ಕ್ವಾರಿಗಳ ಭದ್ರತೆಗೆ ನಿವೃತ್ತ ಯೋಧರು


Team Udayavani, Jul 15, 2017, 10:54 AM IST

Quari.jpg

ಬೆಂಗಳೂರು: ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ನಗರದ ಹೊರ ವಲಯದ ಕ್ವಾರಿಗಳಲ್ಲಿ ಸುರಿಯುತ್ತಿದ್ದು, ಕ್ವಾರಿಗಳ ಬಳಿ ಪ್ರತಿಭಟನೆ ಹಾಗೂ ಅತಿಕ್ರಮ ಪ್ರವೇಶ ನಿಯಂತ್ರಿಸಲು ಹಾಗೂ ಭದ್ರತೆಗಾಗಿ ನಿವೃತ್ತ ಯೋಧರನ್ನು ನೇಮಿಸಲಾಗಿದೆ.

ಬಿಬಿಎಂಪಿ ವತಿಯಿಂದ ನಿರ್ಮಿಸಿರುವ ಘನತ್ಯಾಜ್ಯ ಸಂಸ್ಕರಣೆ ಘಟಕಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಹಿನ್ನೆಲೆಯಲ್ಲಿ ತ್ಯಾಜ್ಯವನ್ನು ನಗರದ ಹೊರ ವಲಯದಲ್ಲಿರುವ ಕ್ವಾರಿಗಳಿಗೆ ಸುರಿಯಲಾಗುತ್ತಿದೆ. ಆದರೆ, ಪಾಲಿಕೆಯ ಅಧಿಕಾರಿಗಳು ಕ್ವಾರಿಗಳಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರೊಂದಿಗೆ ರಾತ್ರಿ ವೇಳೆ ಸಿಬ್ಬಂದಿ ವೇಳೆ ದಾಳಿ ನಡೆಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಭದ್ರತೆಗಾಗಿ ನಿವೃತ್ತ ಯೋಧರನ್ನು ನೇಮಿಸಿಕೊಳ್ಳಲಾಗಿದೆ.

ಬೆಳ್ಳಹಳ್ಳಿ, ಮಿಟ್ಟಗಾನಹಳ್ಳಿ ಹಾಗೂ ಬಾಗಲೂರು ಬಳಿಯ ಕ್ವಾರಿಗಳ ಬಳಿ ಭದ್ರತೆಗಾಗಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಮೂಲಕ 20 ನಿವೃತ್ತ ಯೋಧರನ್ನು ಭದ್ರತೆಗಾಗಿ ನೇಮಿಸಿಕೊಳ್ಳಲಾಗಿದೆ.ಅವರಿಗೆ ಪಾಲಿಕೆಯ ವತಿಯಿಂದ ತರಬೇತಿ ನೀಡಲಾಗಿದ್ದು, ಸೋಮವಾರದಿಂದ ಮೂರು ಪಾಳಿಯಲ್ಲಿ ಯೋಧರು ಕ್ವಾರಿಗಳ ಬಳಿ ಭದ್ರತಾ ಕಾರ್ಯ ನಿರ್ವಹಿಸಲಿದ್ದಾರೆ.

ಮಾರ್ಷಲ್‌ಗ‌ಳ ಒಪ್ಪದ ಕೌನ್ಸಿಲ್‌: ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರ ಹಾಗೂ ತ್ಯಾಜ್ಯ ವಿಂಗಡಣೆ ಮಾಡದವರಿಗೆ ದಂಡ ವಿಧಿಸುವ ಉದ್ದೇಶದಿಂದ ಪಾಲಿಕೆಯ ಘನತ್ಯಾಜ್ಯ ವಿಭಾಗ 208 ಮಾರ್ಷಲ್‌ಗ‌ಳನ್ನು ನೇಮಿಸಿಕೊಳ್ಳಲು ಯೋಜನೆ ರೂಪಿಸಿದೆ. ಆದರೆ, ಕೌನ್ಸಿಲ್‌ನಿಂದ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ ಕ್ವಾರಿಗಳ ಬಳಿ ಅತಿಕ್ರಮ ಪ್ರವೇಶ, ಅಕ್ರಮ ತ್ಯಾಜ್ಯ ವಿಲೇವಾರಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕಾಗಿ ನಿವೃತ್ತ ಸೇನಾ ಸಿಬ್ಬಂದಿಯನ್ನು ಭದ್ರತೆಗಾಗಿ ನೇಮಿಸಿಕೊಳ್ಳಲಾಗಿದೆ. 

ಬಿಬಿಎಂಪಿ ವತಿಯಿಂದ ತ್ಯಾಜ್ಯ ಸರಿಯುವ ಕ್ವಾರಿಗಳ ಬಳಿ ಅತಿಕ್ರಮ ಪ್ರವೇಶ ಹಾಗೂ ಅಕ್ರಮ ತ್ಯಾಜ್ಯ ವಿಲೇವಾರಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಮೂಲಕ 20 ನಿವೃತ್ತ ಯೋಧರನ್ನು ಭದ್ರತೆಗೆ ನೇಮಿಸಲಾಗಿದೆ. ವಾರ್ಡ್‌ ಮಟ್ಟದ ಮಾರ್ಷಲ್‌ಗ‌ಳಿಗೆ ಇದು ಸಂಬಂಧಿಸಿಲ್ಲ.
-ಎನ್‌. ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತ

ತ್ಯಾಜ್ಯವನ್ನು ತೆಗೆದುಕೊಂಡು ಹೋಗುವ ಕಾಂಪ್ಯಾಕ್ಟರ್‌ ಚಾಲಕರ ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸುತ್ತಿದ್ದಾರೆ. ಎಲ್ಲ ಸಂದರ್ಭಗಳಲ್ಲಿ ಪೊಲೀಸರು ರಕ್ಷಣೆ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪಾಲಿಕೆಯಿಂದಲೇ ಭದ್ರತೆಗೆ ನಿವೃತ್ತ ಯೋಧರನ್ನು ನೇಮಿಸಿಕೊಳ್ಳಲಾಗಿದೆ.
-ಸಫ್ರಾಜ್‌ ಖಾನ್‌, ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.