ಗಲಭೆಗಳಿಗೆ ಬಿಜೆಪಿ-ಕಾಂಗ್ರೆಸ್ ಕುಮ್ಮಕ್ಕು: ಜೆಡಿಎಸ್ ಆರೋಪ
Team Udayavani, Jul 11, 2017, 3:35 AM IST
ಮಂಗಳೂರು: ಪಕ್ಷದ ಸಮಾವೇಶದಲ್ಲಿ ಭಾಗವಹಿಸಲು ಇತ್ತೀಚೆಗೆ ದ.ಕ. ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿಯವರು ಶಾಂತಿಸಭೆ ನಡೆಸದೇ ತೆರಳಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜಕೀಯಕ್ಕಾಗಿ ಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿವೆ ಎಂದು ಜೆಡಿಎಸ್ ರಾಜ್ಯ ವಕ್ತಾರ ಭೋಜೆ ಗೌಡ ಆರೋಪಿಸಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಜಿಲ್ಲಾಡಳಿತ, ಪೊಲೀಸ್ ಇಲಾಖೆಯ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿಲ್ಲ. ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಶಾಂತಿ ಸಭೆಯಿಂದ ಮುಜುಗರವಾಗುವ ಸನ್ನಿವೇಶ ಎದುರಾಗುವುದಿದ್ದರೆ ಅದನ್ನು ತಪ್ಪಿಸಲು ರಾಜ್ಯದ ಹಿರಿಯ ಸಚಿವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಬಹುದಿತ್ತು ಎಂದರು.
ಈಗಾಗಲೆ ಬಂಟ್ವಾಳ, ಬಿ.ಸಿ.ರೋಡ್, ಕಲ್ಲಡ್ಕದಲ್ಲಿ ಜನರು ಭಯದ ವಾತಾವರಣದಲ್ಲಿದ್ದಾರೆ. ಇಂತಹ ಸಂದರ್ಭ ಸಂಸದೆ ಶೋಭಾ ಕರಂದ್ಲಾಜೆ ವೀರಾವೇಶದ ಮಾತುಗಳನ್ನಾಡುವ ಬದಲು ಶಾಂತಿಯತ್ತ ಗಮನ ಹರಿಸಲಿ ಎಂದು ಅವರು ಸಲಹೆ ಮಾಡಿದರು.
ಮಾಜಿ ಸಚಿವ ಅಮರನಾಥ ಶೆಟ್ಟಿ, ಜೆಡಿಎಸ್ ದ.ಕ. ಜಿಲ್ಲಾಧ್ಯಕ್ಷ ವಿಟ್ಲ ಮುಹಮ್ಮದ್ ಕುಂಞಿ, ಉಡುಪಿ ಜಿಲ್ಲಾಧ್ಯಕ್ಷ ಯೋಗಿಶ್ ಶೆಟ್ಟಿ, ಪಕ್ಷದ ಮುಖಂಡರಾದ ಎಂ. ಬಿ. ಸದಾಶಿವ, ಅಕ್ಷಿತ್ ಸುವರ್ಣ, ಕಾರ್ಪೊರೇಟರ್ ಅಝೀಝ್ ಕುದ್ರೋಳಿ, ರಮೀಝಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.