ಕೇಂದ್ರವೂ ರೈತರ ಸಾಲಮನ್ನಾ ಮಾಡಲಿ
Team Udayavani, Jul 11, 2017, 12:27 PM IST
ದಾವಣಗೆರೆ: ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ರೈತರ ಸಾಲ ಸಂಪೂರ್ಣ ಮನ್ನಾ ಮಾಡಲು ಒತ್ತಾಯಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಸಂಸದ ಜಿ.ಎಂ. ಸಿದ್ದೇಶ್ವರ್ ಕಚೇರಿ ಎದುರು ಪ್ರತಿಭಟಿಸಿದ್ದಾರೆ.
ರಾಜ್ಯ ಸರ್ಕಾರ ಸಹಕಾರ ಸಂಘಗಳಲ್ಲಿನ ರೈತರ 50 ಸಾವಿರ ರೂ. ಸಾಲ ಮನ್ನಾ ಮಾಡಿದಂತೆ ಕೇಂದ್ರ ಸರ್ಕಾರ ರಾಷ್ಟ್ರೀಕೃತ
ಬ್ಯಾಂಕ್‌ನಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಮತ್ತು
ರಾಜ್ಯ ಬಿಜೆಪಿ ಮುಖಂಡರು, ಸಂಸದರ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಸತತ ಎರಡು ವರ್ಷದ ಭೀಕರ ಬರಗಾಲದಿಂದ ರೈತರು ತತ್ತರಿಸಿದ್ದಾರೆ. ರೈತರ ಮನವಿಗೆ ಸ್ಪಂದಿಸಿದ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಹಕಾರ ಸಂಘಗಳಲ್ಲಿನ ರೈತರ 50 ಸಾವಿರ ರೂ. ಸಾಲ ಮನ್ನಾ ಮಾಡಿ, ರೈತರ ನೆರವಿಗೆ
ದಾವಿಸಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು
ಪ್ರತಿಭಟನಾಕಾರರು ಒತ್ತಾಯಿಸಿದರು.
ರಾಜ್ಯ ಸರ್ಕಾರ ಸಾಲ ಮನ್ನಾ ಮಾಡುವ ಮುನ್ನ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನವರು ಮುಖ್ಯಮಂತ್ರಿ
ಸಿದ್ದರಾಮಯ್ಯನವರ ಮೂಗು ಹಿಡಿದು, ಸಾಲ ಮನ್ನಾ ಮಾಡಿಸುವುದಾಗಿ ಹೇಳಿಕೆ ನೀಡಿದ್ದರು. ಮುಖ್ಯಮಂತ್ರಿಗಳು 50
ಸಾವಿರ ಸಾಲ ಮನ್ನಾ ಮೂಲಕ 22 ಲಕ್ಷಕ್ಕೂ ಹೆಚ್ಚಿನ ರೈತರಿಗೆ ಅನುಕೂಲ ಮಾಡಿದ್ದಾರೆ. ಈಗ ಯಡಿಯೂರಪ್ಪನವರು ಪ್ರಧಾನಿ
ನರೇಂದ್ರ ಮೋದಿಯವರ ಮೂಗು ಹಿಡಿದು, ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು
ಎಂದು ಒತ್ತಾಯಿಸಿದರು.
ತೀವ್ರ ಬರದ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರೆ ಕೇಂದ್ರ ಸರ್ಕಾರದ ಸಚಿವರು ರೈತರ ಬೇಡಿಕೆಯ ಬಗ್ಗೆ ಬಹಳ ಹಗುರವಾಗಿ ಮಾತನಾಡುತ್ತಾರೆ. ಸಂಸದ ಶ್ರೀರಾಮುಲು ಸಹ ರೈತರ ಬಗ್ಗೆ ಹಗುರವಾಗಿ ಮಾತನಾಡಿರುವುದು ಅತ್ಯಂತ ಖಂಡನೀಯ. ಕೇಂದ್ರ ಸರ್ಕಾರದ ರಚನೆಗೆ ರಾಜ್ಯದ ಜನರು 17 ಸಂಸದರನ್ನು ನೀಡಿದ್ದಾರೆ ಎಂಬುದನ್ನು ಮರೆಯಬಾರದು. 17 ಜನ ಬಿಜೆಪಿ ಸಂಸದರು ಒಮ್ಮೆಯಾದರೂ ಸಂಸತ್‌ನಲ್ಲಿ ರೈತರ ಬಗ್ಗೆ ಮಾತನಾಡದೆ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ರೈತರ ಸಾಲಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಘಟಕದ ಜಿಲ್ಲಾಧ್ಯಕ್ಷ ಸೈಯದ್ ಖಾಲಿದ್ ಅಹ್ಮದ್, ಖಾಲಿದ್ ಪೈಲ್ವಾನ್, ಎಚ್. ಜೆ. ಮೈನುದೀªನ್, ಸೈಯದ್ ಕಬೀರ್, ಫೈಹಿಂ, ಮೊಹಮ್ಮದ್ ಸಲೀಂ, ಅಬ್ದುಲ್ ಮುನಾಫ್, ಎ.ಎಸ್. ನೂರ್, ನಯಾಜ್ ಅಹ್ಮದ್, ಸೈಯದ್ ರಫೀಕ್ ಉಲ್ಲಾ, ಆಸೀಫ್ ಉಲ್ಲಾ, ಜಾಕೀರ್ ಹುಸೇನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
MUST WATCH
ಹೊಸ ಸೇರ್ಪಡೆ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.