ಪ್ರಚೋದನಕಾರಿ ಸುದ್ದಿ ಪ್ರಸಾರ ಮಾಡದಿರಿ: ಡಿಸಿ
Team Udayavani, Jul 11, 2017, 3:45 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಯಾಗಿ ಸುದ್ದಿ ಪ್ರಸಾರ ಮಾಡದಂತೆ ದ.ಕ. ಜಿಲ್ಲಾಡಳಿತ ಸೂಚಿಸಿದೆ. ಇದನ್ನು ಪಾಲಿಸದಿದ್ದರೆ ಕಾನೂನಿನಡಿ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಸುದ್ದಿಮಾಧ್ಯಮಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೆಲವು ದುಷ್ಕರ್ಮಿ ಗಳು ಸುಳ್ಳು ವದಂತಿ ಹರಡುವ ಮೂಲಕ ಕೋಮು ಸಾಮರಸ್ಯ ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದೇ ಮಾಹಿತಿ ಆಧರಿಸಿ ಕೆಲವು ಟಿವಿ ಮಾಧ್ಯಮಗಳು ಯಾವುದೇ ಪರಾಮರ್ಶೆ ನಡೆಸದೆ ಏಕಾಏಕಿ ಸುದ್ದಿ ಪ್ರಸಾರ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ಇದು ಕೋಮು ಸಾಮರಸ್ಯ ಹದಗೆಡಲು ಮತ್ತು ಕಾನೂನು ಸುವ್ಯವಸ್ಥೆ ಮತ್ತಷ್ಟು ಬಿಗಡಾಯಿಸಲು ಕಾರಣವಾಗುತ್ತಿದೆ. ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಮಾಧ್ಯಮಗಳು ಕಾರ್ಯ ನಿರ್ವಹಿಸಬೇಕೆಂದು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.