ಹೆಗ್ಗಡೆ ಭವನದಲ್ಲಿ ದಿ| ವಿ. ಟಿ. ಹೆಗ್ಡೆ ಅವರಿಗೆ ಶ್ರದ್ಧಾಂಜಲಿ ಸಭೆ

Team Udayavani, Jul 12, 2017, 3:05 PM IST

10-Mum09.jpg

ನವಿಮುಂಬಯಿ: ಹೆಗ್ಗಡೆ ಸೇವಾ ಸಂಘ ಮುಂಬಯಿ ವತಿಯಿಂದ ಜು. 8ರಂದು ಸಂಜೆ  ಐರೋಲಿಯ ಹೆಗ್ಗಡೆ ಭವನದಲ್ಲಿ ದಿ| ವಿ. ಟಿ. ಹೆಗ್ಡೆ ಅವರಿಗೆ ಶ್ರದ್ದಾಂಜಲಿ ಸಭೆಯನ್ನು ಏರ್ಪಡಿಸಲಾಗಿತ್ತು.

ಹೆಗ್ಗಡೆ ಸೇವಾ ಸಂಘದ ಅಧ್ಯಕ್ಷ ವಿಜಯ ಬಿ. ಹೆಗ್ಡೆ ಅವರು ದಿ| ವಿ. ಟಿ. ಹೆಗ್ಡೆ ಅವರ ಭಾವಚಿತ್ರಕ್ಕೆ ಪುಷ್ಪವೃಷ್ಟಿಗೈದು ನುಡಿನಮನ ಸಲ್ಲಿಸಿ, ಸಹೃದಯತೆ, ಪ್ರೀತಿ ವಿಶ್ವಾಸಗಳಿಂದ ಸದಾ ಬೆರೆತು, ಸದಾ ಹೆಗ್ಗಡೆ ಸಮಾಜದ ಉನ್ನತಿಯನ್ನು ಬಯಸಿದ ವಿ. ಟಿ. ಹೆಗ್ಡೆ ಅವರು ಮುಂಬಯಿ ಮಹಾನಗರದಲ್ಲಿ ಸಮಾಜದ ಮಿತ್ರರನ್ನು ಒಂದುಗೂಡಿಸಿ ಹೆಗ್ಗಡೆ ಸೇವಾ ಸಂಘ ಎಂಬ ಸಂಸ್ಥೆಯನ್ನು ಹುಟ್ಟು ಹಾಕಲು ಕಾರಣೀಭೂತರಾಗಿದ್ದರು. ಅಲ್ಲದೆ ಸಂಸ್ಥೆಯ  ಶ್ರೇಯೋಭಿವೃದ್ದಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಸಂಸ್ಥೆಯ ಉನ್ನತ ಹುದ್ದೆ ಅಧ್ಯಕ್ಷೀಯ ಪದವಿಯನ್ನು ಅಲಂಕರಿಸಿ ಉತ್ತಮ ಸಮಾಜಮುಖೀ ಕಾರ್ಯಕ್ರಮಗಳನ್ನು ಮಾಡಿ ಐರೋಲಿಯಲ್ಲಿ ನಿರ್ಮಿತಗೊಂಡ ಹೆಗ್ಗಡೆ ಭವನ ಇದರ ಸಭಾ ಭವನವನ್ನು ಅವರ ಪತ್ನಿ ದಿ|  ಜಯಂತಿ ಹೆಗ್ಡೆ ಅವರ ಸವಿನೆನಪಿಗಾಗಿ ನಿರ್ಮಿಸಿ ಅದರಿಂದ ಸಮಾಜ ಮುಖೀ ಕಾರ್ಯಕ್ರಮಗಳನ್ನು ನೀಡಲು ಸಹಕರಿಸಿದ  ಒಬ್ಬ ನಿಜವಾದ ಸಮಾಜ ಪ್ರೇಮಿಯಾಗಿ ಯುವ ಪೀಳಿಗೆಗೆ ದಾರಿದೀಪವಾಗಿದ್ದಾರೆ ಎಂದು ಹೇಳಿದರು.

ಮಾಜಿ ಅಧ್ಯಕ್ಷ ವಿ. ಎಸ್‌. ಹೆಗ್ಡೆ ಅವರು ಮಾತನಾಡಿ, ಸಮಾಜಕ್ಕಾಗಿ ತನ್ನ ಜೀವನವನ್ನೇ ಅರ್ಪಣೆ ಮಾಡಿದ ಸಂಘಟಕ ವಿ. ಟಿ. ಹೆಗ್ಡೆ ಅವರಾಗಿದ್ದಾರೆ. ಸಂಘಟನೆಗಾಗಿ ಹಗಲಿರುಳು ಶ್ರಮಿಸುವುದರೊಂದಿಗೆ ಸಂಸ್ಥೆಯು ಬಲಾಡ್ಯಗೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದರು.

