ ಗಲಭೆಗೆ ಕಾರಣವಾದ ಸಂಘಟನೆಗಳ ಕಾರ್ಯಚಟುವಟಿಕೆಗಳ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ನಂತರ ಕೆಲ ಸಂಘಟನೆಗಳ ನಿಷೇಧದ
ಕುರಿತು ಚರ್ಚಿಸಲಾಗುವುದು. ಜತೆಗೆ ಮಂಗಳೂರಿನಲ್ಲಿ ಡ್ರಗ್ಸ್ ಮಾμಯಾ ಹೆಚ್ಚಾಗಿದೆ ಎನ್ನಲಾಗಿದೆ. ಈ ಬಗ್ಗೆಯೂ ವರದಿ ಸಿದ್ದಪಡಿಸುವಂತೆ ಸೂಚಿಸಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.