ಉನ್ನತ ಪೊಲೀಸ್ ಅಧಿಕಾರಿಗಳ ಸಭೆ
Team Udayavani, Jul 13, 2017, 3:30 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲೂ ಮುಖ್ಯ ವಾಗಿ ಬಂಟ್ವಾಳ ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ವಿವಿಧ ಅನಪೇಕ್ಷಿತ ಘಟನೆಗಳ ಹಿನ್ನೆಲೆಯಲ್ಲಿ ಎಡಿಜಿಪಿ ಆಲೋಕ್ ಮೋಹನ್ ಅಧ್ಯಕ್ಷತೆಯಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ಬುಧವಾರ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮತ್ತು ಐಜಿಪಿ ಕಚೇರಿಯಲ್ಲಿ ನಡೆಯಿತು.
ಜಿಲ್ಲೆಯ ಮಾಜಿ ಪೊಲೀಸ್ ಅಧಿಕಾರಿಗಳೂ ಭಾಗವಹಿಸಿರುವುದು ಸಭೆಯ ವೈಶಿಷ್ಟ é.ನಿಕಟಪೂರ್ವ ಪೊಲೀಸ್ ಆಯುಕ್ತ ಹಾಗೂ ಪ್ರಸ್ತುತ ಸಿಐಡಿ ವಿಭಾಗದ ಐಜಿ ಆಗಿರುವ ಎಂ. ಚಂದ್ರಶೇಖರ್, ಮಾಜಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಶರಣಪ್ಪ, ಗುಪ್ತಚರ ವಿಭಾಗದ ಐಜಿ ಹಾಗೂ ಪಶ್ಚಿಮ ವಲಯದ ಮಾಜಿ ಐಜಿಪಿ ಅಮೃತ್ ಪೌಲ್, ಹಾಸನ ಎಸ್ಪಿ ರಾಹುಲ್, ಬೆಳಗಾವಿ ಗ್ರಾಮಾಂತರ ಎಸ್ಪಿ ರವೀಂದ್ರ ಗಡಾದಿ, ಪಶ್ಚಿಮ ವಲಯದ ಹಾಲಿ ಐಜಿಪಿ ಹರಿಶೇಖರನ್, ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ, ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರು ಸಭೆಯಲ್ಲಿದ್ದರು.
ಸಭೆ ಮೇಲೆ ಸಭೆ: ಮುಖ್ಯಮಂತ್ರಿ ಸೂಚನೆ ಮೇರೆಗೆ ಮಂಗಳವಾರ ಆಗಮಿಸಿದ ಅವರು ಪೊಲೀಸ್ ಅ ಧಿಕಾರಿಗಳೊಂದಿಗೆ ರಾತ್ರಿಯೇ ಆಂತರಿಕ ಸಭೆ ನಡೆ ಸಿ ದ್ದರು. ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ ವರೆಗೆ ಕಮಿಷನರ್ ಕಚೇರಿ ಯಲ್ಲಿ ಸುದೀರ್ಘ ಸಭೆ ನಡೆ ಸಿ ದರು. ಬಳಿಕ ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ 1 ತಾಸು ಸಭೆ ನಡೆಸಿ ಪ್ರಕರಣಗಳ ಪರಾಮರ್ಶೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.