ಹೆಗ್ಗಡೆ ಸೇವಾ ಸಂಘದ ಮಾಜಿ ಕಾರ್ಯದರ್ಶಿ ಪ್ರಭಾಕರ ಹೆಗ್ಡೆ ಅವರು ಮಾತನಾಡಿ, ತಾನು ಶಿಸ್ತಿನ ಸಿಪಾಯಿಯಾಗಿ, ಸಮಾಜಕ್ಕೂ ಶಿಸ್ತನ್ನು ರೂಪಿಸುವಲ್ಲಿ ಅವರ ಕಾರ್ಯ ಅಭಿನಂದನೀಯ. ಅವರ ಆದರ್ಶಗಳು ನಮಗೆಲ್ಲ ದಾರಿದೀಪವಾಗಿದೆ. ಭವನ ನಿರ್ಮಾಣದ ಸಂದರ್ಭದಲ್ಲಿ ಅವರು ನೀಡಿದ ಸಹಾಯ, ಪ್ರೋತ್ಸಾಹ ಅವಿಸ್ಮರಣೀಯವಾಗಿದೆ ಎಂದು ಹೇಳಿದರು.

ಸಮಾಜದ ಸಂಘಟಕ, ಕಲಾವಿದ ಅನಿಲ್‌ ಹೆಗ್ಡೆ ಅವರು ಮಾತನಾಡಿ, ಪ್ರಸಿದ್ಧಿಗೆ, ಹೆಸರಿಗೋಸ್ಕರ ದಾನಮಾಡದೆ ಸಮಾಜದ ಮೇಲಿನ ಪ್ರೀತಿಯಿಂದ ಸಂಘಟನೆಗೆ ದೇಣಿಗೆ ನೀಡಿದ ಮಹಾನ್‌ ನಾಯಕ ಅವರಾಗಿದ್ದಾರೆ. ಸಮಾಜದ ಈ ಸಂಘನೆಯಲ್ಲಿ ಅವರ ಹೆಸರು ಸ್ಮರಣೀಯವಾಗಲಿದೆ ಎಂದು ಹೇಳಿದರು.

ಮಾಜಿ ಅಧ್ಯಕ್ಷ ರತ್ನಾಕರ ಹೆಗ್ಡೆ ಅವರು ಮಾತನಾಡಿ, ಇಟ್ಟದ್ದು ತನಗೆ ಬಚ್ಚಿಟ್ಟದ್ದು ಪರರಿಗೆ ಎಂಬ ಸಿದ್ಧಾಂತವನ್ನು ರೂಪಿಸಿಕೊಂಡ ಸಮಾಜದ ನಾಯಕ ಅವರಾಗಿದ್ದಾರೆ ಎಂದರು. ಎಲ್‌. ಸಿ. ಹೆಗ್ಡೆ ಅವರು ಮಾತನಾಡಿ, ಅನೇಕ ವರ್ಷಗಳಿಂದ ಅವರೊಂದಿಗೆ ಸಂಘಟನೆಯೊಂದಿಗೆ ಸೇವೆ ಮಾಡುವ ಭಾಗ್ಯ ನನಗೆ ದೊರೆತಿದೆ. ಸಮಾಜ ಸೇವೆಯ ಪಾಠವನ್ನು ಅವರಿಂದ ನಾನು ಕಲಿತಿದ್ದೇನೆ ಎಂದರು.

ದಿ| ವಿ. ಟಿ. ಹೆಗ್ಡೆ ಅವರ ಪುತ್ರ ದಿನೇಶ್‌ ಹೆಗ್ಡೆ ಅವರು ಮಾತನಾಡಿ, ತಂದೆಗಿಂತಲೂ ಓರ್ವ ಉತ್ತಮ ಗುರುವಿನಂತೆ ನಮಗೆ ಮಾರ್ಗದರ್ಶನ ನೀಡಿ ನಮ್ಮನ್ನು ಬೆಳೆಸಿದ್ದಾರೆ. ಅವರಂತಹ  ತಂದೆ ನನ್ನ ಪಾಲಿಗೆ ದೊರೆತದ್ದು ಪೂರ್ವ ಜನ್ಮದ ಪುಣ್ಯದ ಫಲವಾಗಿದೆ ಎಂದು ಹೇಳಿದರು.

ಹೆಗ್ಗಡೆ ಸೇವಾ ಸಂಘ ಮುಂಬಯಿ ಗೌರವಾಧ್ಯಕ್ಷ ಸಂಜೀವ ಪಿ. ಹೆಗ್ಡೆ, ಉಪಾಧ್ಯಕ್ಷರಾದ ಬಿ. ಗೋಪಾಲ್‌ ಹೆಗ್ಡೆ, ಜಯರಾಮ ಹೆಗ್ಡೆ, ಕಾರ್ಯದರ್ಶಿ ಶಂಕರ್‌ ಆರ್‌. ಹೆಗ್ಡೆ, ಕೋಶಾಧಿಕಾರಿ ರಮೇಶ್‌ ಎಂ. ಹೆಗ್ಡೆ, 
ಜತೆ ಕಾರ್ಯದರ್ಶಿ ರವಿ ಎಸ್‌. ಹೆಗ್ಡೆ, ಜತೆ ಕೋಶಾಧಿಕಾರಿ ಚಂದ್ರಶೇಖರ ಬಿ. ಹೆಗ್ಡೆ, ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಯುವ ವಿಭಾಗ, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯ ಬಾಂಧವರು ಉಪಸ್ಥಿತರಿದ್ದು, ದಿ| ವಿ. ಟಿ. ಹೆಗ್ಡೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.  

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.