ಅಕ್ರಮ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಗ್ರಾ.ಪಂ.ಗೆ ಮುತ್ತಿಗೆ
Team Udayavani, Jul 15, 2017, 3:45 AM IST
ಕೋಟ: ಐರೋಡಿ ಗ್ರಾ.ಪಂ. ವ್ಯಾಪ್ತಿಯ ಕೋಡಿ ರಸ್ತೆಯಲ್ಲಿ ಅಕ್ರಮವಾಗಿ ಕಟ್ಟಡವೊಂದು ನಿರ್ಮಾಣ ಗೊಳ್ಳುತ್ತಿದ್ದು ಇದರ ಕಾಮಗಾರಿಯನ್ನು ತತ್‌ಕ್ಷಣ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜು.14ರಂದು ಐರೋಡಿ ಗ್ರಾ.ಪಂ.ಗೆ ಮುತ್ತಿಗೆ ಹಾಕಿದರು.
ಗ್ರಾ.ಪಂ. ವಿರುದ್ಧ ಆಕ್ರೋಶ
ಈ ಸಂದರ್ಭ ಸ್ಥಳದಲ್ಲಿ ಉಪಸ್ಥಿತರಿದ್ದ ಹೋರಾಟಗಾರರಾದ ರಜಾಕ್ ಮಾತನಾಡಿ, ಈ ಕಟ್ಟಡವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಳ್ಳುವ ಹುನ್ನಾರ ನಡೆಯುತ್ತಿದೆ. ಆದ್ದರಿಂದ ಕಾಗಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಬುಧವಾರ ಪಂಚಾಯತ್‌ಗೆ ಮನವಿ ಸಲ್ಲಿಸಿದ್ದೇವೆ ಹಾಗೂ ಅನಂತರ ಪೊಲೀಸರ ಮೂಲಕ ಕಾಮಗಾರಿ ನಿಲ್ಲಿಸಲಾಗಿದೆ. ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಈ ಕುರಿತು ಮನವಿ ಸಲ್ಲಿಸಿ ಕಾಮಗಾರಿ ಮುಂದುವರಿಸದಂತೆ ಕೋರಲಾಗಿದೆ. ವೈನ್‌ಶೋಪ್ ನಿರ್ಮಿಸುತ್ತಾರೆ ಎನ್ನುವ ಅನುಮಾನದಿಂದ ಅದಕ್ಕೂ ಕೂಡ ಪರವಾನಿಗೆ ನೀಡದಂತೆ ಕೋರಲಾಗಿದೆ. ಆದರೆ ಇದೀಗ ಗ್ರಾ.ಪಂ. ಅಧ್ಯಕ್ಷರು ಕಟ್ಟಡಕ್ಕೆ ತಾತ್ಕಾಲಿಕ ಪರವಾನಿಗೆ ನೀಡಿದ್ದೇನೆ ಎನ್ನುವ ಮೂಲಕ ಅಕ್ರಮಕ್ಕೆ ಸಹಕಾರ ನೀಡುತ್ತಿದ್ದಾರೆ ಎಂದರು ಹಾಗೂ ಈ ಸಂದರ್ಭ ಪಂಚಾಯತ್ ಕಚೇರಿಗೆ ಆಗಮಿಸಿದ ಅಧ್ಯಕ್ಷ ಮೊಸೇಸ್ ರೋಡಿಗ್ರಸ್ ಅವರ ವಿರುದ್ಧ ಗ್ರಾಮಸ್ಥರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಜಿ.ಪಂ. ಸದಸ್ಯರ ಭೇಟಿ
ಜಿ.ಪಂ.ಸದಸ್ಯ ರಾಘವೇಂದ್ರ ಕಾಂಚನ್ ಅವರು ಸ್ಥಳಕ್ಕಾಗಮಿಸಿ ಗ್ರಾಮಸ್ಥರ ವಿರೋಧವಿರುವುದರಿಂದ ಹಾಗೂ ಯಾವುದೇ ಪರವಾನಿಗೆ ನೀಡದಿರುವುದರಿಂದ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡುವುದು ಸರಿಯಲ್ಲ ಎಂದರು ಹಾಗೂ ಸಮಸ್ಯೆಯ ಕುರಿತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಗೆ ಕರೆ ನೀಡಿ ವಿವರಣೆ ನೀಡಿದರು. ತಾ.ಪಂ. ಸದಸ್ಯೆ ಜ್ಯೋತಿ ಉದಯ್ ಪೂಜಾರಿ ಕೂಡ ಸ್ಥಳದಲ್ಲಿ ಉಪಸ್ಥಿತರಿದ್ದು ಗ್ರಾಮಸ್ಥರ ಪರವಾಗಿ ಮಾತನಾಡಿದರು.
ತಾ.ಪಂ.ಸದಸ್ಯೆ ಜ್ಯೋತಿ ಉದಯ್ ಪೂಜಾರಿ, ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್, ಗ್ರಾ.ಪಂ. ಉಪಾಧ್ಯಕ್ಷೆ ಬೇಬಿ ಎಸ್. ಸಾಲಿಯಾನ್, ಗ್ರಾ.ಪಂ. ಮಾಜಿ ಅಧ್ಯಕ್ಷ ವಿಟuಲ ಪೂಜಾರಿ, ಬಬ್ಬುಸ್ವಾಮಿ ದೇವಸ್ಥಾನದ ಮುಖ್ಯಸ್ಥ ನಾರಾಯಣ ಮುಂತಾದವರು ಉಪಸ್ಥಿತರಿದ್ದರು.
ಕಾಮಗಾರಿ ಸ್ಥಗಿತಕ್ಕೆ ಆದೇಶ
ತಾ.ಪಂ. ಸಹಾಯಕ ನಿರ್ದೇಶಕ ಶಿವತ್ತಾಯ ಅವರು ಸ್ಥಳಕ್ಕಾಗಮಿಸಿ,ಗ್ರಾ.ಪಂ. ಅಧ್ಯಕ್ಷರಿಗೆ ಕಾನೂನು ಮೀರಿ ತಾತ್ಕಾಲಿಕ ಪರವಾನಿಗೆ ನೀಡುವ ಅವಕಾಶವಿಲ್ಲ. ಈ ಪ್ರಕರಣದಲ್ಲಿ ತಾತ್ಕಾಲಿಕ ಪರವಾನಿಗೆ ನೀಡಲು ಸಾಧ್ಯವಿಲ್ಲ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಕಾಮಗಾರಿಯನ್ನು ತತ್‌ಕ್ಷಣ ನಿಲ್ಲಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು ಹಾಗೂ ಪೊಲೀಸರು ಕಟ್ಟಡ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ತೆರಳಿ ಕಾಮಗಾರಿ ಸ್ಥಗಿತಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.