ಸಾಲ ಮನ್ನಾ ಹಣ: ಸೆಸ್ ಮೇಲೆ ಕಣ್ಣು; ಕಾರ್ಮಿಕ ಇಲಾಖೆಗೆ ಮೊರೆ
Team Udayavani, Jul 15, 2017, 3:50 AM IST
ಬೆಂಗಳೂರು: ರೈತರ ಬೆಳೆ ಸಾಲ ಮನ್ನಾ ಮಾಡಿ ಅನ್ನದಾತನ ಹೊರೆ ಇಳಿಸಿದ ರಾಜ್ಯ ಸರ್ಕಾರ, ಇದೀಗ ಎಂಟು ಸಾವಿರ ಕೋಟಿ ರೂ. ಹೊಂದಿಸಲು ಹರಸಾಹಸ ಪಡುತ್ತಿದ್ದು, ಕಾರ್ಮಿಕ ಇಲಾಖೆಯ ಹಣದ ಮೇಲೆ ಕಣ್ಣಿಟ್ಟಿದೆ.
ಅಂಕಿ ಅಂಶಗಳ ಪ್ರಕಾರ, ಸಾಲ ಮನ್ನಾ ನಿರ್ಧಾರದಿಂದಾಗಿ ರಾಜ್ಯ ಬೊಕ್ಕಸದ ಮೇಲೆ 8165 ಕೋಟಿ ರೂ. ಹೊರೆ ಬೀಳುತ್ತದೆ. ಇದನ್ನು ಹೊಂದಿಸಲು ಕಾರ್ಮಿಕ ಇಲಾಖೆಗೆ ಸೇರಿದ 5770 ಕೋಟಿ ರೂ.ಸೆಸ್ ಹಣವನ್ನು ಬಳಸಿಕೊಳ್ಳಲು ಮುಂದಾಗಿದೆ. ಇದರ ಜತೆಗೆ, ಸಹಕಾರ ಬ್ಯಾಂಕ್‌ಗಳಿಗೆ ಟಾನಿಕ್ ನೀಡುವ ಸಲುವಾಗಿ ಅಪೆಕ್ಸ್ ಬ್ಯಾಂಕುಗಳ ಮೂಲಕವೇ ವಹಿವಾಟು ನಡೆಸಲು ಒಪ್ಪಿಗೆ ಕೊಡಲು ಚಿಂತನೆ ನಡೆಸಿದೆ. ಅಂದರೆ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕಾರ್ಮಿಕ ಇಲಾಖೆ ಇಡುತ್ತಿರುವ ಠೇವಣಿಯನ್ನು ಮುಂದೆ ಅಪೆಕ್ಸ್ ಬ್ಯಾಂಕುಗಳಲ್ಲೇ ಇಡಲು ಅನುವು ಮಾಡಿಕೊಡುವುದಾಗಿದೆ.
ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಈ ಹೊರೆ ಇಳಿಸುವ ಸೂತ್ರಗಳ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಒಂದು ಹಂತದ ಚರ್ಚೆಯನ್ನು ನಡೆಸಿದ್ದು, ಸಾಧಕ-ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ತಮಗೆ ವರದಿ ನೀಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಂಕಷ್ಟ ಸೂತ್ರಗಳು
ರಾಜ್ಯ ಸರ್ಕಾರ ಪ್ರತಿ ವರ್ಷ ಕಟ್ಟಡ ನಿರ್ಮಾಣ ಮಾಡುವವರಿಂದ ಶೇ.1ರಷ್ಟು ಹಣವನ್ನು ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಸಂಗ್ರಹಿಸುತ್ತದೆ. ಆ ರೀತಿ ಸಂಗ್ರಹಿಸಿರುವ ಹಣ ಸುಮಾರು 5,770 ಕೋಟಿ ರೂ. ಕಾರ್ಮಿಕ ಇಲಾಖೆಯಲ್ಲಿ ಸಂಗ್ರಹವಾಗಿದೆ. ಈ ಹಣವನ್ನು ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿದೆ. ಅದರಿಂದ ಪ್ರತಿ ವರ್ಷ ಬರುವ ಬಡ್ಡಿ ಹಣ ಮತ್ತು ಹೊಸದಾಗಿ ಸಂಗ್ರಹವಾದ ಹಣದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಇಲಾಖೆ ಬಳಕೆ ಮಾಡುತ್ತದೆ. ಇದರಿಂದ ಪ್ರತಿ ವರ್ಷ ಕಾರ್ಮಿಕರ ಕಲ್ಯಾಣ ನಿಧಿಗೆ ಸುಮಾರು 700 ರಿಂದ 725 ಕೋಟಿ ರೂ. ಸಂಗ್ರಹವಾಗುತ್ತದೆ.
