ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸುದೀಪ್‌ ನಿರ್ಧಾರ


Team Udayavani, Jul 12, 2017, 10:28 AM IST

Sudeep-(5).jpg

ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವೆಂದು ಸೋಮವಾರವಷ್ಟೇ ಶಿವರಾಜಕುಮಾರ್‌ ಹೇಳಿದ್ದರು. ಈಗ ನಟ ಸುದೀಪ್‌ ಇನ್ನು ಮುಂದೆ ಯಾವತ್ತೂ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರುವ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ತಮ್ಮ ಹುಟ್ಟುಹಬ್ಬಕ್ಕೆಂದು ಅಭಿಮಾನಿಗಳು ಖರ್ಚು ಮಾಡುವ ದುಡ್ಡನ್ನು ಒಳ್ಳೆಯ ಕೆಲಸಗಳಿಗೆ ಬಳಸಿಕೊಳ್ಳುವಂತೆ ಕರೆ ನೀಡಿದ್ದಾರೆ.

ಈ ಕುರಿತು ಸುದೀಪ್‌ ತಮ್ಮ ಅಭಿಮಾನಿಗಳಿಗೆ ಮಂಗಳವಾರ ಒಂದು ಪತ್ರ ಬರೆದಿದ್ದಾರೆ. ಅಷ್ಟೇ ಅಲ್ಲ, ತಮ್ಮ ನಿರ್ಧಾರವನ್ನು ಅಭಿಮಾನಿಗಳು ಗೌರವಿಸುತ್ತಾರೆ ಎಂದು ನಂಬಿರುವುದಾಗಿ ಹೇಳಿಕೊಂಡಿದ್ದಾರೆ. ಸುದೀಪ್‌ ಬರೆದಿರುವ ಪತ್ರದ ಸಾರಂಶ ಇಲ್ಲಿದೆ …

ಸ್ನೇಹಿತರೆ,
ಪ್ರತಿ ವರ್ಷ ನೀವೆಲ್ಲಾ ನನ್ನ ಹುಟ್ಟುಹಬ್ಬಕ್ಕೆ ಬಂದು ನನ್ನನ್ನು ಹಾರೈಸುವಾಗ ಬಹಳ ಖುಷಿಯಾಗುತಿತ್ತು. ನನ್ನ ಹುಟ್ಟುಹಬ್ಬವನ್ನು, ನಿಮ್ಮ ಹುಟ್ಟುಹಬ್ಬದಷ್ಟೇ ಸಂಭ್ರಮದಿಂದ ಆಚರಿಸುವುದನ್ನು ನೋಡಿ ಖುಷಿಯಾಗುತ್ತಿದ್ದು. ಸುಮಾರು ಎರಡು ದಶಕಗಳಿಂದ, ನೀವು ನನಗೆ ತೋರಿಸುತ್ತಿರುವ ಪ್ರೀತಿಗೆ ನಾನು ಚಿರಋಣಿ. ನಿಮ್ಮ ಪ್ರೀತಿ ಬೆಲೆ ಕಟ್ಟಲಾಗದ್ದು ಮತ್ತು ನಾನು ಏನು ಮಾಡಿದರೂ ಆ ಪ್ರೀತಿಯ ಋಣವನ್ನು ತೀರಿಸುವುದಕ್ಕೆ ಸಾಧ್ಯವೇ ಇಲ್ಲ.

ಕಳೆದ ಹಲವು ವರ್ಷಗಳಿಂದ ನಾನು ಒಂದು ವಿಷಯವನ್ನು ಗಮನಿಸುತ್ತಾ ಬಂದಿದ್ದೇನೆ. ಪ್ರತಿ ವರ್ಷ ನನ್ನ ಹುಟ್ಟುಹಬ್ಬಕ್ಕೆ, ಅಭಿಮಾನಿಗಳು ತಾವು ಕಷ್ಟಪಟ್ಟು ದುಡಿದ ಹಣವನ್ನು ದೊಡ್ಡ ಹಾರಗಳು ಮತ್ತು ಕೇಕ್‌ ಮೇಲ್‌ ಖರ್ಚು ಮಾಡುವುದನ್ನು ನೋಡಿದ್ದೇನೆ. ಎಷ್ಟೇ ಜನ ನೂರಾರು ಮೈಲಿಯಿಂದ ಬೆಂಗಳೂರಿಗೆ ಬಂದು, ನನ್ನನ್ನು ಹಾರೈಸುವುದನ್ನು ನೋಡಿದ್ದೇನೆ. ನನ್ನ ಮನೆ, ರೋಡು, ಸುತ್ತಮುತ್ತಲ ಪರಿಸರವನ್ನು ಅಲಂಕಾರ ಮಾಡುವುದನ್ನು ನೋಡಿದ್ದೇನೆ.

