ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಟ್ರೀ ಪಾರ್ಕ್: ರೈ
Team Udayavani, Jul 15, 2017, 8:17 AM IST
ಮಂಗಳೂರು: ರಾಜ್ಯದ ಅರಣ್ಯ ಸಂಪತ್ತನ್ನು ವೃದ್ಧಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ವತಿಯಿಂದ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲೂ ಸಾಲು ಮರದ ತಿಮ್ಮಕ್ಕ ಹೆಸರಿನಲ್ಲಿ ಟ್ರೀ ಪಾರ್ಕ್ ನಿರ್ಮಾಣಕ್ಕೆ ಚಿಂತಿಸಲಾಗಿದೆ ಎಂದು ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಅವರು ಶುಕ್ರವಾರ ನಗರದ ಪುರಭವನದಲ್ಲಿ ಆಶ್ರಯದಲ್ಲಿ ನಡೆದ ನೀರಿಗಾಗಿ ಅರಣ್ಯ-2017 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜನಸಂಖ್ಯೆ ಹೆಚ್ಚಾದಂತೆ ಅರಣ್ಯದ ಪ್ರಮಾಣ ಕಡಿಮೆ ಯಾಗುತ್ತಿದೆ. ನಿಯಮದ ಪ್ರಕಾರ ಭೂ ಪ್ರದೇಶವೊಂದರ ಶೇ. 33ರಷ್ಟು ಭಾಗದಲ್ಲಿ ಅರಣ್ಯವಿರಬೇಕಿತ್ತು. ರಾಜ್ಯದಲ್ಲಿ ಅಂಕಿ-ಅಂಶಗಳ ಪ್ರಕಾರ ಪ್ರಸ್ತುತ ಶೇ. 22 ಮಾತ್ರ ಅರಣ್ಯವಿದೆ. ಡೆಹ್ರಾಡೂನ್ ಸಂಶೋಧನಾ ಸಂಸ್ಥೆಯ ಪ್ರಕಾರ ರಾಜ್ಯದಲ್ಲಿ 28,900 ಹೆಕ್ಟೇರ್ ಅರಣ್ಯ ಪ್ರದೇಶ ಹೆಚ್ಚಿದೆ ಎನ್ನುವುದು ಸಮಾಧಾನಕರ ವಿಚಾರ. ರಾಜ್ಯದ ಕಂಪೆನಿಗಳ ಸಿಎಸ್‌ಆರ್ ನಿಧಿಯಲ್ಲಿ ಶೇ. 2ರಷ್ಟು ಭಾಗವನ್ನು ಪರಿಸರ ಪೂರಕ ಕಾರ್ಯಕ್ರಮಗಳಿಗೆ ಉಪಯೋಗಿಸಲು ನಿರ್ದೇಶನ ನೀಡಲಾಗಿದೆ ಎಂದರು.
ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ| ಸಂಜಯ್ ಎಸ್. ಬಿಜೂರು ಪ್ರಸ್ತಾವನೆಗೈದು, ದ.ಕ. ಜಿಲ್ಲೆ ಯಲ್ಲಿ ಹೆಚ್ಚಿನ ಮಳೆಯಾಗಲು ಇಲ್ಲಿನ ಅರಣ್ಯ ಪ್ರದೇಶ ಗಳೇ ಕಾರಣವಾಗಿದ್ದರೂ, ಪ್ರಸ್ತುತ ದಿನಗಳಲ್ಲಿ ಶೇ. 18ರಷ್ಟು ಮಳೆ ಕಡಿಮೆಯಾಗಿದೆ. ಗಿಡಗಳನ್ನು ಬೆಳೆಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡಲಾಗುವ ಪ್ರೋತ್ಸಾಹ ಧನವನ್ನು 45 ರೂ.ನಿಂದ 100 ರೂ.ಗಳಿಗೆ ಹೆಚ್ಚಿಸಲಾಗಿದೆ. ಜಿಲ್ಲೆಯ 600ಕ್ಕೂ ಅಧಿಕ ರೈತರು ಇದರ ಪ್ರಯೋಜನ ಪಡೆದಿದ್ದಾರೆ ಎಂದರು.
