ಮುಂಗಾರು : ತ್ರಿವೇಣಿ ಸಂಗಮದಲ್ಲಿ ನೀರಿನ ಹರಿವು ಕಡಿಮೆ

Team Udayavani, Jul 15, 2017, 3:40 AM IST

Z-BHAGAMANDALA-1.jpg

ಜಿಲ್ಲೆಯಲ್ಲಿ ಉತ್ತಮ ಮಳೆ : ಭಾಗಮಂಡಲದಲ್ಲಿ ತುಂತುರು 
ಮಡಿಕೇರಿ:
ಸುಮಾರು ಒಂದೂವರೆ ತಿಂಗಳ ಕಾಲ ಮಳೆ, ಬಿಸಿಲಿನ ಕಣ್ಣಾಮುಚ್ಚಾಲೆಯಲ್ಲಿದ್ದ ಕಾವೇರಿನಾಡು ಕೊಡಗಿನಲ್ಲೀಗ ಮುಂಗಾರಿನ ವಾತಾವರಣ ಮೂಡಿದೆ. ಕಳೆದ ಎರಡು ದಿನಗಳಿಂದ ಮಡಿಕೇರಿ ತಾಲ್ಲಕು ಸೇರಿದಂತೆ ಜಿಲ್ಲೆಯ ಧೆಡೆ ಉತ್ತಮ ಮಳೆಯಾಗುತ್ತಿದೆ.

ಮಳೆಗಾಲ ಆರಂಭವಾಗುವುದಕ್ಕೂ ಮೊದಲು ಸುರಿದ ಅಕಾಲಿಕ ಮಳೆಯ ಅನಂತರ ಜೂನ್‌ ತಿಂಗಳಿನಲ್ಲಿ ಜಿಲ್ಲೆಯಲ್ಲಿ ನಿರೀಕ್ಷಿತ ಮಳೆಯಾಗಲಿಲ್ಲ. ಜುಲೈ ತಿಂಗಳಿನಲ್ಲಾದರೂ ಮಳೆ ಬರಬಹುದೆನ್ನುವ ನಿರೀಕ್ಷೆ ಮೂಡಿತ್ತಾದರೂ ಕಳೆದ 10 ದಿನಗಳಿಂದ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಇದೀಗ ದಿಢೀರ್‌ ಆಗಿ ಹವಾಗುಣ ಬದಲಾಗಿದ್ದು, ಸಾಧಾರಣ ಗಾಳಿ ಸಹಿತ ಮಳೆಯಾಗುತ್ತಿದೆ. ಮಡಿಕೇರಿಯಲ್ಲಿ ಉತ್ತಮ ಮಳೆಯಾಗುತ್ತಿದೆಯಾದರೂ ಅತಿ ಹೆಚ್ಚು ಮಳೆಯಾಗುವ ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಮಳೆ ಕ್ಷೀಣಿಸಿದೆ.
 
ಜುಲೈ ತಿಂಗಳಿನಲ್ಲಿ ತುಂಬಿ ಹರಿಯ ಬೇಕಾಗಿದ್ದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಇನ್ನೂ ಕೂಡ ನೀರಿನ ಹರಿವು ಹೆಚ್ಚಾಗಿಲ್ಲ. ತುಂತುರು ಮಳೆಯಷ್ಟೇ ಆಗುತ್ತಿದ್ದು, ಈ ಭಾಗದ ರೈತಾಪಿ ವರ್ಗದಲ್ಲಿ ಆತಂಕ ಮನೆ ಮಾಡಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದಿರುವ ಮಳೆಯ ಪ್ರಮಾಣ ಕಳೆದ ವರ್ಷಕ್ಕಿಂತ ಕಡಿಮೆ ಇದೆ. ಕಳೆದ ವರ್ಷ ಬರದಿಂದ ಕೊಡಗು ಜಿಲ್ಲೆ ಕೂಡ ತತ್ತರಿಸಿತ್ತು. ಈ ಬಾರಿ ಕೂಡ ಇದೇ ಪರಿಸ್ಥಿತಿ ಎದುರಾಗಬಹುದೆಂದು ಹೇಳಲಾಗುತ್ತಿದೆ. ಉತ್ತಮ ಮಳೆಗಾಗಿ ಪ್ರಾರ್ಥಿಸಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆಯನ್ನು ಕೂಡ ಭಕ್ತರು ಸಮರ್ಪಿಸುತ್ತಿದ್ದಾರೆ. 
 
