ಪರಪ್ಪನ ಅಗ್ರಹಾರಕ್ಕೆ ಸಿದ್ದರಾಮಯ್ಯರಿಂದ ಹಲವು ಭಾಗ್ಯ,ಅದು ಜೈಲಲ್ಲ!
Team Udayavani, Jul 15, 2017, 3:14 PM IST
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲು ಜೈಲಾಗಿ ಉಳಿದಿಲ್ಲ , ಅಲ್ಲಿನ ಖೈದಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಭಾಗ್ಯಗಳನ್ನು ಕರುಣಿಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ, ಮಾಜಿ ಗೃಹ ಸಚಿವ ಆರ್.ಅಶೋಕ್ ಕಿಡಿ ಕಾರಿದ್ದಾರೆ.
ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸರ್ಕಾರದ ವಿರುದ್ಧ ಕಿಡಿ ಕಾರಿದರು. ಡಿಐಜಿ ರೂಪಾ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾಗೆ ಐಷಾರಾಮಿ ಜೀವನ ನಡೆಸಲು 2 ಕೋಟಿ ರೂಪಾಯಿ ಲಂಚ ಪಡೆದಿರುವ ಕುರಿತು ವರದಿ ನೀಡಿದ್ದಾರೆ ಹೊರತು ಆರೋಪ ಮಾಡಿಲ್ಲ ಎಂದರು.
ಗೃಹ ಇಲಾಖೆಯೂ ಸಿದ್ದರಾಮಯ್ಯ ಅವರಂತೆ ನಿದ್ದೆ ಮಾಡುತ್ತಿದ್ದು , ಜೈಲಿನಲ್ಲಿ ಮದ್ಯಪಾನಕ್ಕೆ ಅವಕಾಶ ಇದೆ. ರೇವ್ ಪಾರ್ಟಿ ಮಾಡಲು ಅವಕಾಶ ಇದೆ. ಪ್ರಕರಣದ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಿ ತಪ್ಪು ಮಾಡಿದವರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ರೂಪಾ ಅವರಿಗೆ ನೊಟೀಸ್ ನೀಡಿರುವ ಕ್ರಮವನ್ನು ವಿರೋಧಿಸಿದ ಅವರು ಸರ್ಕಾರ ನೊಟೀಸ್ ನೀಡುವುದನ್ನು ಬಿಟ್ಟು ಆಕ್ರಮಗಳ ವಿರುದ್ಧ ಕ್ರಮಕೈಗೊಳ್ಳಲಿ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.