ಶಾಸಕ ಜೆ.ಆರ್. ಲೋಬೊ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಬಿ.ಎ. ಕುಮಾರ್ ಹೆಗ್ಡೆ ಉಪನ್ಯಾಸ ನೀಡಿದರು. ಹಿರಿಯ ಕವಿ ಡಾ| ಕೆ.ಎಸ್. ನಿಸಾರ್ ಅಹಮ್ಮದ್, ಚಿತ್ರನಟ ನವೀನ್ ಡಿ. ಪಡೀಲ್ ಅವರನ್ನು ಗೌರವಿಸಲಾಯಿತು. ಅರಣ್ಯ ಸಂರಕ್ಷಣೆಗೆ ದುಡಿದ 6 ಮಂದಿಗೆ ಅರಣ್ಯ ಮಿತ್ರ ಪ್ರಶಸ್ತಿ ನೀಡಲಾಯಿತು. ಅರಣ್ಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದವರನ್ನು ಸಮ್ಮಾನಿಸಲಾಯಿತು.
ಪಶ್ಚಿಮ ಘಟ್ಟ ಕಾರ್ಯಪಡೆಯ ಅಧ್ಯಕ್ಷ ಎಸ್.ಚಂದ್ರಶೇಖರ್, ಶಾಸಕ ಮೊದಿನ್ ಬಾವಾ, ಮೇಯರ್ ಕವಿತಾ ಸನಿಲ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ಎಚ್. ಖಾದರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್. ರಾಡ್ರಿಗಸ್, ಗೌರವ ವನ್ಯಜೀವಿ ಪರಿಪಾಲಕ ಕಿರಣ್ ಬುಡ್ಲೆಗುತ್ತು, ವಿವಿಧ ಇಲಾಖಾಧಿಕಾರಿಗಳಾದ ಕಿಶನ್ ಸಿಂಗ್ ಸುಗಾರ, ಅನೂರ್ ರೆಡ್ಡಿ ವಿ, ನಾಗರಾಜ್, ಅನಿತಾ ಎಸ್. ಅರೆಕಲ್, ಜಯನರಸಿಂಹರಾಜ್, ಪ್ರಮುಖರಾದ ಮಮತಾ ಗಟ್ಟಿ, ಸಾಹುಲ್ ಹಮೀದ್, ಚಂದ್ರಹಾಸ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.
ಅರಣ್ಯ ಸಂಪತ್ತು ನಾಶ: ಆರೋಪ
ಕಾರ್ಯಕ್ರಮದ ಮಧ್ಯದಲ್ಲಿ ಎದ್ದು ನಿಂತ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯ ದರ್ಶಿ ಶಶಿಧರ ಶೆಟ್ಟಿ ಅವರು, ಎತ್ತಿನಹೊಳೆ ಯೋಜನೆ ಮತ್ತು ವಿವಿಧ ರಸ್ತೆ ಯೋಜನೆಗಳಿಗೆ ಅರಣ್ಯ ಸಂಪತ್ತು ನಾಶ ಮಾಡ ಲಾಗುತ್ತಿದೆ. ಪಶ್ಚಿಮ ಘಟ್ಟದ ಹಾನಿ ಯನ್ನು ತಡೆಯಬೇಕು ಎಂದು ತಿಳಿಸಿ ಸಚಿವರಿಗೆ ಮನವಿ ನೀಡಿದರು. ಎತ್ತಿನ ಹೊಳೆ ಯೋಜನೆ ಕಾನೂನು ರೀತಿ ಯಲ್ಲಿ ನಡೆ ಯುತ್ತಿದೆ. ಇದಕ್ಕೆ ಎಲ್ಲರೂ ಅನುಮತಿ ನೀಡಿ ದ್ದಾರೆ. ಯಾವುದೇ ಕಾರ್ಯಕ್ಕೂ ಕಾನೂನು ಪ್ರಕಾರವೇ ಮರ ಕಡಿಯ ಲಾಗು ತ್ತಿದೆ. ಪಶ್ಚಿಮ ವಾಹಿನಿ ಯೋಜನೆಗೆ ಇನ್ನೂ ಹೆಚ್ಚಿನ ಅನು ದಾನ ನೀಡ ಲಾಗುವುದು ಎಂದು ಸಚಿವರು ಪ್ರತಿಕ್ರಿಯಿಸಿದರು.
ತಿಮ್ಮಕ್ಕನಿಗೆ ಗೌರವಾರ್ಪಣೆ
ಸಮಾರಂಭದಲ್ಲಿ ವಿಶ್ವದ 100 ಪ್ರಭಾವಿ ಮಹಿಳೆಯರಲ್ಲಿ ಒಬ್ಬರಾಗಿರುವ, 106 ವರ್ಷದ ಡಾ| ಸಾಲುಮರದ ತಿಮ್ಮಕ್ಕ ಅವರನ್ನು ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.