ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ: ಖಾಲಿ ಕೊಡ ಪ್ರದರ್ಶನ
Team Udayavani, Jul 12, 2017, 12:09 PM IST
ಮೈಸೂರು: ಮುಂಗಾರು ವೈಫಲ್ಯದಿಂದ ಕಾವೇರಿ ಕಣಿವೆಯ ಜಲಾಶಯಗಳು ಭರ್ತಿಯಾಗದಿದ್ದರೂ ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿದ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಸದಸ್ಯರು ಖಾಲಿಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.
ನಗರದ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಮುಂಭಾಗ ಸೇರಿದ ಸಂಘದ ಸದಸ್ಯರು ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳಿಂದ ತಮಿಳು ನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸಿ ಈ ಭಾಗದ ನಾಲೆಗಳಿಗೆ ನೀರು ಹರಿಸಿ ರೈತರು, ಜಾನುವಾರುಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶೈಲಜಾ, ಉಪಾಧ್ಯಕ್ಷ ಬಸವರಾಜು, ಶ್ರೀಕಂಠ, ಡಿ.ಎನ್.ಸುರೇಶ್, ಬಾಬು, ಕುಮಾರ್, ಪ್ರಮೀಳಾ, ಉಷಾ, ಗೌರಮ್ಮ, ಪ್ರೇಮಾ, ರಮಾ, ಸುಕನ್ಯ, ಉಮಾದೇವಿ, ಆಶಾ ಇತರರು ಪ್ರತಿಭನೆಯಲ್ಲಿ ಭಾವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.