ಅಮರನಾಥ ಯಾತ್ರಾರ್ಥಿಗಳ ಹತ್ಯೆ ಖಂಡಿಸಿ ಮನವಿ


Team Udayavani, Jul 15, 2017, 3:05 PM IST

15-DV-2.jpg

ದಾವಣಗೆರೆ: ಅಮರನಾಥ ಯಾತ್ರೆಗೆ ತೆರಳಿದ ಭಕ್ತರ ಮೇಲೆ ಅಮಾನುಷವಾಗಿ ಗುಂಡಿನ ದಾಳಿ ನಡೆಸಿದ ಉಗ್ರರ ಕೃತ್ಯವನ್ನು ಕೋಮು ಸೌಹಾರ್ದ ವೇದಿಕೆ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದಾರೆ.

ಶುಕ್ರವಾರ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರು, ಅಮರನಾಥ ಯಾತ್ರಿಗಳ ಮೇಲಿನ ದಾಳಿ ಮತ್ತು ಕರಾವಳಿಯಲ್ಲಿ ನಡೆದ ಅಮಾಯಕ ಯುವಕನ ಹತ್ಯೆ ಘಟನೆಯನ್ನು ಖಂಡಿಸಿದರಲ್ಲದೆ, ಎರಡೂ ಘಟನೆಗಳಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಕೆಗೂ ಮುನ್ನ ಮಾತನಾಡಿದ ವೇದಿಕೆ ಗೌರವಾಧ್ಯಕ್ಷ ಅನೀಸ್‌ ಪಾಷ, ಅಮರನಾಥ ಯಾತ್ರಾರ್ಥಿಗಳ ಮೇಲೆ ಕಳೆದ 11ರಂದು ಉಗ್ರರು ಅಮಾನುಷ
ರೀತಿಯಲ್ಲಿ ಗುಂಡಿನ ದಾಳಿ ಮಾಡಿದ್ದು ಖಂಡನೀಯ. ಇದೇ ವೇಳೆ ಕರಾವಳಿಯಲ್ಲಿ ಮೂಲಭೂತವಾದಿ ಸಂಘಟನೆಗಳು, 
ರಾಜಕಾರಣಿಗಳಿಂದಾಗಿ ಅಮಾಯಕನೊಬ್ಬ ಬಲಿಯಾಗಿದ್ದು ನಿಜಕ್ಕೂ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಕೃತ್ಯವಾಗಿದೆ ಎಂದರು. 

ಇತ್ತೀಚಿನ ದಿನಗಳಲ್ಲಿ ಕರಾವಳಿ ಪ್ರದೇಶಗಳಲ್ಲಿ ಕೆಲವು ಮೂಲಭೂತವಾದಿ ಸಂಘಟನೆಗಳು ಹಾಗೂ ರಾಜಕೀಯ ವ್ಯಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ಸಾಮಾನ್ಯ ಯುವಕರನ್ನು ಬಲಿಪಶು ಮಾಡುತ್ತಿದ್ದರೆ, ಅತ್ತ ಪಾಕಿಸ್ತಾನ ಪ್ರೇರಿತ ಉಗ್ರವಾದಿಗಳು ಭಾರತ ದೇಶದೊಳಗೆ ನುಸುಳಿ ಬಂದು ಅಮಾನವೀಯ ಕೃತ್ಯವನ್ನು ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಇಂತಹ ಘಟನೆಗಳು ನಡೆಯದಂತೆ ತಡೆಗಟ್ಟಲು ಸೂಕ್ರ ಕ್ರಮ ವಹಿಸಬೇಕು ಎಂದರು.

ಇನ್ನು ಕೆಲವು ರಾಜಕಾರಣಿಗಳು ಅಮಾಯಕರ ಸಾವಿನ ಘಟನೆಗಳನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿರುವುದು ಅಸಹ್ಯಕರ ಸಂಗತಿ. ಇನ್ನು ಸಾಮಾನ್ಯ ವ್ಯಕ್ತಿಯೂ ಕೇಳಲು ಆಗದಂತಹ ಭಾಷೆಯನ್ನ ಬಳಸುತ್ತಿರುವ ರಾಜಕಾರಣಿಗಳ ನಡೆ ನಾಚಿಕೆಪಡುವಂತದ್ದು. ವೈರತ್ವ ಹುಟ್ಟಿಸುವಂತಹ ರಾಜಕೀಯ ವ್ಯಕ್ತಿಗಳು, ಮೂಲಭೂತವಾದಿ ಸಂಘಟನೆಗಳನ್ನು ಸರ್ಕಾರ ಆಯಾ ಕಾಲಕ್ಕೆ ನಿರ್ಬಂಧಿಸದ್ದಿದ್ದರೆ ಅಥವಾ ಮಟ್ಟ ಹಾಕದ್ದಿದ್ದರೆ ದೇಶದಲ್ಲಿ ಇಂತಹ ಘಟನೆ ನಡೆಯುತ್ತಿರಲಿಲ್ಲ. ಈಗಲಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಮೂಲಭೂತವಾದಿ ಸಂಘಟನೆಗಳನ್ನು ನಿಷೇಧಿಸಿದಲ್ಲಿ ಮುಂದಿನ ದಿನಗಳಲ್ಲಿ ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳಬಹುದು ಎಂದು ಅವರು ಹೇಳಿದರು.

ಬಲ್ಲೂರು ರವಿಕುಮಾರ್‌, ಹೆಗ್ಗೆರೆ ರಂಗಪ್ಪ, ಇಸ್ಮಾಯಿಲ್‌ ದೊಡ್ಡಮನಿ, ವಿಜಯಕುಮಾರ್‌, ಕಬ್ಬಳ್ಳಿ ಪರಸಪ್ಪ, ಖಾದರ್‌ ಬಾಷ, ಗುಮ್ಮನೂರು ರಾಮಚಂದ್ರಪ್ಪ, ಕರಿಬಸಪ್ಪ, ಈರನಾಯ್ಕ, ಅನ್ವರ್‌ ಮತ್ತಿತರರು ಮನವಿ ಸಲ್ಲಿಸುವ ವೇಳೆ ಇದ್ದರು.

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.