ಭೂ ರಹಿತರಿಗೆ ಸರ್ಕಾರ ಭೂಮಿ ನೀಡಲಿ
Team Udayavani, Jul 12, 2017, 11:28 AM IST
ಬೆಂಗಳೂರು: ಭೂ ರಹಿತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ಕೂಡಲೇ ಎಲ್ಲಾ ಕುಟುಂಬಕ್ಕೂ ಎರಡು ಎಕರೆ ಭೂಮಿ ಮಂಜೂರು ಮಾಡಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹೇಳಿದರು.
ಎಂ.ಪಿ.ಪ್ರಕಾಶ್ ಪ್ರತಿಷ್ಠಾನ, ರಂಗಭಾರತಿ ಸಂಸ್ಥೆಯಿಂದ ಮಂಗಳವಾರ ಆಯೋಜಿಸಿದ್ದ ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ 77ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ “ಎಂ.ಪಿ.ಪ್ರಕಾಶ್ ರಾಷ್ಟ್ರೀಯ ಸೇವಾಸಿರಿ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.
“ದೇಶ ಸ್ವಾತಂತ್ರ್ಯ ಪಡೆದು ಏಳು ದಶಕ ಕಳೆದರೂ ಬಡತನ ನಿರ್ಮೂಲನೆ ಆಗಿಲ್ಲ. ಭೂರಹಿತರಿಗೆ ಭೂಮಿ ನೀಡಿ ಮುಖ್ಯ ವಾಹಿನಿಗೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ರಾಜ್ಯದಲ್ಲಿ ಭೂ ರಹಿತರಿಗೆ ಎರಡು ಎಕರೆ ಭೂಮಿ ನೀಡಲು ಶಾಸಕರು ಒಪ್ಪಿಗೆ ನೀಡಿದ್ದರೂ, ಯೋಜನೆ ಕಾರ್ಯರೂಪಕ್ಕೆ ಬಂದಿಲ್ಲ,’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿ, “ನಾನು ಚಿಕ್ಕಂದಿನಲ್ಲಿ ಎಂ.ಪಿ.ಪ್ರಕಾಶ್ ಅವರು ಅಭಿಮಾನಿ, ಅನುಯಾಯಿಯಾಗಿ ಅವರ ಗರಡಿಯಲ್ಲೇ ಪಳಗಿ ರಾಜಕೀಯದಲ್ಲಿ ಬೆಳೆದಿದ್ದೇನೆ. ಇಂದಿನ ಯುವ ರಾಜಕಾರಣಿಗಳು ಎಂಪಿ.ಪ್ರಕಾಶ್ ಅವರು ಹಾಕಿಕೊಟ್ಟ ಹಾದಿಯಲ್ಲಿ ಸಾಗುವ ಅನಿವಾರ್ಯತೆ ಇದೆ,’ ಎಂದು ಹೇಳಿದರು.
ಚಿಂತಕ ಗೊ.ರು.ಚನ್ನಬಸಪ್ಪ ಅವರಿಗೆ “ಎಂ.ಪಿ.ಪ್ರಕಾಶ್ ಸಾಹಿತ್ಯ ಸೇವಾ ಸಿರಿ ಪ್ರಶಸ್ತಿ’, ಸಾಮರ್ಥ್ಯ ವಿಕಲಚೇತನ ಪುನಶ್ಚೇತನ ಸೇವಾ ಸಂಸ್ಥೆಗೆ “ಮ.ಮ. ಪಾಟೀಲ ಜನಸೇವಕ ಪ್ರಶಸ್ತಿ’, “ಎಂ.ಪಿ.ಕೊಟ್ರಗೌಡ ಕಲಾರಾಧಕ ಪ್ರಶಸ್ತಿ’ಯನ್ನು ನಟಿ ಗಿರಿಜಾ ಲೋಕೇಶ್ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ತಲಾ ಒಂದು ಲಕ್ಷ ರೂ. ನಗದು ಹಾಗೂ ಶಾಶ್ವತ ಫಲಕ ಒಳಗೊಂಡಿವೆ.
ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ, ಮಾಜಿ ಸಚಿವ ಅಮರೇಗೌಡ ಬೈಯಾಪುರ, ಶಿವರಾತ್ರೀಶ್ವರ ದೇಶೀಕೇಂದ್ರ ಮಹಾಸ್ವಾಮಿ, ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮೀಜಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬೆಂಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.