ಶಿಕ್ಷಕರನ್ನು ಗೌರವಿಸುವುದು ಪ್ರಮುಖ ಕರ್ತವ್ಯ


Team Udayavani, Jul 11, 2017, 12:03 PM IST

hub6.jpg

ಧಾರವಾಡ: ಜಿಲ್ಲೆಯ ಶೈಕ್ಷಣಿಕ ಪ್ರಗತಿ ಹಾಗೂ ವಿದ್ಯಾರ್ಥಿಗಳ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿರುವ ಶಿಕ್ಷಕರನ್ನು ಗೌರವಿಸುವುದು ಸಮಾಜದ ಪ್ರಮುಖ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಎಸ್‌.ಬಿ.ಬೊಮ್ಮನಹಳ್ಳಿ ಹೇಳಿದರು. 

ಡಾ|ಎಚ್‌.ಎಫ್‌. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾ ಧಿಕಾರಿಗಳ ಕಾರ್ಯಾಲಯ ವತಿಯಿಂದ ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ “ಯಮುನಾಬಾಯಿ ಕಲ್ಯಾಣ ಶಿಕ್ಷಣ ಪರಿಶ್ರಮ ಗೌರವ ದತ್ತಿ ಪುರಸ್ಕಾರ’ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಶಿಕ್ಷಕರು ವಿದ್ಯಾರ್ಥಿಗಳಲ್ಲಿನ ಕಲಿಕಾ ಸಾಮರ್ಥ್ಯ ಹಾಗೂ ಕೊರತೆಯನ್ನು ಸೂಕ್ಷ್ಮವಾಗಿ ಗಮನಿಸಿ ಅವುಗಳನ್ನು ಗುರುತಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದರು. ಶಿಕ್ಷಕರು ದೇಶದ ಅಭಿವೃದ್ಧಿಗೆ ಪೂರಕವಾದ ಕೆಲಸ ನಿರ್ವಹಿಸುತ್ತಾರೆ. ಈ ವೃತ್ತಿಯಿಂದಲೇ ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ದೇಶದ ಉನ್ನತ ಹುದ್ದೆಗೇರಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಜನಮಾನಸದಲ್ಲಿ ಅಚ್ಚಳಿಯದೆ ಉಳಿದುಕೊಂಡಿದ್ದಾರೆ.

ಶಿಕ್ಷಕ ವೃತ್ತಿಯಲ್ಲಿ ಸಿಗುವಂತಹ ಗೌರವ ಮತ್ಯಾವ ವೃತ್ತಿಯಲ್ಲೂ ಸಿಗುವುದಿಲ್ಲ. ಇದನ್ನರಿತು ಶಿಕ್ಷಕರು ಕಾರ್ಯ ಪ್ರವೃತ್ತರಾಗಬೇಕು ಎಂದರು. ಜಿಲ್ಲಾ ಪಂಚಾಯತ್‌ ಸಿಇಒ ಸ್ನೇಹಲ್‌ ರಾಯಮಾನೆ ಮಾತನಾಡಿ, ಜಿಲ್ಲೆಯ ಶೈಕ್ಷಣಿಕ ಸಾಧನೆ ಶಿಕ್ಷಕರಿಂದ ಮಾತ್ರ ಸಾಧ್ಯ. ಹೀಗಾಗಿ ಸಮಾಜದಲ್ಲಿನ ಉತ್ತಮ ಶಿಕ್ಷಕರನ್ನು ಗುರುತಿಸಿ ಗೌರವಿಸುವಂತಹ ಕಾರ್ಯ ಸದಾ ನಡೆಯಬೇಕು.

ಶಿಕ್ಷಕರು ನಿರಂತರ ಅಧ್ಯಯನ ಮೂಲಕ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು. ರಾಜ್ಯದ ಶೈಕ್ಷಣಿಕ ಸಾಧನೆಯಲ್ಲಿ ಧಾರವಾಡ ಜಿಲ್ಲೆ ಹಿಂದೆ 10ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ 8ನೇ ಸ್ಥಾನಕ್ಕೇರಿದೆ. ಇದಕ್ಕೆಲ್ಲ ಶಿಕ್ಷಕರ ಪರಿಶ್ರಮವೇ ಕಾರಣವಾಗಿದೆ. ಆದ್ದರಿಂದ ಈ ಕಾರ್ಯಕ್ಕೆ ಶ್ರಮಿಸಿದ ಜಿಲ್ಲೆಯ ಎಲ್ಲ ಶಿಕ್ಷಕರಿಗೆ ಅಭಿನಂದನೆಗಳು ಎಂದರು. 

ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಮಕ್ಕಳ ಅಭಿವೃದ್ಧಿಗೆ ಕಾರಣರಾದ ಶಿಕ್ಷಕರಿಗೆ ಶಿಕ್ಷಣ ಪರಿಶ್ರಮ ಗೌರವ ನೀಡಿ ಸನ್ಮಾನಿಸಲಾಯಿತು. ಸಾಹಿತಿ ಡಾ|ಸಿದ್ಧಲಿಂಗ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎಸ್‌. ಜಯಕುಮಾರ, ಎಂ.ಡಿ. ಬಳ್ಳಾರಿ, ಬಸವರಾಜ ಗುರಿಕಾರ, ಶಿವಶಂಕರ ಹಿರೇಮಠ, ಎಸ್‌.ಬಿ.ಕೊಡ್ಲಿ, ಶಂಕರ ಗಂಗಣ್ಣವರ, ಎಸ್‌.ಎಂ. ಹುಡೇದಮನಿ ಇದ್ದರು. 

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.