ಸಾಲ ಮನ್ನಾಕ್ಕೆ ಆಗ್ರಹಿಸಿ ಬಿಎಸ್ವೈಗೆ ಘೆರಾವ್
Team Udayavani, Jul 13, 2017, 2:21 PM IST
ಶಿಕಾರಿಪುರ: ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್
ಕಾರ್ಯಕರ್ತರು ಸಂಸದ ಬಿ.ಎಸ್. ಯಡಿಯೂರಪ್ಪ ಅವರಿಗೆ ಘೆರಾವ್ ಹಾಕಿ ಘೋಷಣೆ ಕೂಗಿ ಪ್ರತಿಭಟಿಸಿದರು.
ಪಟ್ಟಣದ ಮಾಳರಕೇರಿಯಲ್ಲಿನ ಯಡಿಯೂರಪ್ಪನವರ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ ಯುವ ಕಾಂಗ್ರೆಸ್
ಕಾಯಕರ್ತರನ್ನು ಮಾರ್ಗಮಧ್ಯದಲ್ಲಿ ಪೊಲೀಸರು ತಡೆದರು. ಈ ಸಂಧರ್ಭದಲ್ಲಿ ಪ್ರತಿಭಟನಾಕಾರರ ಬಳಿ ಬಂದ
ಯಡಿಯೂರಪ್ಪರಿಗೆ ಸಿದ್ದರಾಮಯ್ಯನವರ ಸರ್ಕಾರ ರಾಜ್ಯದಲ್ಲಿರುವ ರೈತರ ಸಾಲ ಮನ್ನಾ ಮಾಡಿದೆ. ನಿಮ್ಮ ಪಕ್ಷ ಕೇಂದ್ರದಲ್ಲಿ
ಅ ಧಿಕಾರದಲ್ಲಿದ್ದು ನೀವು ಸಂಸದರೂ ಆಗಿದ್ದೀರಿ. ತಕ್ಷಣ ಪ್ರಧಾನಿ ಮೋದಿ ಅವರ ಮನವೊಲಿಸಿರೈತರ ಸಾಲಮನ್ನಾ ಮಾಡಿಸಬೇಕು. ರಾಜ್ಯದಲ್ಲಿರುವ ನಿಮ್ಮ ಪಕ್ಷದ ಎಲ್ಲಾ ಸಂಸದರ ನಿಯೋಗವನ್ನು ಕರೆದುಕೊಂಡು ಹೋಗಿ 3 ವರ್ಷದಿಂದ ಭೀಕರ ಬರಗಾಲವಿರುವ ರೈತರ ಪರಿಸ್ಥಿಯನ್ನು ಮನವರಿಕೆ ಮಾಡಿಸಿ ಸಾಲ ಮನ್ನಾ ಮಾಡಿಸಿ ಎಂದರು.
ನಿಮ್ಮ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೊದಲು ಸ್ವಾಮಿನಾಥನ್ ವರದಿ ಜಾರಿಗೆ ತರುವುದಾಗಿ ಹೇಳಿದ್ದು ಏನಾಯಿತು?
ದೇಶದ ರೈತರಿಗೆ ಅನ್ಯಾಯವಾಗುವಂತೆ ಮಾಡಿದ್ದೀರಿ. ಈ ಹಿಂದೆ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ರೈತರ ಸಾಲಮನ್ನಾ
ಮಾಡಿದ್ದರು ಎಂದರು. ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿದ ಯಡಿಯೂರಪ್ಪ ಈ ಬಗ್ಗೆ ಪ್ರಯತ್ನಿಸುವುದಾಗಿ ಭರವಸೆ
ನೀಡಿದರು.
ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಉಳ್ಳಿ ದರ್ಶನ , ಪುರಭಾ ಸದಸ್ಯ ಮಹೇಶ್ ಹುಲ್ಮಾರ್, ದಾರವಾಡದ ಸುರೇಶ, ಹಳ್ಳುರು
ಪರಮೇಶ್ವರಪ್ಪ ಎಪಿಎಂಸಿ ಸದಸ್ಯ ನಗರದ ರವಿಕಿರಣ , ಸ.ನ ಮಂಜಪ್ಪ, ರಾಘವೇಂದ್ರ ನಾಯ್ಕ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್ವೈ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.