ಜಿಎಸ್‌ಟಿ ವಿರೋಧಿಸಿ ಎಲ್‌ಐಸಿ ಪ್ರತಿನಿಧಿಗಳ ಪ್ರತಿಭಟನೆ
Team Udayavani, Jul 14, 2017, 12:14 PM IST
ಧಾರವಾಡ: ಕೇಂದ್ರ ಸರಕಾರದ ನೂತನ ತೆರಿಗೆ ಪದ್ಧತಿ (ಜಿಎಸ್‌ಟಿ) ವಿರೋಧಿಸಿ ಅಖೀಲ ಭಾರತ ಜೀವ ವಿಮಾ ಪ್ರತಿನಿಧಿಗಳ ಸಂಘಟನೆ ಕರೆಯ ಮೇರೆಗೆ ಎಲ್‌ಐಸಿ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ ಧಾರವಾಡ ಮುಖ್ಯ ಶಾಖೆಯ ಪ್ರತಿನಿಧಿಗಳಿಂದ ನಗರದ ಎಲ್‌ಐಸಿ ಪ್ರಧಾನ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.
ವಿಮಾ ಪ್ರತಿನಿಧಿಗಳ ಎಲ್ಲ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವದೆಹಲಿಯಲ್ಲಿ ಆಗಸ್ಟ್ 2ರಂದು ಪಾರ್ಲಿಮೆಂಟ್ ಎದುರು ಧರಣಿ ಹಮ್ಮಿಕೊಂಡಿದ್ದು, ಈ ಹೋರಾಟದ ಪೂರ್ವಭಾವಿಯಾಗಿ ಗುರುವಾರ ಬೆಳಿಗ್ಗೆ 10:30ರಿಂದ ಮಧ್ಯಾಹ್ನ 1:00 ಗಂಟೆವರೆಗೆ ಪ್ರತಿಭಟನಾ ಧರಣಿ ಕೈಗೊಳ್ಳಲಾಯಿತು.
ಎಲ್‌ಐಸಿ ಪಾಲಿಸಿಗಳ ಮೇಲೆ ಜಿಎಸ್‌ಟಿ ಮತ್ತು ಸೇವಾ ತೆರಿಗೆ ವಿಧಿಸಬಾರದು. ಜೀವ ವಿಮಾ ಪ್ರತಿನಿಧಿಗಳಿಗೆ ಉದ್ಯೋಗ ಭದ್ರತೆ ಒದಗಿಸಬೇಕು. ಕಲ್ಯಾಣ ನಿಧಿ, ಖಾತ್ರಿ ಪಿಂಚಣಿ ಮತ್ತು ಮೆಡಿಕ್ಲೇಮ್ ಎಲ್ಲ ಪ್ರತಿನಿಧಿಗಳಿಗೆ ಜಾರಿಗೆ ತರಬೇಕು. ಐಆರ್ ಡಿಎ ಜಾರಿಗೆ ತಂದ ಹೊಸ ಕಮೀಷನ್ ದರವನ್ನು ಎಲ್‌ಐಸಿ ಪ್ರತಿನಿಧಿಗಳಿಗೆ ಜಾರಿ ತರಬೇಕು.
ಕೇಂದ್ರ ಸರಕಾರ ಖಾಸಗಿಯಾಗಿ ಮಂಡಿಸಿದ ವಿಮಾ ಪ್ರತಿನಿಧಿಗಳ ಕಲ್ಯಾಣ ನಿಧಿ-ಉದ್ಯೋಗ ಭದ್ರತೆ ವಿಧೇಯಕ ಅನುಮೋದಿಸಬೇಕು ಎಂದು ಆಗ್ರಹಿಸಲಾಯಿತು. ಅಖೀಲ ಭಾರತ ಜೀವ ವಿಮಾ ಪ್ರತಿನಿಧಿಗಳ ಸಂಘಟನೆ ರಾಜ್ಯಾಧ್ಯಕ್ಷ ಎಸ್. ಎಫ್. ಸಿಂದಗಿ, ರಾಜ್ಯ ಉಪಾಧ್ಯಕ್ಷರೂ ಆಗಿರುವ ವಿಭಾಗ ಅಧ್ಯಕ್ಷ ಶಂಕರ ಕುಂಬಿ, ರಾಜ್ಯ ಉಪಾಧ್ಯಕ್ಷ ಆನಂದ ಅಮರಶೆಟ್ಟಿ, ಮುಖ್ಯ ಶಾಖೆ ಅಧ್ಯಕ್ಷ ಆರ್.ಎಸ್.ಫಟಪನದಿ, ಕೋಶಾಧ್ಯಕ್ಷ ಎಂ.ಎ.ಘಾಟವಾಲೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.