ಮೈ-ಟೆಕ್: ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ
Team Udayavani, Jul 14, 2017, 3:50 AM IST
ಉಡುಪಿ: ಕೇಂದ್ರ ಸರಕಾರದ ಮಹಾತ್ವಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ತರಬೇತಿಗಳಲ್ಲಿ ವಿದ್ಯಾವಂತ ಯುವ ಜನಾಂಗವು ಭಾಗವಹಿಸಿ ತಮ್ಮ ಕೌಶಲ್ಯವನ್ನು ಹೆಚ್ಚಿಸುವುದರ ಜತೆಗೆ ನಿರುದ್ಯೋಗಿ ಸಮಸ್ಯೆಯನ್ನು ನಿವಾರಿಸಬಹುದು. ಇದರ ಬಗ್ಗೆ ಅನುಭವಿ ತರಬೇತುದಾರರಿಂದ ಪ್ರಾಯೋಗಿಕ ತರಬೇತಿಯನ್ನು ಮೈಟೆಕ್ ಸಂಸ್ಥೆಯಲ್ಲಿ ನೀಡಲಾಗುತ್ತಿದ್ದು ಇದರ ಪ್ರಯೋಜನ ಪ್ರತಿಯೊಬ್ಬರು ಪಡೆದುಕೊಳ್ಳಿ ಎಂದು ಮೈ-ಟೆಕ್ ಐಟಿಐ ಕಾಲೇಜಿನ ಸಂಚಾಲಕ ಉದಯ ಆಚಾರ್ಯ ಹೇಳಿದರು.
ಅವರು ಜು.12ರಂದು ಉಡುಪಿ ಕಿನ್ನಿಮುಲ್ಕಿಯಲ್ಲಿರುವ ಮೈ-ಟೆಕ್ ಐಟಿಐ ಕಾಲೇಜಿನಲ್ಲಿ ಕೇಂದ್ರ ಸರಕಾರದ ಮಹಾತ್ವಕಾಂಕ್ಷೆ ಯೋಜನೆಯಾದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಇದರ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯ ಅಡಿಯಲ್ಲಿ ಏಮ್ಸ್ ಮೈಸೂರು ಇದರ ಜಂಟೀ ಆಶ್ರಯದಲ್ಲಿ ನಡೆದ ತರಬೇತಿ ಕಾರ್ಯಕ್ರಮದ ಸಮರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಕಿಟ್ ವಿತರಿಸಿ ಮಾತನಾಡಿದರು.
ಈ ಯೋಜನೆಯಲ್ಲಿ ರೀಟೆ„ಲ್ ಅಸೋಸಿಯೇಟ್ಸ್ ಕೋರ್ಸ್‌ನಲ್ಲಿ 400 ಗಂಟೆಗಳ ತರಬೇತಿಯನ್ನು ನಡೆಸಲಾಗಿದ್ದು, ಉಡುಪಿ ಜಿಲ್ಲೆಯ ಸುಮಾರು 48 ವಿದ್ಯಾರ್ಥಿಗಳು ಭಾಗವಹಿಸಿದ್ದರು. ನುರಿತ ಅನುಭವಿ ಶಿಕ್ಷಕ ವರ್ಗದಿಂದ ತರಬೇತಿಯನ್ನು ನೀಡಲಾಗಿದ್ದು ಸ್ಕಿಲ್ ಇಂಡಿಯಾ ಇದರಿಂದ ತರಬೇತಿಯನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಬ್ಯಾಗ್ ಹಾಗೂ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ತರಬೇತಿಯ ಸಂಯೋಜಕ ನಿಜಾಮುದ್ದೀನ್, ಶಿಕ್ಷಕರಾದ ಅನಿತಾ ಶ್ರೀಯಾನ್, ಶ್ರೀಲತಾ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.