10 ವರ್ಷ ಬಳಿಕ ಪ್ರಾಧ್ಯಾಪಕರಿಗೆ ಬಂಪರ್ ಖುಷಿ!
Team Udayavani, Jul 11, 2017, 8:24 AM IST
ನವದೆಹಲಿ: ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸು ಜಾರಿಗೆ ಅನುಮತಿ
ಸಿಕ್ಕಿತ್ತು. ಈಗ ಖುಷಿ ಪಡುವ ಸರದಿ ಕಾಲೇಜು ಪ್ರಾಧ್ಯಾಪಕರದ್ದು. ಹತ್ತು ವರ್ಷಗಳ ಬಳಿಕ ಎಂಟು ಲಕ್ಷ ಕಾಲೇಜು ಪ್ರಾಧ್ಯಾಪಕರ ವೇತನ ಹೆಚ್ಚಳಕ್ಕೆ ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗ (ಯುಜಿಸಿ)ಯ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿ
ಫೆಬ್ರವರಿಯಲ್ಲಿಯೇ ವರದಿ ಸಲ್ಲಿಸಿತ್ತು. ಆಂಗ್ಲ ದೈನಿಕವೊಂದರ ವರದಿ ಪ್ರಕಾರ, ಈ ತಿಂಗಳಲ್ಲೇ ಕೇಂದ್ರ ಸಂಪುಟ ಸಭೆ ಸೇರಿ ಶಿಫಾರಸುಗಳಿಗೆ ಅಂಗೀಕಾರ ನೀಡುವ ಸಾಧ್ಯತೆ ಇದೆ. ಸಭೆಯಲ್ಲಿ ವೇತನ ಹೆಚ್ಚಳಕ್ಕೆ ಮಾತ್ರ ಅನುಮೋದನೆ ನೀಡುವ ಸಾಧ್ಯತೆ ಇದ್ದು, ಭತ್ಯೆ ಮತ್ತಿತರ ವಿಚಾರಗಳ ಬಗ್ಗೆ ಮುಂದಿನ ಹಂತದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಮಾನವ ಸಂಪನ್ಮೂಲ
ಸಚಿವಾಲಯದ ಹಿರಿಯ ಅಧಿಕಾರಿ ಹೇಳಿದ್ದಾರೆ.
ಎಷ್ಟು ಹೆಚ್ಚಳ?: ಸಹಾಯಕ ಪ್ರಾಧ್ಯಾಪಕ (ಅಸಿಸ್ಟೆಂಟ್ ಪ್ರೊಫೆಸರ್ ಗ್ರೇಡ್-1)ರಿಗೆ ವೇತನ ಪ್ರಮಾಣ ಪ್ರತಿ ತಿಂಗಳಿಗೆ 10,396 ರೂ.ಗಳಷ್ಟು ಹೆಚ್ಚಾಗಲಿದೆ. ಸಹ ಪ್ರಾಧ್ಯಾಪಕ (ಅಸೋಸಿ ಯೇಟ್ ಪ್ರೊಫೆಸರ್)ರಿಗೆ 23,662 ರೂ. ಪರಿಷ್ಕರಣೆಯಾಗಲಿದೆ. ಅಂದರೆ ಸುಮಾರು ಶೇ.22-ಶೇ.28ರ ವರೆಗೆ ಹೆಚ್ಚಳ. 10 ವರ್ಷಗಳ ಹಿಂದೆ ಅಂದರೆ 2006ರಲ್ಲಿ ವೇತನ ಪರಿಷ್ಕರಣೆಯಾಗಿತ್ತು. ಅದನ್ನು ಹೆಚ್ಚಳ ಮಾಡದಿದ್ದರೆ ಮುಷ್ಕರ ನಡೆಸುತ್ತೇವೆ ಎಂದು ಪ್ರಾಧ್ಯಾಪಕರ ಸಂಘಗಳು ಎಚ್ಚರಿಕೆ ನೀಡಿದ್ದವು.
ಯಾರಿಗೆ ಅನುಕೂಲ?: ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ನಡೆಸಲ್ಪಡುವ ಶೈಕ್ಷಣಿಕ ಸಂಸ್ಥೆಗಳು, ಅವುಗಳಿಂದ ಅನುದಾನ ಪಡೆ
ಯುವ ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ಕೇಂದ್ರೀಯ ವಿವಿಗಳು, ಕೇಂದ್ರ ಸರ್ಕಾರಿಂದ ಸ್ಥಾಪನೆಗೊಂಡ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿ, ಎನ್ಐಟಿ ಸೇರಿದಂತೆ ಹಲವು ಸಂಸ್ಥೆಗಳಿಗೆ ನೆರವಾಗಲಿದೆ.
70 ಸಾವಿರ ಕೋಟಿ ರೂ. ಹೊರೆ: ಶೀಘ್ರದಲ್ಲಿಯೇ ನಡೆಯುವ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ 70 ಸಾವಿರ ಕೋಟಿ ರೂ. ಹೊರೆಯಾಗಲಿದೆ. ಇದರ ಜತೆಗೆ ವಾರ್ಷಿಕವಾಗಿ ಕಾಲೇಜು ಪ್ರಾಧ್ಯಾಪಕರ ಮೌಲ್ಯಮಾಪನ ಪದ್ಧತಿಯೂ ಬದಲಾಗಲಿದೆ. ಅವರಿಗೆ ಗ್ರೇಡಿಂಗ್ ನೀಡುವ ವ್ಯವಸ್ಥೆಯೂ ಜಾರಿಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.