ಶಿರೂರ ಗ್ರಾಮಸ್ಥರಿಂದ ನಿರಶನ
Team Udayavani, Jul 11, 2017, 12:03 PM IST
ಧಾರವಾಡ: ರಾಷ್ಟ್ರೀಕೃತ ಬ್ಯಾಂಕ್ ನಲ್ಲಿರುವ ರೈತರ ಸಂಪೂರ್ಣ ಸಾಲಮನ್ನಾ ಹಾಗೂ 2016ನೇ ಸಾಲಿನ ಮುಂಗಾರು-ಹಿಂಗಾರು ಬೆಳೆ ವಿಮೆ ಬಿಡುಗಡೆ ಮಾಡುವಂತೆ ಆಗ್ರಹಿಸಿ ನವಲಗುಂದ ತಾಲೂಕಿನ ಶಿರೂರ ಗ್ರಾಮದ ರೈತರು ನಗರದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.
ಶಿರೂರು ಗ್ರಾಮದ ರೈತ ಮುಖಂಡ ಮಲ್ಲಿಕಾರ್ಜುನಗೌಡ ಬಾಳನಗೌಡ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು, ಪ್ರಧಾನಿಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.
ಬರದಿಂದ ತತ್ತರಿಸಿರುವ ರೈತರ ಸಂಕಷ್ಟ ಪರಿಹರಿಸಲು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. 2016ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಪ್ರಧಾನಮಂತ್ರಿ ಫಸಲ ಭೀಮಾ ಯೋಜನೆಯನ್ನು 100ಕ್ಕೆ 100ರಷ್ಟು ಬೆಳೆ ವಿಮೆಯನ್ನು ತಕ್ಷಣ ಬಿಡುಗಡೆ ಮಾಡಬೇಕು.
ಇದರಿಂದ ಕರ್ನಾಟಕ ರಾಜ್ಯದಲ್ಲಿನ ದ ರೈತರ ಜೀವ ಉಳಿಸಿ ಅವರ ಆತ್ಮಸ್ಥೈರ್ಯ ತುಂಬಬೇಕು ಎಂದು ಪ್ರಧಾನಿಮಂತ್ರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಲಾಗಿದೆ. ಈ ಎರಡೂ ಬೇಡಿಕೆ ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಲು ಮಧ್ಯಸ್ಥಿಕೆ ವಹಿಸಬೇಕು ಎಂದು ರಾಹುಲ್ ಗಾಂಧಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಶಂಕರಪ್ಪ ಕಾಳಿ, ರವಿ ರಾಮನಗೌಡ್ರ ಸೇರಿದಂತೆ ಶಿರೂರ ಗ್ರಾಮದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.