ನನ್ನ ಒಂದು ಮನವಿಯೇನೆಂದರೆ, ಮುಂದಿನ ದಿನಗಳಲ್ಲಿ ಆ ಹಣವನ್ನು ಸುಮ್ಮನೆ ಪೋಲು ಮಾಡುವ ಬದಲು ದಯವಿಟ್ಟು ಅವಶ್ಯಕತೆ ಇರುವವರಿಗೆ ಕೊಡಿ. ಯಾರಿಗಾದರೂ ಊಟದ ಅವಶ್ಯಕತೆ ಇದ್ದಲ್ಲಿ, ಒಂದು ಹೊತ್ತಿನ ಊಟಕ್ಕೂ ಪರದಾಡುವ ಸಂದರ್ಭದಲ್ಲಿ ಅವರಿಗೆ ಸಹಾಯ ಮಾಡಿ. ಈ ಕೇಕು, ಅಲಂಕಾರ ಮತ್ತು ಹಾರಕ್ಕೆ ಖರ್ಚು ಮಾಡುವ ಹಣವನ್ನು ಯಾರನ್ನಾದರೂ ಉಳಿಸಬಹುದು. ನಿಜ ಹೇಳಬೇಕೆಂದರೆ, ನನ್ನ ಹುಟ್ಟುಹಬ್ಬಕ್ಕೆ ನೀವುಗಳು ಕೊಡಬಹುದಾದ ಅತ್ಯುತ್ತುಮ ಗಿಫ‌ುr ಎಂದರೆ ಅದು.

ಇದಕ್ಕಿಂದ ಚೆನ್ನಾಗಿ ಹುಟ್ಟುಹಬ್ಬವನ್ನು ಆಚರಿಸುವುದಕ್ಕೆ ಸಾಧ್ಯವಿಲ್ಲ. ಈ ಮೂಲಕ ನಮ್ಮ ಸುತ್ತಮುತ್ತ ಇರುವ ಜನರಿಗೂ ನಾವು ಅಲ್ಪಸ್ವಲ್ಪ ಸಹಾಯ ಮಾಡಿದಂತಾಗುತ್ತದೆ. ಇನ್ನು ಮುಂದೆ ನಾನು ಹುಟ್ಟುಹಬ್ಬವನ್ನು ಆಚರಿಸಬಾರದೆಂದು ತೀರ್ಮಾನಿಸಿರುವುದಷ್ಟೇ ಅಲ್ಲ, ನನ್ನ ಹುಟ್ಟುಹಬ್ಬದ ದಿನ ನಾನು ಮನೆಯಲ್ಲೂ ಇರುವುದಿಲ್ಲ. ಈಗ ನಾನು ನಿಮಗೆ ಏನು ಮನವಿ ಮಾಡಿದ್ದೀನೋ, ಆ ದಿನ ನಾನು ಸಹ ನಾಲ್ಕು ಜನಕ್ಕೆ ಉಪಯೋಗುವಾಗುವಂತಹ ಕೆಲಸ ಮಾಡಬೇಕು ಎಂಬುದು ನನ್ನ ಇಚ್ಛೆ.

ನೀವೆಲ್ಲರೂ ನನ್ನ ಈ ಒಂದು ಮನವಿಯನ್ನು ಪುರಸ್ಕರಿಸುತ್ತೀರಾ ಮತ್ತು ಗೌರವಿಸುತ್ತಾರಾ ಎಂದು ನಂಬಿದ್ದೇನೆ. ಅಂದು, ನಮ್ಮೆಲ್ಲರ ಸಮಯವನ್ನು, ಒಂದಿಷ್ಟು ಜನ ಮುಖದಲ್ಲಿ ಸ್ಮೈಲ್‌ ತರುವುದಕ್ಕೆ ಶ್ರಮಿಸೋಣ. ನಿಮ್ಮ ಸುತ್ತಮುತ್ತಲಲ್ಲಿ ಯಾರಿಗಾದರೂ ಸಹಾಯದ ಅಗತ್ಯವಿದ್ದಲ್ಲಿ, ಅವರಿಗೆ ಸಾಧ್ಯವಾದಷ್ಟೂ ಸಹಾಯ ಮಾಡಿ.
-ಪ್ರೀತಿಯಿಂದ ಸುದೀಪ್‌

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.