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಠೇವಣಿ ಇಟ್ಟು ಆ ಬ್ಯಾಂಕ್‌ಗಳಿಗೆ ಅನುಕೂಲ ಮಾಡಿಕೊಡುವ ಬದಲು ಅದೇ ಹಣವನ್ನು ರಾಜ್ಯ ಸರ್ಕಾರದ ಅಧೀನಕ್ಕೆ ಒಳ ಪಡುವ ಅಪೆಕ್ಸ್ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟು, ಈ ಹಣಕ್ಕೆ ಕಾರ್ಮಿಕ ಇಲಾಖೆಗೆ ಸರ್ಕಾರದ ಭದ್ರತೆ ನೀಡಿ, ಹಣವನ್ನು ಅಪೆಕ್ಸ್ ಬ್ಯಾಂಕ್ ತನಗೆ ಇಚ್ಚೆಗನುಸಾರವಾಗಿ ಬಳಸಿಕೊಳ್ಳಲು ಅವಕಾಶ ನೀಡುವುದು ಮೊದಲನೆ ತಂತ್ರಗಾರಿಕೆ.
ಅಪೆಕ್ಸ್ ಬ್ಯಾಂಕ್‌ನಲ್ಲಿ ಇಡುವ ಈ ಠೇವಣಿ ಹಣವನ್ನು ಸಾಲ ಮನ್ನಾದಿಂದ ಸಹಕಾರ ಬ್ಯಾಂಕ್‌ಗಳಿಗೆ ಆಗಿರುವ ಹೊರೆ ತಗ್ಗಿಸಲು ಬಳಸಿಕೊಳ್ಳುವುದು ತಂತ್ರಗಾರಿಕೆಯ ಮುಂದಿನ ಯೋಜನೆಯಾಗಿದೆ. ಇದರಿಂದ ಸರ್ಕಾರಕ್ಕೂ ಸಾಲ ಮನ್ನಾದ ಭಾರ ತಕ್ಷಣಕ್ಕೆ ಉಂಟಾಗುವುದಿಲ್ಲ. ಸಹಕಾರ ಬ್ಯಾಂಕ್‌ಗಳಿಗೂ ತೊಂದರೆಯಾಗುವುದಿಲ್ಲ ಎನ್ನುವುದು ಲೆಕ್ಕಾಚಾರವಾಗಿದೆ.
ಕಾರ್ಮಿಕ ಕಾನೂನು ತಿದ್ದುಪಡಿ?: ಕಾರ್ಮಿಕ ಇಲಾಖೆ ಕಾನೂನಿನ ಪ್ರಕಾರ ಇಲಾಖೆ ಸಂಗ್ರಹಿಸಿರುವ ಸೆಸ್ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಮಾತ್ರ ಠೇವಣಿ ಇಡಬೇಕೆಂದು ಸೆಕ್ಷನ್ 36 ರಲ್ಲಿ ಸ್ಪಷ್ಟವಾಗಿ ಹೇಳಿದೆ. ಹೀಗಾಗಿ ಈಗಿರುವ ಕಾನೂನಿನ ಪ್ರಕಾರ ಸೆಸ್ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಮಾತ್ರ ಠೇವಣಿ ಇಡಲು ಅವಕಾಶವಿದ್ದು, ಅದಕ್ಕೆ ತಿದ್ದುಪಡಿ ತಂದು ರಾಷ್ಟ್ರೀಕೃತ ಅಥವಾ ಸಹಕಾರಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡಲು ಅವಕಾಶ ದೊರೆಯುವಂತೆ ಮಾರ್ಪಾಡು ಮಾಡಿ ಹಣ ಬಳಕೆಗೆ ಹಾದಿ ಸುಗಮ ಮಾಡಿಕೊಳ್ಳುವ ಉದ್ದೇಶ ಹೊಂದಲಾಗಿದೆ.
ಸಾಲ ಮನ್ನಾ ಮಾಡಿರುವ 8,165 ಕೋಟಿ ರೂ. ಹೊಂದಾಣಿಕೆ ಮಾಡಲು ಹಣ ಹೊಂದಿಸಬೇಕಿದೆ. ಅದಕ್ಕೆ ಕಾರ್ಮಿಕ ಇಲಾಖೆ ಸಂಗ್ರಹಿಸುವ ಸೆಸ್ ಹಣ ಅಪೆಕ್ಸ್ ಬ್ಯಾಂಕ್‌ನಲ್ಲಿ ಠೇವಣಿ ಇಡಲು ಅವಕಾಶ ಮಾಡಿಕೊಟ್ಟರೆ, ಆ ಹಣವನ್ನು ಹಂತ ಹಂತವಾಗಿ ಸಾಲ ಮನ್ನಾ ತೀರಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಬಿಡುಗಡೆ ಮಾಡಿ ಬಳಸಿಕೊಳ್ಳಲು ಅನುಕೂಲವಾಗಲಿದೆ.
– ಕೆ.ಎನ್.ರಾಜಣ್ಣ, ಶಾಸಕ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ
– ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.