ಕೊಡಗು ಜಿಲ್ಲೆಯ ಇಂದಿನ ಸರಾಸರಿ ಮಳೆ 3.83 ಮಿ.ಮೀ. ಕಳೆದ ವರ್ಷ ಇದೇ ದಿನ 21.32 ಮಿ.ಮೀ. ಮಳೆಯಾಗಿತ್ತು. ಜನವರಿ ಯಿಂದ ಇಲ್ಲಿಯವರೆಗಿನ ಮಳೆ 826.13 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1012.21 ಮಿ.ಮೀ.ಮಳೆಯಾಗಿತ್ತು. 
      
ಮಡಿಕೇರಿ ತಾಲೂಕಿನಲ್ಲಿ ಗುರುವಾರ ಸರಾಸರಿ ಮಳೆ 6.85 ಮಿ.ಮೀ. ಕಳೆದ ವರ್ಷ ಇದೇ ದಿನ 26.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1137.6 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1480.69 ಮಿ.ಮೀ. ಮಳೆಯಾಗಿತ್ತು. 

ವಿರಾಜಪೇಟೆ ತಾಲೂಕಿನಲ್ಲಿ ಗುರುವಾರ ಸರಾಸರಿ ಮಳೆ 0.35 ಮಿ.ಮೀ. ಕಳೆದ ವರ್ಷ ಇದೇ ದಿನ 17.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 722.98 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 746.27 ಮಿ.ಮೀ. ಮಳೆಯಾಗಿತ್ತು.  
 
ಸೋಮವಾರಪೇಟೆ ತಾಲೂಕಿನಲ್ಲಿ ಗುರುವಾರ ಸರಾಸರಿ ಮಳೆ 4.3 ಮಿ.ಮೀ. ಕಳೆದ ವರ್ಷ ಇದೇ ದಿನ 19.67 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 617.82 ಮಿ.ಮೀ.  ಕಳೆದ ವರ್ಷ ಇದೇ ಅವಧಿಯಲ್ಲಿ 809.66 ಮಿ.ಮೀ. ಅಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು 
ದಾಖಲಾಗಿರುವ ಮಳೆ ವಿವರ

ಮಡಿಕೇರಿ ಕಸಬಾ 19.8, ಸಂಪಾಜೆ 1.6, ಭಾಗಮಂಡಲ 6, ರಾಜಪೇಟೆ ಕಸಬಾ 1.6, ಅಮ್ಮತ್ತಿ 0.5, ಸೋಮವಾರಪೇಟೆ ಕಸಬಾ 5.8, ಶನಿವಾರಸಂತೆ 3.2, ಶಾಂತಳ್ಳಿ 6.4, ಕುಶಾಲನಗರ 2.4, ಸುಂಟಿಕೊಪ್ಪ 8 ಮಿ.ಮೀ. ಮಳೆಯಾಗಿದೆ. 
  
ಹಾರಂಗಿ ಜಲಾಶಯದ ನೀರಿನ ಮಟ್ಟ 
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2,834.62 ಅಡಿಗಳು, ಕಳೆದ ವರ್ಷ ಇದೇ ದಿನ 2,857.74 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 2.2 ಮಿ.ಮೀ. ಕಳೆದ ವರ್ಷ ಇದೇ ದಿನ 6.8 ಮಿ.ಮೀ., ಇಂದಿನ ನೀರಿನ ಒಳ ಹರಿವು 746 ಕ್ಯೂಸೆಕ್‌, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 5,851 ಕ್ಯೂಸೆಕ್‌.
 
ಟಾಪ್ ನ್ಯೂಸ್

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.