ಶವಯಾತ್ರೆ ವೇಳೆ ಕಲ್ಲೆಸೆತ: 13 ಮಂದಿಗೆ ನ್ಯಾಯಾಂಗ ಬಂಧನ

Team Udayavani, Jul 11, 2017, 3:35 AM IST

arrest–111.jpg

20 ಮಂದಿ ವಿರುದ್ಧ ಪ್ರಕರಣ ದಾಖಲು
ಬಂಟ್ವಾಳ:
ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಬಿ.ಸಿ.ರೋಡ್‌ ಉದಯ ಲಾಂಡ್ರಿ ಮಾಲಕ ಶರತ್‌ ಶವಯಾತ್ರೆಯ ಸಂದರ್ಭ ನಡೆದ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 20 ಮಂದಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪೈಕಿ 13 ಮಂದಿಯನ್ನು ಬಂಧಿಸಲಾಗಿದೆ.

ನೌಫಾಲ್‌ ಸುಹೇಲ್‌, ಅಬ್ದುಲ್‌ ಸಲೀಂ, ಮಹಮ್ಮದ್‌ ಶರೀಫ್‌, ಸಯ್ಯದ್‌ ಆಫ್ರೀದಿ, ಉಸೇನ್‌ ಮೊರಿಸ್‌, ಉಮ್ಮರ್‌ ಶಾಫಿ, ಮಹಮ್ಮದ್‌ ಫಾರೂಕ್‌, ಜಬ್ಟಾರ್‌, ಮೊಹಮ್ಮದ್‌ ಕಾಲಿದ್‌, ಮಹಮ್ಮದ್‌ ಜುನೈನ್‌, ಇನ್ಸಾಮ್‌ ಉಲ್‌ಹಕ್‌, ಅಕ್ಷಿತ್‌, ಸದಾನಂದ ನಾವೂರ ಬಂಧಿತರು. ಆರೋಪಿಗಳಲ್ಲಿ ಕೆಲವರು ಹೊರರಾಜ್ಯದವರು ಎಂದು ಹೇಳಲಾಗಿದ್ದು ಅವರ ವಿಳಾಸ ತಪಾಸಣೆಯ ಬಳಿಕವಷ್ಟೆ ಸ್ಪಷ್ಟವಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಸ್ಥಿತಿ ಶಾಂತ: ಬಂಟ್ವಾಳ ತಾಲೂಕಿನಾದ್ಯಂತ ಪರಿಸ್ಥಿತಿ ಶಾಂತವಾಗಿದ್ದು ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಪೊಲೀಸ್‌ ನಾಕಾಬಂದಿ ಮುಂದುವರಿದಿದೆ. ವಾಹನ ಸಂಚಾರ ಎಂದಿ ನಂತಿದೆ. ಅಟೋ, ಖಾಸಗಿ ಕಾರುಗಳು ಇಂದು ಓಡಾಟ ನಡೆಸುತ್ತಿವೆ. ಸೋಮವಾರವಾದ ಕಾರಣ ಜನಸಂಚಾರವು ಎಂದಿನಂತಿತ್ತು. ಹೊರ ಜಿಲ್ಲೆಗಳಿಂದ ಆಗಮಿಸಿರುವ ಪೊಲೀಸರನ್ನು ಇಲ್ಲೇ ಉಳಿಸಿಕೊಳ್ಳಲಾಗಿದೆ. ಈಗಾಗಲೇ ಕರ್ತವ್ಯದಲ್ಲಿ ಇರುವಂತಹ ಪೊಲೀಸರ ಬದಲಿ ವ್ಯವಸ್ಥೆಗಾಗಿ ಹೊರ ಜಿಲ್ಲೆಗಳ ಮತ್ತಷ್ಟು ಸಿಬಂದಿಯನ್ನು ಕರೆಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಷೇಧಾಜ್ಞೆ  ಉಲ್ಲಂಘನೆ: ಸಂಘಟಕರ ಮೇಲೆ ಪ್ರಕರಣ ದಾಖಲು
ಮಂಗಳೂರು:
ಶರತ್‌ ಮಡಿವಾಳ ಹತ್ಯೆ ಖಂಡಿಸಿ ಜು. 7ರಂದು ಬಿ.ಸಿ.ರೋಡಿನಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ನಡೆದ ಪ್ರತಿಭಟನೆ ಮತ್ತು ಶರತ್‌ ಶವ ಯಾತ್ರೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಗಳಿಗೆ ಸಂಬಂಧಿಸಿ ಪ್ರತಿಭಟನೆ ಮತ್ತು ಮೆರವಣಿಗೆಯ ಸಂಘಟಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಜನಪ್ರತಿನಿಧಿಗಳು ಮತ್ತು ಪ್ರಮುಖ ನಾಯಕರ ಸಹಿತ 20ಕ್ಕೂ ಅಧಿಕ ಜನರ ಮೇಲೆ ಸೆಕ್ಷನ್‌ 143, 147 ಹಾಗೂ 188ರನ್ವಯ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಶವಯಾತ್ರೆ ಸಂದರ್ಭ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿ ಈಗಾಗಲೇ 13 ಮಂದಿಯನ್ನು ಬಂಧಿ ಸ ಲಾಗಿದ್ದು, ಮತ್ತೆ ಐವರು ಹಿಂದೂ ಸಂಘಟನೆ, ಬಿಜೆಪಿ ಮುಖಂಡರ ಮೇಲೆ ಕೇಸು ದಾಖಲಾಗಿದೆ.

ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತ್ಯಜಿತ್‌ ಸುರತ್ಕಲ್‌, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್‌ ಪೂಂಜಾ, ಬಜರಂಗದಳ ರಾಜ್ಯ ಸಂಯೋಜಕ ಶರಣ್‌ ಪಂಪ್‌ವೆಲ್‌, ಮುರಲಿಕೃಷ್ಣ ಹಸಂತಡ್ಕ ಹಾಗೂ ಪ್ರದೀಪ್‌ ಪಂಪ್‌ವೆಲ್‌ ವಿರುದ್ಧ ಸೆಕ್ಷನ್‌ 143, 147, 148, 149, 188, 308, 353, 427, 504 ಹಾಗೂ ಸೆಕ್ಷನ್‌ 2ಎ ಅಡಿ ಯಲ್ಲಿ ಪ್ರಕರಣ ಪೊಲೀಸರು ಸ್ವಯಂ ಪ್ರಕರಣ ದಾಖ ಲಿಸಿದ್ದಾರೆ. ಈ ಐದು ಮಂದಿಯಲ್ಲದೆ ಇತರರು ಎಂದು ಬಂಟ್ವಾಳ ನಗರ ಠಾಣೆಯಲ್ಲಿ ದೂರಿನಲ್ಲಿ ಉಲ್ಲೇಖೀಸಲಾಗಿದೆ.

ಸತ್ಯಜಿತ್‌ ಮನೆಗೆ ದಾಳಿ
ಕಲ್ಲು ತೂರಾಟ ಪ್ರಕರಣದ ಆರೋಪಿಗಳಾದ ಸ‌ತ್ಯಜಿತ್‌ನ ಸುರತ್ಕಲ್‌ ಮನೆಗೆ, ಪ್ರದೀಪ್‌ ಪಂಪ್‌ವೆಲ್‌ ಮನೆಗೆ ಬಂಟ್ವಾಳ ಪೊಲೀಸರ ತಂಡ ರವಿವಾರ ರಾತ್ರಿ ದಾಳಿ ನಡೆಸಿದೆ. ಆದರೆ ಈ ಸಂದರ್ಭ ಇಬ್ಬರೂ ಮನೆಯಲ್ಲಿರಲಿಲ್ಲ ಎನ್ನಲಾಗಿದೆ.ಹಿಂದೂ ಮುಖಂಡರ ವಿರುದ್ಧ ಸೆಕ್ಷನ್‌ 307ರಡಿ ಪ್ರಕರಣ ದಾಖಲಿಸಲಾಗಿದೆ ಎಂಬ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿವೆಯಾದರೂ ಪೊಲೀಸರು ಇದನ್ನು ಖಚಿತ ಪಡಿಸುತ್ತಿಲ್ಲ.

ಟಾಪ್ ನ್ಯೂಸ್

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.